ಊರಿಗೆ ಮರಳಲು ಒಂದು ಅವಕಾಶ
ಒಂದು ಬಾರಿ ಅಂತರ್ ಜಿಲ್ಲಾ , ರಾಜ್ಯ ಅನಿವಾರ್ಯ ಪ್ರಯಾಣಕ್ಕೆ ಅನುಮತಿ ಸಚಿವ ಸಂಪುಟ ಸಭೆ ನಿರ್ಧಾರ
Team Udayavani, May 1, 2020, 6:00 AM IST
ಬೆಂಗಳೂರು: ಅಂತರ್ ಜಿಲ್ಲೆ ಮತ್ತು ಅಂತಾರಾಜ್ಯ ಸಂಚಾರಕ್ಕೆ ಒಂದು ಬಾರಿಯ ಅವಕಾಶ ಕಲ್ಪಿಸಲು ಸರಕಾರ ನಿರ್ಧರಿಸಿದ್ದು, ಲಾಕ್‌ಡೌನ್ ಅವಧಿಯಲ್ಲಿ ಹೊರ ಊರುಗಳಲ್ಲಿ ಸಿಕ್ಕಿಹಾಕಿ ಕೊಂಡಿರುವ ಜನತೆಗೆ ಸಿಹಿ ಸುದ್ದಿ ಒದಗಿಸಿದೆ.
ವಿವಿಧ ಕಾರಣಗಳಿಂದಾಗಿ ಬೇರೆ ಊರುಗಳಲ್ಲಿ ಉಳಿದುಕೊಂಡವರು, ವಲಸೆ ಕಾರ್ಮಿಕರು, ಬೇರೆ ರಾಜ್ಯಗಳ ವಿದ್ಯಾರ್ಥಿಗಳು, ಪ್ರವಾಸಿಗರು ಈ ಅವಕಾಶವನ್ನು ಬಳಸಿಕೊಳ್ಳಬಹುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಗುರುವಾರ ನಡೆದ ಸಂಪುಟ ಸಭೆಯ ಅನಂತರ ಅವರು ಈ ಮಾಹಿತಿ ನೀಡಿದರು. ಕೇಂದ್ರ ಸರಕಾರದ ಮಾರ್ಗದರ್ಶಿ ಸೂತ್ರ ದನ್ವಯ ಈ ನಿರ್ಧಾರ ಕೈಗೊ ಳ್ಳಲು ಸಂಪುಟ ನಿರ್ಧರಿಸಿದೆ.
ಅಂತರ್ ಜಿಲ್ಲೆ ಮತ್ತು ಇತರ ರಾಜ್ಯಗಳಿಗೆ ತೆರಳಲು ಇಚ್ಛಿಸುವವರಿಗೆ ಸರಕಾರ ಸಾರಿಗೆ ವ್ಯವಸ್ಥೆ ಕಲ್ಪಿಸುವು ದಿಲ್ಲ. ಅವರು ಟ್ಯಾಕ್ಸಿ, ಕಾರು ಇತ್ಯಾದಿ ಸ್ವಂತ ವ್ಯವಸ್ಥೆ ಮಾಡಿ ಕೊಳ್ಳಬೇಕು. ಹೆಚ್ಚು ಜನರಿದ್ದ ಸಂದರ್ಭ ಮನವಿ ಮಾಡಿದರೆ ಕೆಎಸ್ಸಾರ್ಟಿಸಿ ಬಸ್ ವ್ಯವಸ್ಥೆಯನ್ನು ಸರಕಾರ ಮಾಡಿಕೊಡಲಿದೆ. ಆದರೆ ಅದರ ವೆಚ್ಚವನ್ನು ಅವರೇ ಭರಿಸಬೇಕಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಇದೇವೇಳೆ, ರಾಜ್ಯಕ್ಕೆ ಬರುವ ಅನ್ಯರಾಜ್ಯದವರು ಕಡ್ಡಾಯ ತಪಾಸಣೆಗೆ ಒಳಗಾಗಬೇಕು ಮತ್ತು ಅವರಿಗೆ ಕೇಂದ್ರದ ಮಾರ್ಗಸೂಚಿ ಪ್ರಕಾರವೇ ಅನುಮತಿ ನೀಡಲು ನಿರ್ಧರಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಕೈಗಾರಿಕೆಗಳಿಗೆ ಸಮ್ಮತಿ
ಕೆಂಪು ವಲಯದ 15 ಜಿಲ್ಲೆಗಳನ್ನು ಹೊರತು ಪಡಿಸಿ ಇತರೆಡೆ ಕೈಗಾರಿಕೆ ಚಟುವಟಿಕೆ ಆರಂಭಿಸಲು ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ. ಹೀಗಾಗಿ ರಾಜ್ಯದ ಅರ್ಧ ಭಾಗದಲ್ಲಿ ಕೈಗಾರಿಕಾ ಚಟುವಟಿಕೆ ಸೋಮವಾರದಿಂದ ಆರಂಭವಾಗಲಿದೆೆ.
