ಮೋದಿ ಮಾದರಿ ಆಡಳಿತ
ಬಿಎಸ್‌ವೈಗೆ ಶಾ ಶ್ಲಾಘನೆ ಜನಸೇವಕ ಸಮಾರೋಪ
Team Udayavani, Jan 18, 2021, 5:00 AM IST
ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ರವಿವಾರ ಬಿಎಸ್‌ವೈ ಅವರನ್ನು ಮೋದಿಯವರಿಗೆ ಹೋಲಿಸಿದ್ದಾರೆ. ಪ್ರಧಾನಿ ಮೋದಿ ಸ್ವತ್ಛ ಮತ್ತು ಉತ್ತಮ ಆಡಳಿತ ನೀಡುತ್ತಿದ್ದು, ಕರ್ನಾಟಕದಲ್ಲೂ ಯಡಿಯೂರಪ್ಪ ಜನಮೆಚ್ಚುವಂತೆ ಅಂಥದ್ದೇ ಆಡಳಿತ ನೀಡುತ್ತಿದ್ದಾರೆ ಎಂದು ಶ್ಲಾ ಸಿದ್ದಾರೆ.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರವಿವಾರ ನಡೆದ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಲಕ್ಷಾಂತರ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಡಿಯೂರಪ್ಪ ಸರಕಾರ ಉಳಿದ ರಾಜ್ಯಗಳಿಗೆ ಮಾದರಿ. ಕ್ರಾಂತಿಕಾರಕ ಕ್ರಮಗಳಿಂದ ದೇಶದ ಜನರಲ್ಲಿ ಮೋದಿ ಆಡಳಿತದ ಬಗ್ಗೆ ವಿಶ್ವಾಸ ಮೂಡಿದೆ. ಕರ್ನಾಟಕದಲ್ಲೂ ಯಡಿಯೂರಪ್ಪ ನೇತೃತ್ವದ ಸರಕಾರದಿಂದ ಪ್ರಗತಿ ಕಾಣುತ್ತಿದೆ. ಜನರಲ್ಲಿ ಹೊಸ ಭರವಸೆ ಮೂಡಿದೆ. ಗ್ರಾ.ಪಂ. ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಾವಿರಾರು ಸದಸ್ಯರು ಆಯ್ಕೆಯಾಗಿರುವುದೇ ಇದಕ್ಕೆ ಸಾಕ್ಷಿ. ಯಡಿಯೂರಪ್ಪ ಅವರಿಗೆ ಮನಃಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ. ಅವರ ಅನುಭವದ ನೇತೃತ್ವದಲ್ಲಿ ಕರ್ನಾಟಕವು ಕೊರೊನಾ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ ಎಂದರು.
ಕಾಂಗ್ರೆಸ್ ಏನು ಮಾಡಿದೆ? :
10 ವರ್ಷಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್ ಕರ್ನಾಟಕಕ್ಕೆ ಏನು ಕೊಡುಗೆ ನೀಡಿದೆ, ಎಷ್ಟು ಹಣ ಬಿಡುಗಡೆ ಮಾಡಿದೆ ಎಂಬುದನ್ನು ಅಂಕಿ-ಅಂಶಗಳ ಸಮೇತ ಬಹಿರಂಗಪಡಿಸಲಿ. ಕರ್ನಾಟಕಕ್ಕೆ ನೀಡಿದ ಕೊಡುಗೆ ಬಗ್ಗೆ ಕಾಂಗ್ರೆಸ್ ಬಳಿ ದಾಖಲೆಗಳೇ ಇಲ್ಲ. ಆದರೆ ನಮ್ಮ ಬಳಿ ಇದೆ. ಕಾಂಗ್ರೆಸ್ ಕರ್ನಾಟಕಕ್ಕೆ 13ನೇ ಹಣಕಾಸು ಯೋಜನೆಯಡಿ 88,583 ಕೋ.ರೂ. ಹಣ ನೀಡಿದೆ. ಆದರೆ ಮೋದಿ ಸರಕಾರ 2014ರಿಂದ 2019ರ ವರೆಗೆ ಕರ್ನಾಟಕಕ್ಕೆ 2,19,506 ಕೋ.ರೂ. ನೀಡಿದೆ ಎಂದರು.
ಮೋದಿ ನೇತೃತ್ವದಲ್ಲಿ 7 ಕೋಟಿ ಮನೆಗಳ ಸದಸ್ಯರಿಗೆ ಬ್ಯಾಂಕ್ ಖಾತೆ ತೆರೆಯಲಾಯಿತು. 13 ಕೋಟಿ ಮನೆಗಳಿಗೆ ಉಜ್ವಲ ಗ್ಯಾಸ್ ಒದಗಿಸಲಾಯಿತು. 60 ಕೋಟಿ ಜನರಿಗೆ ಆಯುಷ್ಮಾನ್ ಯೋಜನೆಯಡಿ ಆರೋಗ್ಯ ಸೌಲಭ್ಯ ಒದಗಿಸಲಾಯಿತು. 2022ರ ವೇಳೆಗೆ ಮನೆ ಮನೆಗೆ ಕುಡಿಯುವ ನೀರು ಒದಗಿಸುವ ಸಂಕಲ್ಪ ಮಾಡಲಾಗಿದೆ ಎಂದರು.
