ಆಹ್ವಾನ ಪತ್ರಿಕೆಯಲ್ಲಿ ಕೇಂದ್ರ ಸಚಿವ ಹೆಗಡೆ ಹೆಸರು ಹಾಕ್ತೇವೆ!
Team Udayavani, Oct 21, 2017, 11:24 AM IST
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಯೋಜಿಸಿರುವ ಟಿಪ್ಪು ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಮುದ್ರಿಸದಂತೆ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಸರ್ಕಾರಕ್ಕೆ ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಪ್ರತಿಕ್ರಿಯೆ ನೀಡಿದ್ದು ‘ನಾವು ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆಯಲ್ಲಿ ಕೇಂದ್ರ ಸಚಿವರ ಹೆಸರು ಹಾಕುತ್ತೇವೆ. ಬರುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ’ ಎಂದಿದ್ದಾರೆ.
ಸುದ್ದಿಗಾರರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಚಿವ ಹೆಗಡೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ‘ಅನಂತ್ ಕುಮಾರ್ ಹೆಗಡೆ ಓರ್ವ ಕೇಂದ್ರ ಸಚಿವರಾಗಿ ಆ ರೀತಿ ಮಾತನಾಡುವುದು ಸರಿಯಲ್ಲ’ ಎಂದರು.
‘ರಾಜಕೀಯವಾಗಿ ಟಿಪ್ಪು ವನ್ನು ವಿರೋಧ ಮಾಡುವ ಮುಂಚೆ ಸರಿಯಾಗಿ ಓದಿಕೊಳ್ಳಲಿ. ಟಿಪ್ಪು ನಿಜವಾಗಿಯೂ ಮೊದಲ ಸ್ವಾತಂತ್ರ್ಯ ಹೋರಾಟಗಾರ’ ಎಂದು ಸಿಎಂ ಹೇಳಿದರು.
ಟಿಪ್ಪು ಜಯಂತಿ ಆಚರಣೆ ವಿವಾದ ಸ್ವರೂಪ ಪಡೆದಿರುವ ವೇಳೆ ಸಿಎಂ ಹೇಳಿಕೆ ಇನ್ನೊಂದು ಸಮರಕ್ಕೆ ನಾಂದಿಯಾಗುವ ಸಾಧ್ಯತೆಗಳಿವೆ.
ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅನಂತ್ ಕುಮಾರ್ ನ.10ರಂದು ಸರ್ಕಾರದಿಂದ ನಡೆಸಲಾಗುತ್ತಿರುವ ಟಿಪ್ಪು ಜಯಂತಿಯ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರು ಮುದ್ರಿಸುವುದು ಬೇಡ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.