ದೇಶಕ್ಕೆ ಅಪಾಯವಿರುವುದು ಕುಟುಂಬವಾದಿ ಪಕ್ಷದಿಂದಲ್ಲ,ಬಿಜೆಪಿಯಂಥ ಕೋಮುವಾದಿ ಪಕ್ಷದಿಂದ:ಎಚ್ಡಿಕೆ

ಭಾರತವೆಂದರೆ ಬಿಜೆಪಿಯಷ್ಟೇ ಅಲ್ಲ, 140 ಕೋಟಿಗೂ ಹೆಚ್ಚು ಭಾರತೀಯರಿದ್ದಾರೆ: ಕುಮಾರಸ್ವಾಮಿ

Team Udayavani, May 27, 2022, 1:19 PM IST

ದೇಶಕ್ಕೆ ಅಪಾಯವಿರುವುದು ಕುಟುಂಬವಾದಿ ಪಕ್ಷದಿಂದಲ್ಲ,ಬಿಜೆಪಿಯಂಥ ಕೋಮುವಾದಿ ಪಕ್ಷದಿಂದ:ಎಚ್ಡಿಕೆ

ಬೆಂಗಳೂರು: “ಕುಟುಂಬ ಆಧರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು.” ಎಂಬ ಪ್ರಧಾನಿ ನರೇಂದ್ರ ಮೋದಿಯವರ ಭಾಷಣಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. “ದೇಶಕ್ಕೆ ಅಪಾಯವಿರುವುದು ಕುಟುಂಬವಾದಿ ಪಕ್ಷಗಳಿಂದಲ್ಲ, ಬಿಜೆಪಿಯಂಥಹ ಕೋಮುವಾದಿ ಪಕ್ಷದಿಂದ” ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕುಟುಂಬ ಪಕ್ಷಗಳ ಟೀಕೆ ನೆಪವಷ್ಟೇ. ಪ್ರಧಾನಿಯವರ ಮೂಲಗುರಿ ಪ್ರಾದೇಶಿಕ ಪಕ್ಷಗಳ ಮೂಲೋತ್ಪಾಟನೆ. ಕಾಂಗ್ರೆಸ್ ನೆಲಕಚ್ಚಿದ ಮೇಲೆ ಬಿಜೆಪಿಗೆ ಪ್ರತಿ ರಾಜ್ಯದಲ್ಲಿ ಎದುರಾಗುತ್ತಿರುವ ರಾಜಕೀಯ ವೈರಿಗಳೆಂದರೆ ಪ್ರಾದೇಶಿಕ ಪಕ್ಷಗಳೇ. ಇಂಥ ಬಲಿಷ್ಠ ಪಕ್ಷಗಳನ್ನು ಮುಗಿಸಲು ಬಿಜೆಪಿ ಏನೆಲ್ಲ ಅಡ್ಡದಾರಿ ಹಿಡಿಯಿತು ಎನ್ನುವುದು ಗುಟ್ಟೇನಲ್ಲ ಎಂದಿದ್ದಾರೆ.

