ಉಪ ಚುನಾವಣೆ ಬಳಿಕ ರಾಜಕೀಯದಲ್ಲಿ ತಲ್ಲಣ
Team Udayavani, Nov 13, 2019, 3:03 AM IST
ಬೆಳಗಾವಿ: ಉಪಚುನಾವಣೆ ನಂತರ ಮಹಾರಾಷ್ಟ್ರ ರೀತಿ ರಾಜ್ಯದಲ್ಲೂ ಮತ್ತೆ ರಾಜಕೀಯ ಅತಂತ್ರ ಸ್ಥಿತಿ ನಿರ್ಮಾಣವಾಗಲಿದ್ದು ಆಗ ಕೆಲ ಶಾಸಕರು ಪಕ್ಷ ಬದಲಾಯಿಸಲಿದ್ದಾರೆ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಉಪಚುನಾವಣೆ ಬಳಿಕ ಪಕ್ಷಾಂತರಿ ಶಾಸಕರಿಗೆ ಬಹಳ ಬೇಡಿಕೆ ಬರಲಿದೆ.
ಈ ನಿಟ್ಟಿನಲ್ಲಿ ರಾಜಕೀಯ ಚಟುವಟಿಕೆ ಹಾಗೂ ಚರ್ಚೆಗಳು ಸಹ ನಡೆದಿವೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಹತ್ತು ಹಾಗೂ ಜೆಡಿಎಸ್ ಎರಡರಲ್ಲಿ ಜಯ ಗಳಿಸಲಿವೆ. ಈ ಫಲಿತಾಂಶ ರಾಜ್ಯದಲ್ಲಿ ಮತ್ತೆ ಅತಂತ್ರ ಸ್ಥಿತಿ ನಿರ್ಮಾಣವಾಗಲು ಕಾರಣವಾಗಲಿದೆ. ಫಲಿತಾಂಶ ನೋಡಿಕೊಂಡು ಒಂದಿಷ್ಟು ಶಾಸಕರು ಪಕ್ಷ ಬದಲಾಯಿಸಲು ಚಿಂತನೆ ನಡೆಸಿದ್ದಾರೆ ಎಂದರು.
ಯಾವುದೇ ಕಾರಣಕ್ಕೂ ಗೋಕಾಕ ಕ್ಷೇತ್ರದಿಂದ ಸ್ಪರ್ಧೆಮಾಡುವುದಿಲ್ಲ. ಯಮಕನಮರಡಿ ಕ್ಷೇತ್ರ ಬದಲಾಯಿಸುವ ಪ್ರಶ್ನೆಯೇ ಇಲ್ಲ. ಕಳೆದ ಚುನಾವಣೆಯಲ್ಲಿ ನಾನು ಯಾವುದೇ ಪ್ರಚಾರ ಮಾಡದೇ ಇದ್ದರೂ ಕ್ಷೇತ್ರದ ಜನರು ನನ್ನನ್ನು ಆಯ್ಕೆ ಮಾಡಿ ಕಳಿಸಿದ್ದಾರೆ. ಹೀಗಿರುವಾಗ ಯಮಕನಮರಡಿ ಕ್ಷೇತ್ರ ತೊರೆಯುವ ಆಲೋಚನೆಯನ್ನೂ ಮಾಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.