ಮೋದಿ ಸರಕಾರ 370ನೇ ವಿಧಿಯನ್ನು ಕಿತ್ತೂಗೆಯಿತು. ಪರಿಣಾಮವಾಗಿ ಜಮ್ಮು-ಕಾಶ್ಮೀರ ದಲ್ಲಿ ಈಗ ಸಂಪೂರ್ಣ ಶಾಂತಿ ನೆಲೆಸಿದೆ. ಮೋದಿ ಎರಡನೇ ಬಾರಿಗೆ ಪ್ರಧಾನಿಯಾದಾಗ ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದರು. ಇದೆಲ್ಲ ಕಾಂಗ್ರೆಸ್‌ನಿಂದ ಏಕೆ ಸಾಧ್ಯವಾಗಲಿಲ್ಲ ಎಂದು ವಾಗ್ಧಾಳಿ ನಡೆಸಿದರು.
ಹೆದರದೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ
ಮೋದಿ ಸರಕಾರ ಕೋವಿಡ್ ಮಹಾಮಾರಿಯನ್ನು ಸಮರ್ಥವಾಗಿ ನಿಯಂತ್ರಿಸಿದೆ. ಆದರೆ ಇದನ್ನೂ ಕಾಂಗ್ರೆಸ್‌ನವರಿಗೆ ಸಹಿಸಿಕೊಳ್ಳಲು ಆಗಲಿಲ್ಲ. ನಮ್ಮ ವಿಜ್ಞಾನಿಗಳು ಶ್ರಮಪಟ್ಟು ಲಸಿಕೆ ತಯಾರಿಸಿದರೆ ಅಲ್ಲೂ ಅನುಮಾನ ವ್ಯಕ್ತಪಡಿಸಿದರು. ಇದು ಕಾಂಗ್ರೆಸ್ ಸಂಸ್ಕೃತಿ. ಲಸಿಕೆಯ ವಿಚಾರದಲ್ಲಿ ಕಾಂಗ್ರೆಸ್ ಮಾತನ್ನು ನಂಬಬೇಡಿ. ಅಂಜಿಕೆಯಿಲ್ಲದೇ ಲಸಿಕೆ ಹಾಕಿಸಿಕೊಳ್ಳಿ. ಕರ್ನಾಟಕದಲ್ಲಿ ಆತ್ಮನಿರ್ಭರ ಯೋಜನೆಯಡಿ ಅನೇಕ ಘಟಕಗಳು ನಿರ್ಮಾಣವಾಗಿವೆ. ಲಕ್ಷಾಂತರ ಜನರಿಗೆ ಉದ್ಯೋಗ ಸಿಕ್ಕಿದೆ. ಕೊಪ್ಪಳದಲ್ಲಿ ನಿರ್ಮಾಣವಾಗಲಿರುವ ಆಟಿಕೆ ತಯಾರಿಕೆ ಘಟಕ ಚೀನದ ಮೇಲಿನ ಅವಲಂಬನೆಯನ್ನು ದೂರ ಮಾಡಲಿದೆ ಎಂದು ಶಾ ಹೇಳಿದರು.
ನಗು ಮುಖದ ಅಂಗಡಿ ಮರೆಯಲಾಗದು :
ಸುರೇಶ ಅಂಗಡಿ ಅವರನ್ನು ನೆನಪಿಸಿಕೊಂಡ ಅಮಿತ್ ಶಾ, ಸದಾ ನಗುಮುಖ ಹೊಂದಿದ್ದ ಅವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಕ್ರಿಯಾಶೀಲರಾಗಿದ್ದ ಅವರು ಮುಂದೆ ದಿಗ್ಗಜ ನಾಯಕರಾಗುವ ಎಲ್ಲ ಅವಕಾಶ ಹೊಂದಿದ್ದರು. ಆದರೆ ವಿಧಿಯ ಆಟವೇ ಬೇರೆಯಾಗಿತ್ತು ಎಂದು ಭಾವುಕರಾದರು.
ಕರ್ನಾಟಕದಲ್ಲಿ ಬಿಜೆಪಿ :
ಮತ್ತಷ್ಟು ಗಟ್ಟಿಯಾಗಿದೆ. ಮುಂಬರುವ ತಾ.ಪಂ., ಜಿ.ಪಂ.ಚುನಾವಣೆ ಯಲ್ಲೂ ಬಿಜೆಪಿ ಶೇ. 75ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ. ಮುಂದಿನ ವಿಧಾನಸಭೆ ಚುನಾವಣೆ ಯಲ್ಲಿ 150 ಸ್ಥಾನ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ. – ಅಮಿತ್ ಶಾ, ಕೇಂದ್ರ ಗೃಹ ಸಚಿವ
ಹಣಬಲ, ತೋಳ್ಬಲದಿಂದ ಚುನಾವಣೆ ಗೆಲ್ಲಬಹುದು ಎಂದು ಕಾಂಗ್ರೆಸ್ ಕನಸು ಕಾಣುತ್ತಿತ್ತು. ಆದರೆ ಇದೆಲ್ಲವನ್ನೂ ಮೆಟ್ಟಿನಿಂತು ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತಿದೆ. -ಬಿ.ಎಸ್. ಯ ಡಿಯೂರಪ್ಪ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.