ಸಿದ್ದರಾಮಯ್ಯ ಪರ್ಸಂಟೇಜ್ ಪಿತಾಮಹ, ಅನೈತಿಕ ರಾಜಕಾರಣದ ಅಸಲಿ ಅಪ್ಪ: ಕುಮಾರಸ್ವಾಮಿ ಟೀಕೆ

ಧೈರ್ಯವಿದ್ದರೆ ನನ್ನ ನಾಲ್ಕು ಪ್ರಶ್ನೆಗಳಿಗೆ ಉತ್ತರಿಸಿ; ಸವಾಲೆಸೆದ ಎಚ್ ಡಿಕೆ

Team Udayavani, Apr 19, 2022, 12:54 PM IST

ಸಿದ್ದರಾಮಯ್ಯ ಪರ್ಸಂಟೇಜ್ ಪಿತಾಮಹ, ಅನೈತಿಕ ರಾಜಕಾರಣದ ಅಸಲಿ ಅಪ್ಪ: ಕುಮಾರಸ್ವಾಮಿ ಟೀಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವಿನ ಮಾತಿನ ಸಮರ ಮುಂದುವರಿದಿದೆ. ಇದೀಗ ಸಿದ್ದರಾಮಯ್ಯ ವಿರುದ್ಧ ಮತ್ತೆ ಟ್ವೀಟಾಸ್ತ್ರ ಮುಂದುವರಿಸಿರುವ ಕುಮಾರಸ್ವಾಮಿ, “ಪರ್ಸಂಟೇಜ್ ಪಿತಾಮಹ, ಅನೈತಿಕ ರಾಜಕಾರಣದ ಅಸಲಿ’ ಎಂದು ಜರಿದಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಎಚ್ ಡಿಕೆ, ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ, ಆ ಪಾಪಕ್ಕೆ ಪ್ರತಿಯಾಗಿ ಪಡೆದ ಫಲದ ಬಗ್ಗೆ ಪಲಾಯನವೇಕೆ ಸುಳ್ಳುರಾಮಯ್ಯ? ಕಳ್ಳಮಾಲು ಹ್ಯೂಬ್ಲೆಟ್ ವಾಚಿನ ಬಗ್ಗೆ ವಾಕರಿಕೆ ಬರುವಷ್ಟು ಹೇಸಿಗೆ ಕಥೆಗಳೇ ಇವೆ. ಇವೆರಡೂ ಪ್ರಶ್ನೆಗಳಿಗೂ ಉತ್ತರಿಸುತ್ತಿಲ್ಲ, ಯಾಕಯ್ಯಾ? ಈಶ್ವರಪ್ಪ ಬಗ್ಗೆ ಮಾತನಾಡಿ, ಅಭ್ಯಂತರವಿಲ್ಲ. ಡಿವೈಎಸ್ಪಿ ಗಣಪತಿ ಬಗ್ಗೆಯೂ ಹೇಳಿ, ಬೇಜಾರಿಲ್ಲ. ಆದರೆ; ಕಲ್ಲಪ್ಪ ಹಂಡೀಭಾಗ್ ಬಗ್ಗೆ ಮಾತನಾಡಿದರೆ ನಿಮ್ಮ ಜಾಣ ಮೌನವೇಕೆ? ಆ ಪಾಪಕ್ಕೆ ಪ್ರಾಯಶ್ಚಿತ್ತ ಅನುಭವಿದೇ ವಿಧಿಯೇ ಇಲ್ಲ. ಪ್ರಾಮಾಣಿಕ ಅಧಿಕಾರಿಯ ದುರಂತ ಅಂತ್ಯ ನಿಮ್ಮನ್ನು ಸುಮ್ಮನೆ ಬಿಡಲ್ಲ ಎಂದಿದ್ದಾರೆ.