ಲೋಕನಾಯಕ ಜಯಪ್ರಕಾಶ ನಾರಾಯಣ ಅವರ ಹೋರಾಟದ ಫಲಗಳಲ್ಲಿ ಜನಸಂಘವೂ ಒಂದು. ತುರ್ತು ಪರಿಸ್ಥಿತಿ ಹೇರಿದಾಗ ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ನೂರಾರು ಸಣ್ಣಪುಟ್ಟ ಪಕ್ಷಗಳನ್ನು ಒಗ್ಗೂಡಿಸಿದ್ದು ಅವರೇ. ಇವೆಲ್ಲಾ ಒಟ್ಟಾಗಿ ʼಜನತಾ ಪರಿವಾರʼ ಉದಯ ಆಯಿತು. ಈ ಪರಿವಾರ ಹಂತಹಂತವಾಗಿ ಬೆಳೆದು ಹೆಮ್ಮರವಾಗಿ, ಕ್ರಮೇಣ ಅನೇಕ ಟಿಸಿಲುಗಳೊಡೆದು ಬೇರೆ ಬೇರೆಯಾಯಿತು. ಬಿಜೆಪಿಯೂ ಈ ಪರಿವಾರದ ಒಂದು ತುಣುಕಷ್ಟೇ. ಜೆಡಿಎಸ್‌, ಜೆಡಿಯು, ಆರ್ʼಜೆಡಿ, ಬಿಜೆಡಿ, ಸಮಾಜವಾದಿ ಪಕ್ಷಗಳೆಲ್ಲ ಈ ಮಹಾವೃಕ್ಷದ ರೆಂಬೆ-ಕೊಂಬೆಗಳೇ. ಜನತಾ ಪರಿವಾರದ ಟಿಸಿಲುಗಳು ದೇಶದ ಉದ್ದಗಲಕ್ಕೂ ‌ಬೃಹತ್‌ ವೃಕ್ಷಗಳಾಗಿ ಬೆಳೆದು ನಿಂತಿವೆ. ಅವುಗಳ ಬೇರುಗಳು ಆಳಕ್ಕಿಳಿದು ಬಲಿಷ್ಠವಾಗಿವೆ; ಕೀಳುವುದು, ಅಲ್ಲಾಡಿಸುವುದು ಸುಲಭವಲ್ಲ. ಮೋದಿ ಅವರಿಗೆ ಈ ವಿಷಯವೂ ತಿಳಿಯದ್ದೇನಲ್ಲ. ಜನಸಂಘ ಬಿಜೆಪಿಯಾಗಿ ರೂಪಾಂತರಗೊಂಡು ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದು ತನ್ನ ಸ್ವಂತ ಶಕ್ತಿಯಿಂದೇನಲ್ಲ. ಇದೇ ಕುಟುಂಬ ಕೇಂದ್ರಿತ ಪಕ್ಷಗಳ ಊರುಗೋಲಿನಿಂದ. ಎನ್ ಡಿಎ ಹುಟ್ಟಿದ್ದು ಹೇಗೆ? ಹುಟ್ಟಿದಾಗ ಎಷ್ಟು ಪಕ್ಷಗಳಿದ್ದವು? ಈಗೆಷ್ಟಿವೆ? ಈ ಮಾಹಿತಿ ಮೋದಿ ಅವರ ಮನದಲ್ಲಿ ಇರಬೇಕಿತ್ತು. ಲೊಕಸಭೆಯಲ್ಲಿ ಈಗ ಬಿಜೆಪಿಗೆ 303 ಸೀಟುಗಳಿವೆ. ಆದರೆ, ಎಷ್ಟು ಸೀಟುಗಳಿಂದ ಈ ಅಂಕಿ ಆರಂಭವಾಯಿತು? ಆ ಪಕ್ಷದ ಪ್ರಯಾಣ ಶುರುವಾಗಿದ್ದು ಎಲ್ಲಿಂದ? ಮೊದಲಿನದ್ದೆಲ್ಲವನ್ನೂ ಮೋದಿ ಮರೆತರೆ ಹೇಗೆ? ಈಗಲೂ ಅವರು ಟೀಕಿಸಿದ ಕುಟುಂಬ ಕೇಂದ್ರಿತ ಪಕ್ಷಗಳು ಎನ್ ಡಿಎ ಕೂಟದಲ್ಲಿವೆಯಲ್ಲಾ ಎಂದು ಕುಟುಕಿದ್ದಾರೆ.

ಇತ್ತೀಚೆಗೆ, ನಿತ್ಯವೂ ಕುಟುಂಬ ರಾಜಕಾರಣ-ಭ್ರಷ್ಟಾಚಾರದ ಬಗ್ಗೆ ಹೇಳುವ ಅವರ ಪಕ್ಷದಲ್ಲೇ ಇರುವ ʼವಂಶವೃಕ್ಷದ ಘೋಂಡಾರಣ್ಯ ಮತ್ತು ಭ್ರಷ್ಟಾಚಾರʼ ಕೂಪದ ಬಗ್ಗೆ ಅವರೇಕೆ ದಿವ್ಯಮೌನ ವಹಿಸುತ್ತಾರೆ! ಕರ್ನಾಟಕದಿಂದ ಹಿಡಿದು, ವಿಂಧ್ಯ ಪರ್ವತದ ಆಚೆಗೂ ಬಿಜೆಪಿಗರ ಕುಟುಂಬಗಳ ಕುಲಕಸುಬು ರಾಜಕೀಯವೇ ಆಗಿ, ಭ್ರಷ್ಟಾಚಾರವು ಅವರ ನಿತ್ಯ ಆಚಾರ ಆಗಿದೆ ಎಂದು ಎಚ್ ಡಿಕೆ ಟೀಕಿಸಿದ್ದಾರೆ.

