CM ಸಿದ್ದರಾಮಯ್ಯ ವಿರುದ್ಧ ಇ.ಡಿ.ಗೆ ಮತ್ತೊಂದು ದೂರು
Team Udayavani, Oct 4, 2024, 12:10 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮುಡಾಗೆ ನಿವೇಶನ ವಾಪಸ್ ನೀಡಿರುವುದು ಸಾಕ್ಷÂ ನಾಶಕ್ಕೆ ಸಮವಾಗಿದೆ ಎಂದು ಆರೋಪಿಸಿ ಗುರುವಾರ ವಕೀಲ ಪ್ರದೀಪ್ ಕುಮಾರ್ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ.)ದೂರು ನೀಡಿದ್ದಾರೆ.
ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ತಮಗೆ ಮುಡಾದಿಂದ ಮಂಜೂರಾಗಿದ್ದ 14 ನಿವೇಶನಗಳನ್ನ ವಾಪಸ್ ನೀಡುವುದಾಗಿ ಪತ್ರ ಬರೆದಿದ್ದರು. ಬಳಿಕ ಮುಡಾ ಸಹ 14 ನಿವೇಶನಗಳ ಮಾಲಕತ್ವ ಮತ್ತು ಸ್ವಾಧೀನವನ್ನು ರದ್ದುಪಡಿಸಿದೆ. ಇದು ಮುಖ್ಯಮಂತ್ರಿಗಳು ಸಾಕ್ಷÂ ನಾಶಕ್ಕೆ ಮುಂದಾಗಿದ್ದಾರೆ. ಮುಡಾ ಅಧಿಕಾರಿಗಳು ಆರೋಪಿತರ ಮನೆಗೆ ಹೋಗಿ ಸಹಿ ಹಾಕಿಸಿಕೊಂಡು ಬಂದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.