ಎಪಿಎಂಸಿ: ಜೆಡಿಎಸ್ ಸಾಧನೆಗೆ ಎಚಿxಕೆ ಅತೃಪ್ತಿ
Team Udayavani, Jan 17, 2017, 3:45 AM IST
ಬೆಂಗಳೂರು: ಅಮೆರಿಕ ಪ್ರವಾಸ ಕೈಗೊಂಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸೋಮವಾರ
ಮುಂಜಾನೆ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಇದರ ಬೆನ್ನಲ್ಲೇ ಅವರು ಪಕ್ಷ ಸಂಘಟನೆಗೆ ಮುಂದಾಗಿದ್ದು, ಬುಧವಾರ ಮತ್ತು ಗುರುವಾರ ಸ್ವಕ್ಷೇತ್ರ ರಾಮನಗರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ನಂತರ ಪಕ್ಷದ ಸಂಘಟನೆಗಾಗಿ ರಾಜ್ಯ ಪ್ರವಾಸದ ರೂಪು-ರೇಷೆ ಕುರಿತು ಚರ್ಚಿಸಲು ಮೂರು ದಿನಗಳ ಕಾಲ ಪಕ್ಷದ ಶಾಸಕರು ಹಾಗೂ ಮುಖಂಡರ ಜತೆ ಸಮಾಲೋಚನೆ ನಡೆಸಲಿದ್ದಾರೆ. ಫೆಬ್ರವರಿಯಿಂದ ಅವರು ರಾಜ್ಯ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದ್ದು, ಈಗಾಗಲೇ ವಿಭಾಗಾವಾರು ರಚಿಸಲಾಗಿರುವ ತಂಡಗಳು ಹಾಗೂ ನೂತನ ಕೋರ್ ಕಮಿಟಿ ಜತೆ ಚರ್ಚಿಸಿದ ನಂತರ ಜಿಲ್ಲಾವಾರು ಸಭೆಗಳ ಪಟ್ಟಿ ಸಿದ್ಧವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಈ ಮಧ್ಯೆ, ಎಪಿಎಂಸಿ ಚುನಾವಣೆಯಲ್ಲಿ ಪಕ್ಷದ ಸಾಧನೆ ಕುರಿತು ಎಚ್.ಡಿ.ಕುಮಾರಸ್ವಾಮಿ ಅಸಮಾಧಾನಗೊಂಡಿದ್ದಾರೆ. ಅಮೆರಿಕದಿಂದ ವಾಪಸ್ಸಾದ ನಂತರ ಜಿಲ್ಲಾವಾರು ಎಪಿಎಂಸಿ ಚುನಾವಣೆ ಫಲಿತಾಂಶ ತರಿಸಿಕೊಂಡ ಅವರು, ನಿರೀಕ್ಷಿತ
ಪ್ರಮಾಣದಲ್ಲಿ ಪಕ್ಷ ಗೆಲುವು ಸಾಧಿಸದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಗ್ರಾ ಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ ಜಿಲ್ಲೆಗಳಲ್ಲಿ ಹೆಚ್ಚು ಸ್ಥಾನ ಗೆಲ್ಲದ ಬಗ್ಗೆ ಸ್ಥಳೀಯ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು ಎಂದು ಹೇಳಲಾಗಿದೆ. “ವಿಧಾನಸಭೆ ಚುನಾವಣೆ ದಿಕ್ಸೂಚಿ ಎಂದೇ ಭಾವಿಸಲಾದ ಎಪಿಎಂಸಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ನಮ್ಮ ಸಾಮರ್ಥ್ಯ ತೋರಿಸಬೇಕಿತ್ತು. ಆದರೆ, ಒಟ್ಟಾರೆ, 3ನೇ ಸ್ಥಾನ ಪಡೆದಿರುವುದು ಸಮಾಧಾನ ತಂದಿಲ್ಲ. ಪಕ್ಷದ ಸ್ಥಳೀಯ ಮಟ್ಟದ ನಾಯಕರು ಮತ್ತಷ್ಟು ಶ್ರಮ ಹಾಕಬಹುದಿತ್ತು ಎಂದು ಹೇಳಿದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.