ದೇಶಕ್ಕೆ ಅಪಾಯ ಇರುವುದು ʼಕುಟುಂಬವಾದಿ ಪಕ್ಷಗಳಿಂದಲ್ಲ, ಬಿಜೆಪಿಯಂಥ ಕೋಮುವಾದಿ ಪಕ್ಷದಿಂದ.ʼ ಭಾವನಾತ್ಮಕವಾಗಿ ಜನರನ್ನು ಜಗಳಕ್ಕಿಳಿಸಿ ಜಾಗ ಹಿಡಿಯುವ ಪರಿಪಾಠ ಪ್ರಜಾಪ್ರಭುತ್ವದ ನಿಜವಾದ ದೊಡ್ಡ ಶತ್ರು. ಸಂವಿಧಾನಕ್ಕೆ ಗಂಡಾಂತರಕಾರಿ. ಮಾನ್ಯ ಮೋದಿ ಅವರಿಗೆ ಈ ವಿಷಯ ಗೊತ್ತಿಲ್ಲವೆಂದು ನಾನು ಭಾವಿಸುವುದಿಲ್ಲ. ಜಾತಿ, ಧರ್ಮ, ಸಂಸ್ಕೃತಿ, ಭಾಷೆ, ಆಹಾರ, ವ್ಯಾಪಾರ ಇತ್ಯಾದಿಗಳ ಮೂಲಕ ವಿವಿಧತೆಯಲ್ಲಿ ಏಕತೆ ಸಾಧಿಸಿದ್ದ ಭಾರತದ ಭಾವೈಕ್ಯತೆಯ ಬುಡಕ್ಕೆ ಕೊಡಲಿ ಹಾಕಿದವರು ಯಾರು? ಪ್ರಜಾಸತ್ತೆಯ ಅಖಂಡ ರಕ್ಷಕನಾದ ಸಂವಿಧಾನಕ್ಕೇ ಅಪಚಾರವೆಸಗಿ ʼಆಪರೇಷನ್ ಕಮಲʼವೆಂಬ ಅನೈತಿಕ ರಾಜಕಾರಣ ಆರಂಭ ಮಾಡಿದ್ದು ಯಾರು? ಕರ್ನಾಟಕದಲ್ಲಿ ಎರಡು ಸಲ ಬಿಜೆಪಿ ಸರಕಾರ ಬಂದಿದ್ದು ಹೇಗೆ? ರಾಜಮಾರ್ಗದಲ್ಲಿ ಬಂತಾ? ಇಲ್ಲ, ಶಾಸಕರನ್ನು ಸಂತೆಯಲ್ಲಿ ರಾಸುಗಳಂತೆ ನಿರ್ಲಜ್ಜವಾಗಿ ಖರೀದಿಸಿದ್ದರಿಂದಲೇ ಬಂದ ʼಅಕ್ರಮ ಸರಕಾರʼವಿದು! ಪ್ರಧಾನಿಯವರು ಇದನ್ನು ನಿರಾಕರಿಸುತ್ತಾರಾ? ಮೋದಿ ಅವರು ಈ ನೀತಿಹೀನ ಸರಕಾರಕ್ಕೆ ಅಧಿಕೃತ ಮುದ್ರೆ ಒತ್ತಿದ್ದು ಸುಳ್ಳಾ? ಕೋಟಿ ಕೋಟಿ ಲೂಟಿ ಹೊಡೆದು ಅಕ್ಕಪಕ್ಕದ ಪಕ್ಷಗಳ ಶಾಸಕರನ್ನು ಎಗರಿಸಿಕೊಂಡು ಹೋಗಿದ್ದು ದೇಶಕ್ಕೆ ಒಳ್ಳೆಯದಾ? ಯುವಜನರಿಗೆ ದಾರಿದೀಪವಾ? ಈ ಬಗ್ಗೆ ಮೋದಿ ಅವರ ಮನ್ ಕೀ ಬಾತ್ ಮೌನವಾಗಿದೆ! ಯಾಕೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ದಾವೋಸ್ ಪ್ರವಾಸ ಯಶಸ್ವಿ, ರಾಜ್ಯದಲ್ಲಿ 5 ಲಕ್ಷ ಕೋಟಿ ರೂ ಬಂಡವಾಳ ಹೂಡಿಕೆ ನಿರೀಕ್ಷೆ: ನಿರಾಣಿ