ಮಂಡ್ಯದಲ್ಲಿ ಜೆಡಿಎಸ್ ಬಗ್ಗೆ ಸುಳ್ಳು ಹೇಳಿದ್ದೀರಿ. ನಾಚಿಕೆ ಆಗುವುದಿಲ್ಲವೇ ನಿಮಗೆ? ನಿಮ್ಮ ಐದು ವರ್ಷಗಳ ದುರಾಡಳಿತದಲ್ಲಿ ಆ ಜಿಲ್ಲೆಯೊಂದರಲ್ಲೇ 200 ರೈತರು ಆತ್ಮಹತ್ಯೆಗೆ ಶರಣಾದರು. ಮೈಷುಗರ್ ಕಾರ್ಖಾನೆ ಮುಚ್ಚಿಸಿ ಕಬ್ಬು ಬೆಳೆಗಾರರ ಮನೆ ಹಾಳು ಮಾಡಿದಿರಿ. ಮರೆತುಬಿಟ್ಟಿರಾ ಸುಳ್ಳುರಾಮಯ್ಯ? ಮಂಡ್ಯದಲ್ಲಿ ಏಳೂ ಸೀಟು ಸಿಗಲಿಲ್ಲ ಎಂದು ಜನರ ಮುಂದೆ ಹಲುಬುತ್ತೀರಿ. 200 ಅನ್ನದಾತರ ಜೀವಕ್ಕೆ ಎರವಾಗಿ, ಇಡೀ ಜಿಲ್ಲೆಯಲ್ಲಿ ಮರಣಮೃದಂಗ ಭಾರಿಸಿದ ನಿಮ್ಮ ರೈತವಿರೋಧಿ ನೀತಿಗಳು ಕಸಿದ ಜೀವಗಳ ಲೆಕ್ಕವೆಲ್ಲಾ ಚುಕ್ತಾ ಆಗುವ ಕಾಲ ಬಂದಿದೆ. ಜೀವ ತೆಗೆಯುವ ಜವರಾಯನ ಅವತಾರವೇ ನೀವಾಗಿರುವಾಗ ನಮ್ಮ ಕಣ್ಣೀರನ್ನು ಹಂಗಿಸುತ್ತೀರಿ ಎಂದು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ:ನಾನು ಯಾವುದರಲ್ಲೂ ಸಾಫ್ಟ್ ಕಾರ್ನರ್ ತೋರಿಲ್ಲ.. : ಸಿಎಂ ಬಸವರಾಜ ಬೊಮ್ಮಾಯಿ

ಆಪರೇಷನ್ ಕಮಲದಿಂದ ನಿಮ್ಮ ಜೇಬು ಸೇರಿದ ಆಕರ್ಷಕ ಅಂಕಿಯ ಹಣದ ಅಸಲಿಯತ್ತು ನನಗೂ ಗೊತ್ತು! ನೀವು ರಾಜ್ಯ ಕಂಡ ಗ್ರೇಟ್ ಹಣಕಾಸು ಮಂತ್ರಿ, ಪ್ಲಸ್ಸೂ ಮೈನಸ್ಸಿನ ಪ್ರವೀಣ, ಪರ್ಸಂಟೇಜ್ ಪಿತಾಮಹನಷ್ಟೇ ಅಲ್ಲ, ಅನೈತಿಕ ರಾಜಕಾರಣದ ಅಸಲಿ ಅಪ್ಪ. ಈಗ ಹೇಳಿ? ಉಂಡ ಮನೆಗೆ ಮೂರು ಬಗೆದ ನೈಜ ಕಳ್ಳ ಯಾರು? ಮಿಸ್ಟರ್ ಸುಳ್ಳುರಾಮಯ್ಯ, ದಿನಕ್ಕಿಷ್ಟು ಸುಳ್ಳು, ಕ್ಷಣಕ್ಕೊಂದು ಪೊಳ್ಳು; ಇದು ನಿಮ್ಮ ಜೀವನಶೈಲಿ. ಅದಕ್ಕೇ ನೀವು ರಾಜಕೀಯ ಊಸರವಳ್ಳಿ. ಮೈಯ್ಯಲ್ಲಾ ಸುಳ್ಳನ್ನೇ ಮೆತ್ತಿಕೊಂಡು ಕಂಡವರರ ಮೇಲೆ ಸಿಡಿಸುವ ನಿಮ್ಮ ʼಸಿದ್ದಸೂತ್ರʼಕ್ಕೆ ಕೊನೆಗಾಲ ಹತ್ತಿರದಲ್ಲೇ ಇದೆ ಎಂದಿದ್ದಾರೆ.

