ರಾಜಕೀಯ ವ್ಯವಹಾರಗಳ ಸಮಿತಿ ಬಗ್ಗೆ ಅಮಿತ್ ಅತೃಪ್ತಿ
Team Udayavani, Aug 14, 2017, 9:15 AM IST
ಬೆಂಗಳೂರು: ಭಾನುವಾರ ಬಿಜೆಪಿ ರಾಜಕೀಯ ವ್ಯವಹಾರಗಳ ಸಮಿತಿ ಸದಸ್ಯರ ಜತೆ ಸಭೆ ನಡೆಸಿದ ಅಮಿತ್ ಶಾ, ಕಳೆದ ವಿಧಾನಸಭೆಯಲ್ಲಿ ಪಕ್ಷ ಸೋಲಲು ಕಾರಣಗಳು ಮತ್ತು ಮುಂದಿನ ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಅಲ್ಲದೆ, ಸಮಿತಿಯ ಕಾರ್ಯವೈಖರಿ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ಈ ಹಿಂದಿನ 3 ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಪಡೆದ ಮತಗಳ ಪ್ರಮಾಣ, ಅದು ಏರುಪೇರಾಗಲು ಕಾರಣಗಳೇನು? 2008ರ ಚುನಾವಣೆಯಲ್ಲಿ 110 ಸ್ಥಾನಗಳನ್ನು ಗೆದ್ದು ನಂತರ ಸುಮಾರು ಹತ್ತು ಸ್ಥಾನಗಳನ್ನು ಪಡೆದುಕೊಂಡಿದ್ದ ಪಕ್ಷ 2013ರ ವಿಧಾನಸಭೆ ಚುನಾವಣೆಯಲ್ಲಿ 40 ಸ್ಥಾನಗಳಿಗೆ ಇಳಿಯಲು ಕಾರಣವೇನು ಎಂಬಿತ್ಯಾದಿ ಮಾಹಿತಿಗಳನ್ನು ಸಮಿತಿ ಸದಸ್ಯರಿಂದ ಪಡೆದಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸಮಿತಿ ಸದಸ್ಯರು ಸೋಲಿನ ಕಾರಣಗಳನ್ನು ವಿವರಿಸಲು ಮುಂದಾದಾಗ ಮಧ್ಯಪ್ರವೇಶಿಸಿದ ಶಾ, ರಾಜಕೀಯ ವ್ಯವಹಾರಗಳನ್ನು ನೋಡಿಕೊಳ್ಳಲೆಂದೇ ಸಮಿತಿ ಇದೆ. ಚುನಾವಣೆಗೆ ಮೊದಲೇ ಸಮಸ್ಯೆಗಳನ್ನು ಬಗೆಹರಿಸಿ ಗೆಲ್ಲಲು ವೇದಿಕೆ ಸೃಷ್ಟಿ ಮಾಡುವುದು ಸಮಿತಿಯ ಜವಾಬ್ದಾರಿ. ನೀವು ಸರಿಯಾಗಿ ಕೆಲಸ ಮಾಡಿದ್ದರೆ ಪಕ್ಷ ಅಷ್ಟೊಂದು ಹೀನಾಯ ಮಟ್ಟಕ್ಕೆ ಇಳಿಯುತ್ತಿರಲಿಲ್ಲ ಎಂದು ಕಿಡಿಕಾರಿದರು ಎಂದು ಹೇಳಲಾಗಿದೆ. ಸಮಿತಿ ಮುಂಬರುವ ವಿಧಾನಸಭಾ ಚುನಾವಣೆಗೆ ಕೈಗೊಂಡಿರುವ ಸಿದ್ಧತೆಗಳ ಬಗ್ಗೆಯೂ ಅತೃಪ್ತಿ ವ್ಯಕ್ತಪಡಿಸಿದ ಶಾ, ತಕ್ಷಣದಿಂದ ಸಕ್ರಿಯವಾಗಿ ಕೆಲಸ ಮಾಡಬೇಕು. ಇಲ್ಲದೇ ಇದ್ದರೆ ಸಮಿತಿಯಲ್ಲಿ ಬದಲಾವಣೆ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದರು ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.