ಸಮಾನ ವೇತನಕ್ಕೆ ಪ್ರಾಮಾಣಿಕ ಪ್ರಯತ್ನ
Team Udayavani, Feb 4, 2019, 12:56 AM IST
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯ ಶ್ರೇಣಿ ಹಾಗೂ ವೇತನಕ್ಕೆ ಅನುಗುಣವಾಗಿ ಪೊಲೀಸ್ ಇಲಾಖೆಯ ಸಿಬ್ಬಂದಿಗೂ ಸಮಾನ ಶ್ರೇಣಿ ಹಾಗೂ ಸಮಾನ ವೇತನ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಪೊಲೀಸ್ ಸಿಬ್ಬಂದಿ ವೇತನ ಪರಿಷ್ಕರಣೆ ಕುರಿತಂತೆ ‘ಔರಾದ್ಕರ್ ಸಮಿತಿ ವರದಿ ಜಾರಿ ಅನುಮಾನ’ ಎಂಬ ಶೀರ್ಷಿಕೆ ಅಡಿ ‘ಉದಯವಾಣಿ’ ಭಾನುವಾರ ಪ್ರಕಟಿಸಿದ ವಿಶೇಷ ವರದಿಗೆ ಪ್ರತಿಕ್ರಿಯಿಸಿದ ಅವರು, ಈ ಬಾರಿಯ ಬಜೆಟ್‌ನಲ್ಲಿ ವಿಶೇಷ ಭತ್ಯೆಗೆ ಹೆಚ್ಚು ಒತ್ತು ನೀಡುವುದಕ್ಕಿಂತ ಪ್ರಮುಖವಾಗಿ ವೇತನ ಶ್ರೇಣಿ ಸಮಾನತೆಗೆ ಹೆಚ್ಚು ಆದ್ಯತೆ ನೀಡಲು ಪ್ರಯತ್ನಿಸಲಾಗುತ್ತಿದೆ. ಇತರ ಇಲಾಖೆಯಲ್ಲಿ ಅದೇ ಶ್ರೇಣಿಯಲ್ಲಿರುವ ಸಿಬ್ಬಂದಿ ಪಡೆಯುತ್ತಿರುವ ವೇತನವನ್ನು ಪೊಲೀಸ್ ಇಲಾಖೆ ಸಿಬ್ಬಂದಿಗೂ ಕಲ್ಪಿಸಿ ಸಮಾನತೆ ಕಾಪಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ರಾಘವೇಂದ್ರ ಔರಾದ್ಕರ್ ನೇತೃತ್ವದ ಸಮಿತಿ ಪ್ರಮುಖವಾಗಿ ಸರ್ಕಾರದ ಇತರ ಇಲಾಖೆಗಳ ಸಿಬ್ಬಂದಿಯ ಶ್ರೇಣಿ ಹಾಗೂ ವೇತನ ಆಧರಿಸಿ ಪೊಲೀಸ್ ಸಿಬ್ಬಂದಿಗೂ ಶ್ರೇಣಿ ಆಧಾರಿತವಾಗಿ ಸಮಾನ ವೇತನ ನೀಡಬೇಕು ಎಂದು ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಶಿಫಾರಸು ಮಾಡಿತ್ತು.
ಇತ್ತೀಚೆಗೆ ಹಿರಿಯ ಐಪಿಎಸ್ ಅಧಿಕಾರಿಗಳ ಜತೆ ಸಭೆ ನಡೆಸಿದ್ದ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು, ಹಣಕಾಸಿನ ಕೊರತೆ ಹಿನ್ನೆಲೆಯಲ್ಲಿ ಸಮಿತಿಯ ಎಲ್ಲ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಲು ಸಾಧ್ಯವಾಗುವುದಿಲ್ಲ. ಆದರೆ, ಪ್ರಸ್ತುತ ನೀಡುತ್ತಿರುವ ವಿಶೇಷ ಭತ್ಯೆಯನ್ನು ಶೇಕಡಾ ಪ್ರಮಾಣದಲ್ಲಿ (ಅಂದಾಜು 500 ರಿಂದ 700 ರೂ.) ಹೆಚ್ಚಳ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಬಹುದು ಎಂದು ಹೇಳಿರುವುದು ಮೂಲಗಳಿಂದ ತಿಳಿದು ಬಂದಿತ್ತು. ಆ ಮಾಹಿತಿ ಆಧರಿಸಿ ‘ಉದಯವಾಣಿ’ ಭಾನುವಾರ ವಿಶೇಷ ವರದಿ ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.