![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Apr 11, 2023, 7:35 AM IST
ಬೆಂಗಳೂರು: “ನಂದಿನಿ ವರ್ಸಸ್ ಅಮುಲ್’ ವಿವಾದ ಹೊಸ ತಿರುವು ಪಡೆದುಕೊಂಡಿದ್ದು, “ಅಮುಲ್ ಉತ್ಪನ್ನಗಳು ರಾಜ್ಯವನ್ನು ಪ್ರವೇಶಿಸಿದ್ದು ಈಗ ಬೊಬ್ಬೆ ಹಾಕುತ್ತಿರುವ ಕಾಂಗ್ರೆಸ್ ಅಧಿಕಾರಾವಧಿಯಲ್ಲೇ’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಂತೋಷ್, ಅಮುಲ್ ಹೆಜ್ಜೆಗಳು ಕರ್ನಾಟಕದಲ್ಲಿ ಮೂಡಿದ್ದು 2017ರಲ್ಲಿ. ಆಗ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವೇ ಇತ್ತು. ವಿಚಿತ್ರವೆಂದರೆ ಈಗ ಅವರು ಮತ್ತು ಅವರ ಕಾಂಗ್ರೆಸ್ ನಾಯಕರು ಅದೇ ಅಮುಲ್ ಹಾಗೂ ಅದರ ಉತ್ಪನ್ನಗಳನ್ನು ಕರ್ನಾಟಕದಲ್ಲಿ ಮಾರಾಟಕ್ಕೆ ಬಿಜೆಪಿ ಅವಕಾಶ ಕಲ್ಪಿಸಿದೆ ಎಂದು ಬೇಕಾಬಿಟ್ಟಿ ಹೇಳಿಕೆ ನೀಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ತಮ್ಮ ಈ ಹೇಳಿಕೆಗೆ ಪೂರಕವಾಗಿ ಸಂತೋಷ್ ಅವರು 2017ರ ಜೂನ್ 15ರಂದು ನಡೆದ ಅಮೂಲ್‌ನ 43ನೇ ಸಾಮಾನ್ಯ ಸಭೆಯಲ್ಲಿನ ನಡಾವಳಿಯ ಕೆಲವು ಅಂಶಗಳನ್ನು ಪೋಸ್ಟ್ ಮಾಡಿದ್ದಾರೆ. ಇದರೊಂದಿಗೆ ಈ ವಿವಾದವು ಕಾಂಗ್ರೆಸ್‌ಗೆà ತಿರುಗುಬಾಣ ಆಗುವ ಸಾಧ್ಯತೆ ಇದೆ.
ವಿಪಕ್ಷಗಳ ಕೀಳು ರಾಜಕೀಯ: ಸಿಎಂ
ಮತ್ತೊಂದೆಡೆ ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಂದಿನಿಯ ಬ್ರ್ಯಾಂಡ್ ಮೌಲ್ಯ ಎಷ್ಟರಮಟ್ಟಿಗೆ ಹೆಚ್ಚಿದೆ ಎಂಬುದು ಅಂಕಿಅಂಶಗಳನ್ನು ಗಮನಿಸಿದರೆ ಗೊತ್ತಾಗುತ್ತದೆ. ಆದರೆ ಕಾಂಗ್ರೆಸ್ ಇಲ್ಲಸಲ್ಲದ ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಗೊಂದಲ ಉಂಟುಮಾಡುವ ಕೀಳು ರಾಜಕೀಯವನ್ನು ಉಗ್ರವಾಗಿ ಖಂಡಿಸುತ್ತೇನೆ’ ಎಂದು ಹೇಳಿದ್ದಾರೆ. 2018ರಲ್ಲಿ ನಿತ್ಯ 84 ಲಕ್ಷ ಲೀಟರ್ ನಂದಿನಿ ಹಾಲು ಉತ್ಪಾದನೆ ಆಗುತ್ತಿತ್ತು. ಪ್ರಸ್ತುತ 94 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದೆ. ನಂದಿನಿ ಹಾಲಿಗೆ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಇದೆ. ಎಲ್ಲ ರಾಜ್ಯಗಳಲ್ಲೂ ದೊರೆಯುತ್ತಿದೆ. ಹೊರ ದೇಶಗಳಿಗೂ ರಫ್ತಾಗುತ್ತಿದೆ. ಆದರೆ ಕಾಂಗ್ರೆಸ್ ಸುಳ್ಳು ಸುದ್ದಿ ಹರಿಬಿಡುತ್ತಿದೆ ಎಂದಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.