![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 3, 2019, 3:05 AM IST
ಬೆಂಗಳೂರು: ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ನಡೆಯುತ್ತಿರುವ ಗೋಲ್‌ಮಾಲ್ ತಡೆಯು ವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಅಧಿಕಾರಿಗಳ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.12 ಕೋಟಿ ಫಲಾನುಭವಿಗಳು ಅನ್ನಭಾಗ್ಯ ಯೋಜನೆಯಡಿ ಪಡಿತರ ಅಕ್ಕಿ ಪಡೆಯುತ್ತಿದ್ದಾರೆ. ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 1 ಲಕ್ಷ ಜನ ಶ್ರೀಮಂತರು ಬಿಪಿಎಲ್ ಕಾರ್ಡ್ ಮೂಲಕ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಪಡೆಯುತ್ತಿದ್ದಾರೆ.
ಕಾರು, ಟ್ರ್ಯಾಕ್ಟರ್ ಹೊಂದಿರುವವರೂ ಪಡಿತರ ಅಕ್ಕಿ ಪಡೆಯುತ್ತಿದ್ದಾರೆ. ಅಧಿಕಾರಿಗಳು ಇದನ್ನು ಬಿಗಿಗೊಳಿಸಬೇಕು ಎಂದರು. ಅನ್ನಭಾಗ್ಯ ಯೋಜನೆಯಡಿಯಲ್ಲಿ ಕಳೆದ ಒಂದೆರಡು ವರ್ಷಗಳಿಂದ ಕೆಲವು ಗೋದಾ ಮು ಗಳಲ್ಲಿ ಅಕ್ಕಿ ಕೊಳೆಯುತ್ತ ಬಿದ್ದಿದೆ. ಈ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ, ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಕಲಬುರಗಿ, ವಿಜಯಪುರ, ರಾಯಚೂರು, ಬಳ್ಳಾರಿ, ಬಾಗಲಕೊಟೆ ಜಿಲ್ಲೆಗಳಲ್ಲಿ ತೊಗರಿ ಬಿತ್ತನೆಯಾಗಿದೆ. ಉತ್ತಮ ಬೆಳೆ ಬರುವ ನಿರೀಕ್ಷೆಯಿದೆ. ಕುಡಿಯುವ ನೀರಿನ ಸಂಬಂಧ ಕಾಲಕಾಲಕ್ಕೆ ಅಧಿಕಾರಿಗಳು ಸಭೆ ನಡೆಸಿ ಜನರಿಗೆ ನೀರೊ ದಗಿಸುವ ಕೆಲಸ ಮಾಡಬೇಕು. ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸಕ್ರಿಯಗೊಳಿಸಲು ಸೂಚನೆ ನೀಡಲಾಗಿದೆ. ಆಲಮಟ್ಟಿ ಆಣೆಕಟ್ಟೆಯಿಂದ 10 ಬ್ಯಾರೇಜ್‌ಗಳಿಗೆ ನೀರು ತುಂಬಿಸಲು ಅವಕಾಶವಿದೆ ಎಂದು ತಿಳಿದು ಬಂದಿದ್ದು, ಈ ನಿಟ್ಟಿನಲ್ಲಿ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಕಿಸಾನ್ ಸನ್ಮಾನ ಯೋಜನೆ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯದಲ್ಲಿ 43.75 ಲಕ್ಷ ರೈತರ ಪಟ್ಟಿ ಸಿದ್ಧಪಡಿಸಲಾಗಿತ್ತು. ಅದರಲ್ಲಿ 31.72 ಲಕ್ಷ ಅರ್ಹ ಫಲಾನುಭವಿಗಳಿಗೆ 634.50 ಕೋಟಿ ರೂ.ಹಣ ಸಂದಾಯವಾಗಿದೆ. ರಾಜ್ಯ ಸರ್ಕಾರದ ಪಾಲು 10 ದಿನದಲ್ಲಿ ರೈತರ ಖಾತೆಗೆ ವರ್ಗಾವಣೆ ಮಾಡಲಾಗುವುದು. ಇದರಿಂದ ರಾಜ್ಯ ಸರ್ಕಾರಕ್ಕೆ 2200 ಕೋಟಿ ರೂ. ಹೆಚ್ಚಿನ ಹೊರೆ ಬೀಳಲಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಪರಿಹಾರ ನಿಧಿ ಯೋಜನೆಯಡಿಯಲ್ಲಿ ವಾರದಲ್ಲಿ ಫಲಾನುಭವಿಗಳಿಗೆ ಹಣ ವರ್ಗಾಯಿಸಲಾಗುವುದು. ಸಾಲ ಮನ್ನಾ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ. ಕಳೆದ 30-40 ವರ್ಷದಿಂದ ಮನೆ ಕಟ್ಟಿಕೊಂಡಿರುವ ಅರಣ್ಯವಾಸಿಗಳ ಮನೆಗಳನ್ನು ತೆರವುಗೊಳಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ಬಗ್ಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಕಾನೂನು ತಿದ್ದುಪಡಿ ಮಾಡುವ ಬಗ್ಗೆಯೂ ಚರ್ಚೆ ನಡೆಸಲು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ದೆಹಲಿಗೆ ಭೇಟಿ: ನರೇಗಾ ಯೋಜನೆಯಡಿಯಲ್ಲಿ ಹಣ ದುರುಪಯೋಗಕ್ಕೆ ಅವಕಾಶ ಇಲ್ಲ. ಕೇಂದ್ರ ಸರ್ಕಾರದಿಂದ ನರೇಗಾ ಯೋಜನೆಯ ಅನುದಾನ ಬಿಡುಗಡೆಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಆ. 6,7,8 ರಂದು ದೆಹಲಿಗೆ ತೆರಳುತ್ತಿದ್ದೇನೆ. ಆ ಸಂದರ್ಭದಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಕೇಂದ್ರದ ಅನುದಾನ ಬಿಡುಗಡೆ ಮಾಡಿಸಿಕೊಂಡು ಬರುವುದಾಗಿ ಮುಖ್ಯಮಂತ್ರಿ ಹೇಳಿದರು,
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.