ನಾವು ಜಲಧಾರೆ ಮಾಡುತ್ತಿದ್ದೇವೆ, ನಿಜ. ನೀರಾವರಿ ಯೋಜನೆಗಳ ಬಗ್ಗೆ ನಮಗೆ ಸ್ಪಷ್ಟತೆ ಇದೆ. ಈ ರಾಜ್ಯಕ್ಕೆ ಹೆಚ್.ಡಿ.ದೇವೇಗೌಡರು ಕೊಟ್ಟ ಕೊಡುಗೆ ಕಣ್ಮುಂದೆಯೇ ಇದೆ. 1962ರಿಂದ ಅವರು ನಡೆಸಿದ ಹೊರಾಟದ ಬಗ್ಗೆ ತಿಳಿದು ಮಾತನಾಡಿ. ಅರಿವುಗೆಟ್ಟ ಹೇಳಿಕೆ ಕೊಟ್ಟು ಅಪಹಾಸ್ಯಕ್ಕೆ ಗುರಿಯಾಗಬೇಡಿ.  ಬಿಜೆಪಿ ಬಗ್ಗೆ ನಿಮ್ಮ ವಾದಸರಣಿ ಅದ್ಭುತಃ! ನಿಮ್ಮ ಪಾಲಿಗೆ ಆ ಪಕ್ಷ ಹೊರಗಷ್ಟೇ ಕೋಮುವಾದಿ! ಹಣದ ವಿಷಯ ಎಂದಾಗ ಒಳಗೆಲ್ಲಾ ಅನುಕೂಲವಾದಿ! ಸ್ವಯಂ ಘೋಷಿತ ಸಂವಿಧಾನ ತಜ್ಞ, ಸ್ವಯಂ ಘೋಷಿತ ಸತ್ಯ ಹರಿಶ್ಚಂದ್ರ, ಈಗ ಹೇಳಿ? ಕಾಂಗ್ರೆಸ್ ಕಚೇರಿಯಲ್ಲೇ ಕಾರ್ಯಕರ್ತರ ಸಾಕ್ಷಿಯಾಗಿ “ಕಾಂಗ್ರೆಸ್ ಪಕ್ಷವನ್ನು ದೇಶದಿಂದಲೇ ಕಿತ್ತೊಗೆಯಬೇಕು” ಎಂದು ನೀವು ಮಾಡಿದ ಭೀಷಣ ಭಾಷಣ ಯಾರಿಗಯ್ಯಾ ಭೂಷಣ? ಮಾತೃಪಕ್ಷವನ್ನೇ ಮುಗಿಸಲು ಹೊರಟಿರುವ ನೀವು ಯಾವ ಟೀಮು ಎಂದು ಬಿ ಟೀಮ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಸುಳ್ಳುರಾಮಯ್ಯ, ಈ ರಾಜ್ಯ ಕಂಡ ಅಪ್ರತಿಮ ಸುಳ್ಳುಗಾರ ನೀವು. ಆಶ್ರಯ ಕೊಟ್ಟ ಪಕ್ಷಕ್ಕೇ ಹಳ್ಳ ತೋಡುತ್ತಿರುವ ನೀವು ʼಬಿಜೆಪಿ ಬಾಲಂಗೋಚಿʼ ಮತ್ತು  ʼಬಿಜೆಪಿಯ ಬೇನಾಮಿ ಆಸಾಮಿʼ ಎನ್ನುವುದು ಎಲ್ಲರಿಗೂ ಗೊತ್ತು ಎಂದು ಕಿಡಿಕಾರಿರುವ ಅವರು, ಕೊನೆಗೆ ನಾಲ್ಕು ಪ್ರಶ್ನೆಗಳನ್ನು ಕೇಳಿದ್ದಾರೆ.

1.ಆಪರೇಷನ್ ಕಮಲಕ್ಕೆ ಸಹಕರಿಸಿದ್ದಕ್ಕೆ ಸಿಕ್ಕ ಪ್ರತಿಫಲವೆಷ್ಟು?

2.ಆ ಪಾಪದ ಹಣವನ್ನು ಏನು ಮಾಡಿದಿರಿ?

3.ಹ್ಯೂಬ್ಲೆಟ್ ವಾಚಿನ ʼಸಿದ್ದರಹಸ್ಯʼವೇನು?

4.ಅರ್ಕಾವತಿ ರೀಡೂ ಬಗ್ಗೆ ಮೌನವೇಕೆ?

ಧೈರ್ಯವಿದ್ದರೆ ಉತ್ತರಿಸಿ, ವಿಷಯಾಂತರ ಬೇಡ ಎಂದು ಕುಮಾರಸ್ವಾಮಿ ಸವಾಲೆಸಿದ್ದಾರೆ.

ಟಾಪ್ ನ್ಯೂಸ್

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.