ರಾಜ್ಯದಲ್ಲಿ ಮತ್ತೊಂದು ಅಕ್ರಮ ಬಯಲಿಗೆ: ಪರೀಕ್ಷೆ ವೇಳೆ ಸ್ಮಾರ್ಟ್ ವಾಚ್ ಬಳಸಿದ್ದವ ಸೆರೆ
Team Udayavani, Aug 10, 2022, 2:28 PM IST
ಬೆಳಗಾವಿ: ಪಿಎಸ್ ಐ ಹಾಗೂ ಪದವಿ ಉಪನ್ಯಾಸಕರ ಅಕ್ರಮ ನೇಮಕಾತಿ ಬೆನ್ನಲ್ಲೇ ಈಗ ಕೆಪಿಟಿಸಿಎಲ್ ಜ್ಯೂನಿಯರ್ ಅಸಿಸ್ಟೆಂಟ್ ಲಿಖಿತ ಪರೀಕ್ಷೆ ವೇಳೆ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.
ಕೆಪಿಟಿಸಿಎಲ್ ಜ್ಯೂನಿಯರ್ ಅಸಿಸ್ಟೆಂಟ್ ಲಿಖಿತ ಪರೀಕ್ಷೆ ವೇಳೆ ನಕಲು ಮಾಡಲು ಸ್ಮಾರ್ಟ್ ವಾಚ್ ಬಳಸಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಗೋಕಾಕ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸಿದ್ದಪ್ಪ ಮಡ್ಡಿಹಳ್ಳಿ ಎಂದು ಗುರುತಿಸಲಾಗಿದೆ.
ಗೋಕಾಕ ಪೊಲೀಸರು ಈಗಾಗಲೇ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಯನ್ನು ಬಂಧಿಸಿದ್ದಾರೆ. ತನಿಖೆಗಾಗಿ ಎರಡು ತಂಡಗಳನ್ನು ರಚಿಸಲಾಗಿದೆ. ಗೋಕಾಕ ಡಿಎಸ್ ಪಿ ಮನೋಜಕುಮಾರ ನಾಯಕ ನೇತೃತ್ವದಲ್ಲಿ ಪ್ರಕರಣದ ತನಿಖೆ ತೀವ್ರಗೊಳಿಸಿದ್ದು, ಇದರ ಹಿಂದಿರುವ ಜಾಲ ಭೇದಿಸಲಾಗುತ್ತಿದೆ. ಪರೀಕ್ಷೆ ಅಕ್ರಮ ನಡೆಸಲು ಪ್ರಕರಣದ ಹಿಂದೆ ಯಾರು ಇದ್ದಾರೆ ಎಂಬುದರ ಬಗ್ಗೆ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ ಪಿ ಸಂಜೀವ ಪಾಟೀಲ್ ‘ಉದಯವಾಣಿ’ಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು