H. D. Kumaraswamy ಅನ್ನಭಾಗ್ಯದ ಹಣ ಕೊಡುವ ಯೋಗ್ಯತೆ ಇಲ್ಲ
Team Udayavani, May 26, 2024, 11:36 PM IST
ಬೆಂಗಳೂರು: ಗ್ಯಾರಂಟಿಗಳಿಂದ ಜನರನ್ನು ಉದ್ಧಾರ ಮಾಡುತ್ತೇವೆ ಎಂದು ಹೇಳುತ್ತಿರುವ ಈ ಸರಕಾರಕ್ಕೆ ಅನ್ನಭಾಗ್ಯದ 175 ರೂ.ಹಣ ಕೊಡುವ ಯೋಗ್ಯತೆ ಇಲ್ಲ. 2-3 ತಿಂಗಳಿಂದ ಯಾವ ಕುಟುಂಬಕ್ಕೂ ಹಣ ಕೊಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.
ಜೆಡಿಎಸ್‌ನ ಪ್ರಧಾನ ಕಚೇರಿ ಜೆ.ಪಿ. ಭವನದಲ್ಲಿ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತನಾಡಿ, ಈ ಸರಕಾರವು ಹಾಲು ಉತ್ಪಾದಕರ ಸಹಾಯಧನ ಕೊಟ್ಟಿಲ್ಲ, ಬಿತ್ತನೆ ಬೀಜದ ಬೆಲೆ ಶೇ.75 ಏರಿಸಲಾಗಿದ್ದು, ರೈತರ ಬದುಕನ್ನು ಕಗ್ಗತ್ತಲಿಗೆ ತಳ್ಳಲಾಗಿದೆ ಎಂದು ದೂರಿದರು.
ಮೊದಲು ರಾಜ್ಯದಲ್ಲಿ ಭರ್ತಿ ಮಾಡಿ
ರಾಜ್ಯದಲ್ಲಿ 2.75 ಲಕ್ಷ ಸರಕಾರಿ ಹುದ್ದೆಗಳು ಖಾಲಿ ಬಿದ್ದಿವೆ. ಆದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದಲ್ಲಿ ಖಾಲಿ ಇರುವ 30 ಲಕ್ಷ ಸರಕಾರಿ ಹುದ್ದೆ ತುಂಬುತ್ತೇವೆ ಎಂದು ಹೇಳುತ್ತಿದ್ದಾರೆ. ಮೊದಲು ಕರ್ನಾಟಕ
ದಲ್ಲಿ ಭರ್ತಿ ಮಾಡಿ, ಆಮೇಲೆ ದೇಶದ ಕಥೆ ನೋಡೋಣ ಎಂದರು.
ಹದಗೆಟ್ಟ ಕಾನೂನು ಸುವ್ಯವಸ್ಥೆ
ಪ್ರತಿಪಕ್ಷ ನಾಯಕ ಆರ್. ಅಶೋಕ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಹದಗೆಟ್ಟು ಹೋಗಿದೆ ಎಂದರೆ, ಗೃಹ ಸಚಿವರು ಯಾರು ಎಂಬುವುದೇ ಗೊತ್ತಾಗುತ್ತಿಲ್ಲ. ಹೆಣ್ಣು ಮಕ್ಕಳು ಶಾಲೆಗೆ ಹೋದರೆ, ಮಹಿಳೆಯರು ಕೆಲಸಕ್ಕೆ ಹೋದರೆ ಮನೆಗೆ ವಾಪಸ್ ಬರುವ ಗ್ಯಾರಂಟಿಯೇ ಇಲ್ಲ ಎಂದು ವಾಗ್ಧಾಳಿ ನಡೆಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.