‘ಆಪರೇಷನ್ ಕಮಲವನ್ನೇ ರಾಷ್ಟ್ರೀಕರಣʼ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೇ? ಜನಾದೇಶದಂತೆ ರಚನೆಯಾಗಿದ್ದ ಮಧ್ಯಪ್ರದೇಶದ ಸರಕಾರವನ್ನು ಕೆಡವಿದ್ದು ಇವರ ಪಕ್ಷವೇ ಅಲ್ಲವೆ? ಒಂದೆಡೆ ಸಂಸತ್ತು-ಸಂವಿಧಾನಕ್ಕೆ ಶಿರಸಾಷ್ಟಾಂಗ ನಮಸ್ಕಾರ! ಇನ್ನೊಂದೆಡೆ; ಆಪರೇಷನ್ ಕಮಲದ ಮೂಲಕ ಸಂವಿಧಾನದ ಶಿರಚ್ಛೇಧ! ಇದೆಂಥಾ ರಾಜಕಾರಣ? ಇದು ರಾಷ್ಟ್ರೀಯವಾದಿ ಪಕ್ಷದ ಸೋಗಲಾಡಿತನ ಎಂದು ಎಚ್ ಡಿಕೆ ಕಟುಮಾತುಗಳಲ್ಲಿ ಜರಿದಿದ್ದಾರೆ.

ಮುಖ್ಯಮಂತ್ರಿ ಸ್ಥಾನವನ್ನು ಕರ್ನಾಟಕದಲ್ಲಿ ಮಾರಾಟಕ್ಕೆ ಇಟ್ಟಿದ್ದು ಯಾರು? ಕುಟುಂಬ ರಾಜಕಾರಣದ ಪಕ್ಷವೋ? ಬಿಜೆಪಿಯೋ? “ರೂ.2,500 ಕೋಟಿ ಕೊಡಿ, ನಿಮ್ಮನ್ನು ಸಿಎಂ ಮಾಡುತ್ತೇವೆ” ಎಂದು ಕೇಳಿದ ಪಾರ್ಟಿ ಬಿಜೆಪಿ. ಇದನ್ನು ಹೇಳಿದ್ದು ಸ್ವತಃ ಬಿಜೆಪಿ ಶಾಸಕರೇ! ಆ ಶಾಸಕರ ವಿರುದ್ಧ ಒಂದು ನೊಟೀಸನ್ನೂ ಕೊಡಲಿಲ್ಲ. ಮೋದಿ ಅವರೂ ಸಿಎಂ ಕರ್ಚಿ ಮಾರಾಟದ ಬಗ್ಗೆ ಮಾತನಾಡಲಿಲ್ಲ. ಈ ಘನಘೋರ ಆರೋಪದ ಬಗ್ಗೆಯೂ ಅವರದ್ದು ಮುಂದುವರಿದ ಮೌನ! ಅಲ್ಲಿಗೆ ಶಾಸಕರ ಹೇಳಿಕೆ ಸತ್ಯ ಎಂದಾಯಿತಲ್ಲ. ಪಿಎಸ್‌ʼಐ ಹುದ್ದೆಗಳಂತೆ ಸಿಎಂ ಪದವಿಯನ್ನೂ ಮಾರಿಕೊಳ್ಳುವುದು ದೇಶಕ್ಕೆ ಸೌಭಾಗ್ಯವಾ? ಯುವಕರಿಗೆ ಆದರ್ಶವಾ? ಕುಟುಂಬ ರಾಜಕಾರಣದ ನೆಪವೊಡ್ಡಿ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ತಂತ್ರ ಫಲಿಸದು. ಭಾರತವೆಂದರೆ ಬಿಜೆಪಿಯಷ್ಟೇ ಅಲ್ಲ, 140 ಕೋಟಿಗೂ ಹೆಚ್ಚು ಭಾರತೀಯರು ಸೇರಿದರೆ ಮಾತ್ರ ಭಾರತ. ಪ್ರಧಾನಿಗಳು ಈ ಆಶಯವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.