ಮಂಗನ ಕಾಯಿಲೆಗೆ ಮತ್ತೊಬ್ಬ ಬಲಿ
Team Udayavani, Mar 16, 2020, 3:02 AM IST
ಸಾಗರ: ಕೊರೊನಾ ಭೀತಿ ಮಧ್ಯೆಯೇ ಮಲೆನಾಡಿನಲ್ಲಿ ಮಂಗನ ಕಾಯಿಲೆ ಮತ್ತೊಂದು ಬಲಿ ಪಡೆದಿದೆ. ತಾಲೂಕಿನ ಅರಳಗೋಡು ಭಾಗದ ಕಸಗುಪ್ಪೆ ಹಾಲ್‌ತೋಟ ಗ್ರಾಮದ ವಾಸಿ ಕೋಮರಾಜ್ (40) ಮಂಗನ ಕಾಯಿಲೆಯಿಂದ ಶನಿವಾರ ಮೃತಪಟ್ಟಿದ್ದಾರೆ. ವಿಪರೀತ ಜ್ವರ ಹಾಗೂ ತಲೆನೋವಿನಿಂದ ಬಳಲುತ್ತಿದ್ದ ಅವರು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಕ್ತ ಪರೀಕ್ಷೆಯಿಂದ ಅವರಿಗೆ ಮಂಗನ ಕಾಯಿಲೆ ಇರುವುದು ದೃಢಪಟ್ಟ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸಾ ವೆಚ್ಚ ಹೆಚ್ಚಾದ ಕಾರಣ ಕುಟುಂಬದವರು ಅಲ್ಲಿಂದ ಕರೆ ತಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕೋಮರಾಜ್ ಸಾವಿಗೆ ಆರೋಗ್ಯ ಇಲಾಖೆ ನಿರ್ಲಕ್ಷéವೇ ಕಾರಣ ಎಂದು ಆರೋಪಿಸಿ ಸಾರ್ವಜನಿಕರು ಅರಳಗೋಡಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
MUST WATCH
ಹೊಸ ಸೇರ್ಪಡೆ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.