ರಾಜ್ಯದ ಆರ್ಥಿಕ ಚೇತರಿಕೆಯ ದೃಷ್ಟಿಯಿಂದ ಕೆಲವು ಕ್ರಮಗಳು ಅನಿವಾರ್ಯ. ಪರಿಸ್ಥಿತಿ ಸುಧಾರಿಸಿದ ಬಳಿಕ ಬೆಂಗಳೂರಿನಲ್ಲಿಯೂ ಕೈಗಾರಿಕೆ ಮತ್ತು ಇತರ ವಾಣಿಜ್ಯ ಚಟುವಟಿಕೆಗಳು ಆರಂಭವಾಗಲಿವೆ ಎಂದು ಯಡಿಯೂರಪ್ಪ ವಿವರಿಸಿದರು.
ಈ ಮೂಲಕ ಮೇ 3ರ ಅನಂತರ ಹಂತ ಹಂತವಾಗಿ ಲಾಕ್ ಡೌನ್ ಸಡಿಲಗೊಳಿಸುವ ಮುನ್ಸೂಚನೆ ಸರಕಾರದಿಂದ ದೊರೆತಿದೆ.
ಕೋವಿಡ್-19 ಯೋಧರು ಮಡಿದರೆ 30 ಲಕ್ಷ ರೂ.
ಕೋವಿಡ್-19 ನಿಯಂತ್ರಣಕ್ಕಾಗಿ ಹಗಲಿರುಳು ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು, ಪೌರ ಕಾರ್ಮಿಕರು ಮತ್ತು ಪೊಲೀಸ್ ಸಿಬಂದಿ ಕೋವಿಡ್-19 ಸೋಂಕಿಗೆ ಒಳಪಟ್ಟು ಮೃತಪಟ್ಟರೆ 30 ಲಕ್ಷ ರೂ. ಪರಿಹಾರ ನೀಡಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಂಚಾರ ಅವಕಾಶ ಹೇಗೆ?
1. ನಿತ್ಯ ಸಂಚಾರಕ್ಕೆ ಅವಕಾಶ ಇಲ್ಲ, ಒಂದು ಬಾರಿಗೆ ಮಾತ್ರ.
2. ಜಿಲ್ಲಾ ಅಥವಾ ರಾಜ್ಯ ಗಡಿಯಲ್ಲಿ ನೋಂದಣಿ ಕೇಂದ್ರ ಸ್ಥಾಪನೆ, ನೋಡಲ್ ಅಧಿಕಾರಿ ನೇಮಕ.
3.ಪ್ರಯಾಣಿಸುವಾಗ ಗುರುತಿನ ಚೀಟಿ ಸಹಿತ ನೋಂದಣಿ ಕಡ್ಡಾಯ.
4.ತಪಾಸಣೆ ಕಡ್ಡಾಯ, ಕೊರೊನಾ ಸೋಂಕು ಇದ್ದರೆ ಸಂಚಾರಕ್ಕೆ ಅವಕಾಶ ಇರದು.
5. ಸಕಾರಣ ನೀಡಬೇಕು. ಅನಂತರ ಅದನ್ನು ಪರಿಶೀಲನೆ ನಡೆಸಲಾಗುವುದು.
6. ಕೇಂದ್ರ ಸರಕಾರದ ಮಾರ್ಗಸೂಚಿ ಪ್ರಕಾರ ರಾಜ್ಯ ಸರಕಾರ ಈ ಕುರಿತು ನಿಯಮಾವಳಿ ಹೊರಡಿಸಲಿದ್ದು, ಪಾಲನೆ ಕಡ್ಡಾಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.