ಬೂತ್ ಪ್ರಮುಖರೊಂದಿಗೆ ಅಮಿತ್ ಶಾ ಚಿಂತನ-ಮಂಥನ
Team Udayavani, Aug 29, 2017, 9:40 AM IST
ಬೆಂಗಳೂರು: ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಬೂತ್ ಮಟ್ಟದಿಂದ ಸಂಘಟನೆ ಮಾಡಬೇಕು. ಮೊದಲು ತಳಮಟ್ಟದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ರಾಜ್ಯ ನಾಯಕರಿಗೆ ಹೇಳಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ತಾವೇ ನೇರವಾಗಿ ಬೂತ್ ಮಟ್ಟದ ಪ್ರಮುಖರೊಂದಿಗೆ ಚಿಂತನ-ಮಂಥನ ನಡೆಸಲು ತೀರ್ಮಾನಿಸಿದ್ದಾರೆ.
ಆ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಬೂತ್ ಮಟ್ಟದ ಪ್ರಮುಖರ ಸಮಾವೇಶ ಏರ್ಪಡಿಸುವಂತೆ ರಾಜ್ಯ ನಾಯಕರಿಗೆ ಸೂಚನೆ ನೀಡಿರುವ ಅವರು, ಪ್ರತಿ ಬೂತ್ ನಿಂದ 9 ಮಂದಿಯನ್ನು ಸಮಾವೇಶಕ್ಕೆ ಆಹ್ವಾನಿಸುವಂತೆ ತಿಳಿಸಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ತಾವೇ ಬಂದು ಬೂತ್ ಮಟ್ಟದ ಪ್ರಮುಖರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್, ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್, ಚುನಾವಣಾ ಸಹ ಉಸ್ತುವಾರಿ ಪಿಯೂಷ್ ಗೋಯೆಲ್ ಚಿಂತನ-ಮಂಥನ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ಚಿಂತನ-ಮಂಥನಕ್ಕೆ ಪ್ರತಿ ಬೂತ್‌ನಿಂದ ಬೂತ್ ಕಮಿಟಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಸೇರಿದಂತೆ 9 ಮಂದಿಯನ್ನು ಆಹ್ವಾನಿಸಲಾಗುತ್ತದೆ. ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು, ಇಬ್ಬರು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರು ಮತ್ತು ಇಬ್ಬರು ಹಿಂದುಳಿದ ವರ್ಗಕ್ಕೆ ಸೇರಿದವರಾಗಿರಬೇಕು ಎಂದು ಶಾ ತಿಳಿಸಿದ್ದಾರೆ ಎನ್ನಲಾಗಿದೆ.
ಇಂದೂ ಮುಂದುವರಿಯಲಿದೆ ಸಭೆ:ಪಕ್ಷ ಸಂಘಟನೆ ಮತ್ತು ಸ್ಥಳೀಯ ಮಟ್ಟದಲ್ಲಿ ಭಿನ್ನಮತ ಶಮನಕ್ಕಾಗಿ ಜಿಲ್ಲಾ ಪ್ರಮುಖರೊಂದಿಗೆ ಬಿಜೆಪಿ ಕೋರ್ ಕಮಿಟಿ ಸದಸ್ಯರು ನಡೆಸುತ್ತಿರುವ ಸಭೆ ಮಂಗಳವಾರ ಮುಂದುವರಿಯಲಿದೆ. ಮಂಗಳವಾರ ಬೆಳಗ್ಗಿನಿಂದ ರಾತ್ರಿಯವರೆಗೆ ಮೈಸೂ ರು ನಗರ, ಮೈಸೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಕೊಡಗು ಮತ್ತು ಹಾಸನ ಜಿಲ್ಲೆಗಳ ಪ್ರಮುಖರೊಂದಿಗೆ ಕೋರ್ ಕಮಿಟಿ ಸದಸ್ಯರು ಸಮಾಲೋಚನೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.