ಆನಂದ ಸಿಂಗ್ ವಿಚಾರಣೆ ನಡೆಸಿ ಮುಂದಿನ ಕ್ರಮ
Team Udayavani, Jul 3, 2019, 3:07 AM IST
ಬೆಂಗಳೂರು: “ವಿಜಯನಗರ ಶಾಸಕ ಆನಂದಸಿಂಗ್ ರಾಜೀನಾಮೆ ಮಾತ್ರ ತಲುಪಿದ್ದು, ಸಾರ್ವಜನಿಕ ವಿಚಾರಣೆ ಮೂಲಕ ಅಂಗೀಕಾರದ ಬಗ್ಗೆ ತೀರ್ಮಾನಿಸಲಾಗುವುದು’ ಎಂದು ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಹೇಳಿದ್ದಾರೆ. ಈ ಮೂಲಕ ತಕ್ಷಣಕ್ಕೆ ರಾಜೀನಾಮೆ ಅಂಗೀಕಾರ ಆಗುವುದು ಅನುಮಾನ.
ಇದೇ ವೇಳೆ, ರಮೇಶ್ ಜಾರಕಿಹೊಳಿ ರಾಜೀನಾಮೆ ಬಗ್ಗೆಯೂ ಗರಂ ಆದ ಅವರು, “ಕೆಲವರು ಫ್ಯಾಕ್ಸ್ ಮೂಲಕ ರಾಜೀನಾಮೆ ಕಳುಹಿಸಿದ್ದಾರೆ. ನಾನು ಪೋಸ್ಟಲ್ ಡಿಪಾರ್ಟ್ಮೆಂಟ್ನಲ್ಲಿ ಇಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆನಂದ್ ಸಿಂಗ್ ರಾಜೀನಾಮೆ ಅಂಗೀಕರಿಸುವ ಕುರಿತು ಮಂಗಳವಾರ ಸುಮಾರು 2 ಗಂಟೆ ವಿಧಾನಸಭೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, “ಆನಂದ್ಸಿಂಗ್ ರಾಜೀನಾಮೆ ಪತ್ರ ತಲುಪಿದೆ.
ಸೋಮವಾರ ಬೆಳಗ್ಗೆ 6.30ಕ್ಕೆ ದೊಮ್ಮಲೂರಿನಲ್ಲಿರುವ ನನ್ನ ಮನೆಗೆ ಬಂದು ರಾಜೀನಾಮೆ ಸಲ್ಲಿಸಿದ್ದಾರೆ. ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದೇನೆ. ಬೇರೆ ಯಾವ ಶಾಸಕರೂ ರಾಜೀನಾಮೆ ನೀಡಿಲ್ಲ’ ಎಂದು ಹೇಳಿದರು.
ಚಿಂಚೋಳಿ ಶಾಸಕರಾಗಿದ್ದ ಉಮೇಶ್ ಜಾಧವ್ ರಾಜೀನಾಮೆ ಅಂಗೀಕರಿಸಿದ ರೀತಿಯಲ್ಲಿಯೇ, ಆನಂದ್ ಸಿಂಗ್ ರಾಜೀನಾಮೆಗೆ ಕಾರಣವೇನು? ಯಾವುದಾದರೂ ಒತ್ತಡಕ್ಕೆ ಮಣಿದಿದ್ದಾರಾ ಎನ್ನುವ ಬಗ್ಗೆ ಸಾರ್ವಜನಿಕವಾಗಿ ಅವರನ್ನು ವಿಚಾರಣೆ ಮಾಡಿ, ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ.
ಸಂವಿಧಾನದ ಅಡಿಯಲ್ಲಿ ಯಾವುದೇ ಪಕ್ಷಪಾತವಿಲ್ಲದೇ ಕ್ರಮ ಕೈಗೊಳ್ಳುತ್ತೇನೆ. ಇಷ್ಟೇ ದಿನದಲ್ಲಿ ರಾಜೀನಾಮೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕೆಂದು ನಿಯಮವೇನಿಲ್ಲ. ಕಾನೂನು ಬದ್ಧವಾಗಿ ಶೀಘ್ರ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದರು.
ರಮೇಶ್ ಜಾರಕಿಹೊಳಿ ವಿರುದ್ಧ ಗರಂ: ಇದೇ ವೇಳೆ, ಅವರು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. “ಫ್ಯಾಕ್ಸ್ ಮೂಲಕ ರಾಜಿನಾಮೆ ನೀಡಲು ನಾನು ಪೋಸ್ಟಲ್ ಡಿಪಾರ್ಟ್ಮೆಂಟ್ನಲ್ಲಿಲ್ಲ.
ಮಾಧ್ಯಮಗಳಲ್ಲಿ ಮಾತನಾಡುವ ಮುನ್ನ ಎಚ್ಚರಿಕೆಯಿಂದ ಮಾತನಾಡಲಿ. ದನಗಳ ರೀತಿಯಲ್ಲಿ ನಾನು ವರ್ತನೆ ಮಾಡಲು ಆಗುವುದಿಲ್ಲ. ಸಂವಿಧಾನದ ನೀತಿ ನಿಯಮಗಳನ್ನು ಮೊದಲು ತಿಳಿದುಕೊಳ್ಳಲಿ’ ಎಂದು ಏರು ಧ್ವನಿಯಲ್ಲಿ ಆಕ್ರೋಶ ಹೊರ ಹಾಕಿದರು.
ಆ ಶಾಸಕ ಮಾಧ್ಯಮಗಳ ಮುಂದೆ ಮಾತನಾಡುವಾಗ ಮಾತಿನ ಮೇಲೆ ಹಿಡಿತ ಇರಲಿ ಎಂದ ಅವರು, ಮೈಂಡ್ ಯುವರ್ ಲಾಂಗ್ವೇಜ್ ಎಂದು ರಮೇಶ್ ಜಾರಕಿಹೊಳಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು. ಸ್ಪೀಕರ್ ಸ್ಥಾನ ಪವಿತ್ರವಾದದ್ದು. ಆ ಸ್ಥಾನದಲ್ಲಿ ಕುಳಿತಿರುವ ನಾನು ಬಹಳ ಚಿಕ್ಕ ವ್ಯಕ್ತಿ ಎಂದೂ ಹೇಳಿದರು.
ಇನ್ನು ಬೇರೆ ಶಾಸಕರು ರಾಜೀನಾಮೆ ನೀಡುವುದಕ್ಕೆ ಸಮಯ ಕೇಳಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾವ ಶಾಸಕರೂ ಸಮಯ ಕೇಳಿಲ್ಲ. ರಾಜೀನಾಮೆ ನೀಡಲು ಯಾರಾದರೂ ನನ್ನ ಭೇಟಿಗೆ ಅವಕಾಶ ಕೇಳಿದರೆ, ಅವರಿಗೆ ನನ್ನ ನಂಬರ್ ಕೊಡಿ ಎಂದು ಹಾಸ್ಯ ಚಟಾಕಿ ಹಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.