![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 1, 2019, 3:00 AM IST
ಮಡಿಕೇರಿ: ಟಿಪ್ಪು ಜಯಂತಿ ಆಚರಣೆಯನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ರದ್ದುಪಡಿಸಿರುವ ಬೆನ್ನಲ್ಲೇ ಟಿಪ್ಪು ಜಯಂತಿ ಆಚರಣೆ ಸಂದರ್ಭ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ದಾಖಲಾಗಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಕೊಡಗು ಜಿಲ್ಲೆಯ ಬಿಜೆಪಿ ಪ್ರಮುಖರು ಸಿಎಂ ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.
ಶಾಸಕ ಕೆ.ಜಿ ಬೋಪಯ್ಯ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ ಪ್ರಮುಖರು, 2014ರಿಂದ 2108ರ ವರೆಗೆ ಟಿಪ್ಪು ಜಯಂತಿ ಆಚರಣೆ ಮತ್ತು ಇನ್ನಿತರ ಸಂದರ್ಭಗಳಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಹಲವಾರು ಪ್ರತಿಭಟನೆಗಳು ನಡೆದಿವೆ. ಆ ಪ್ರತಿಭಟನೆಗಳನ್ನು ಹತ್ತಿಕ್ಕುವ ಪ್ರಯತ್ನವಾಗಿ ಅಮಾಯಕರನ್ನೇ ಗುರಿಯಾಗಿಟ್ಟುಕೊಂಡು ಮೊಕದ್ದಮೆಗಳನ್ನು ಹೂಡಲಾಗಿದೆ ಎಂದು ಗಮನ ಸೆಳೆದರು. ಈ ಸಂಬಂಧ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಎಲ್ಲ ಪ್ರಕರಣಗಳ ಮಾಹಿತಿ ತರಿಸಿಕೊಂಡು ಮೊಕದ್ದಮೆಗಳನ್ನು ಹಿಂಪಡೆಯಲು ಅನುಕೂಲವಾಗುವಂತೆ ಸಚಿವ ಸಂಪುಟದ ಮುಂದೆ ಮಂಡಿಸಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
You seem to have an Ad Blocker on.
To continue reading, please turn it off or whitelist Udayavani.