ಗೊಂದಲ ನಿವಾರಣೆಗೆ ತಜ್ಞರ ಸಮಿತಿ ನೇಮಿಸಿ
Team Udayavani, Sep 3, 2017, 12:05 PM IST
ಬೆಂಗಳೂರು: ವೀರಶೈವ ಮತ್ತು ಲಿಂಗಾಯತ ಪ್ರತ್ಯೇಕ ಧರ್ಮದ ಗೊಂದಲ ನಿವಾರಣೆಗೆ ತಜ್ಞರ ಸಮಿತಿ ನೇಮಕ ಮಾಡಬೇಕು ಎಂದು ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಸಮಿತಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಜಾಮದಾರ್ ಶನಿವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ, ವೀರಶೈವ ಮತ್ತು ಲಿಂಗಾಯತ ಸ್ವತಂತ್ರ ಧರ್ಮದ ಬಗ್ಗೆ ಭಿನ್ನಾಭಿಪ್ರಾಯಗಳಿರುವುದರಿಂದ ವೀರಶೈವ ಧರ್ಮದ ಬೇಡಿಕೆ ಇಡುವವರೊಂದಿಗೆ ಮುಕ್ತ ಚರ್ಚೆಗೆ ಸಿದಟಛಿರಾಗಿದ್ದೇವೆ. ಎರಡೂ ಪಂಗಡದವರಲ್ಲಿ ಭಿನ್ನಾಭಿಪ್ರಾಯ ಇರುವುದರಿಂದ ಸರ್ಕಾರವೇ ಯಾವುದಕ್ಕೆ ಮಾನ್ಯತೆ ನೀಡಬೇಕೆಂದು ಪತ್ತೆ ಹಚ್ಚಲು ತಜ್ಞರ ಸಮಿತಿ ರಚಿಸಿ ವರದಿ ಪಡೆಯಬೇಕೆಂದು ಆಗ್ರಹಿಸಿದ್ದಾರೆ.
ವೀರಶೈವರು ಶೈವ ತತ್ವ, ಆಗಮ ಸಿದಾಟಛಿಂತ, ಅಡ್ಡ ಪಲ್ಲಕ್ಕಿ ಉತ್ಸವ ಬಿಟ್ಟು ಬಸವ ತತ್ವ, ದಾಸೋಹ ಸಿದಾಟಛಿಂತವನ್ನು ಒಪ್ಪಿಕೊಂಡು ಬರುವುದಾದರೆ, ಪ್ರತ್ಯೇಕ ಧರ್ಮಕ್ಕೆ ವೀರಶೈವ ಲಿಂಗಾಯತ ಹೆಸರಿಡುವ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಬಹುದು ಎಂದು ಎಸ್.ಎಂ. ಜಾಮದಾರ್ ಹೇಳಿದ್ದಾರೆ. ಈಗಾಗಲೇ ನಮ್ಮ ಹೋರಾಟಕ್ಕೆ ಸಾಕಷ್ಟು ಬೆಂಬಲ ವ್ಯಕ್ತವಾಗಿದ್ದು, ಸಿದಟಛಿಗಂಗೆಯ ಶಿವಕುಮಾರ ಸ್ವಾಮೀಜಿ, ಸಮಾಜದ ಒಳಿತಿಗೆ ನಡೆಯುವ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಹೇಳಿದ್ದಾರೆ. ಸಮಾಜದಲ್ಲಿನ ಭಿನ್ನಾಭಿಪ್ರಾಯ ಬಿಟ್ಟು ಹೋರಾಟ ಮಾಡುವಂತೆ ಸೂಚಿಸಿದ್ದಾರೆ. ಕಿರಿಯ ಶ್ರೀಗಳು ಬಸವ ತತ್ವ ಬಿಟ್ಟು ಮಠ ಇಲ್ಲ ಎಂದಿದ್ದಾರೆ ಎಂದು ಹೇಳಿದರು.
ಅದರಂತೆ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಯೂ ಆಂತರಿಕ ಭಿನ್ನಾಭಿಪ್ರಾಯ ಬಿಟ್ಟು ಹೋರಾಟ
ಮಾಡುವಂತೆ ಸಲಹೆ ನೀಡಿದ್ದಾರೆ. ಅಲ್ಲದೇ ಎರಡು ತಿಂಗಳಿಂದ ಈಚೆಗೆ ಪಂಚ ಪೀಠಾಧೀಶರೂ, ಲಿಂಗಾಯತ ಧರ್ಮದ ಕಡೆಗೆ ಒಲವು ತೋರುತ್ತಿದ್ದು, ವೇದಿಕೆಯಲ್ಲಿ ಸಮಾನ ಆಸನದಲ್ಲಿ ಕೂಡಲು ಒಪ್ಪಿಕೊಂಡಿದ್ದಾರೆ. ಬಸವಣ್ಣನ ಭಾವಚಿತ್ರ ಹಾಕಿಕೊಳ್ಳುತ್ತಿದ್ದಾರೆ. ಅಲ್ಲದೇ ಅಡ್ಡ ಪಲ್ಲಕ್ಕಿ ಉತ್ಸವವನ್ನೂ ನಿಲ್ಲಿಸುವ ಬಗ್ಗೆ ಆಸಕ್ತಿ ತೋರಿದ್ದಾರೆ ಎಂದು ಜಾಮದಾರ್ ಹೇಳಿದರು. ಲಿಂಗಾಯತರು ಹಿಂದೂ ಧರ್ಮದ ವಿರೋಧಿಗಳು ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ನಾವು ಯಾವುದೇ ಧರ್ಮವನ್ನು ವಿರೋಧಿಸುತ್ತಿಲ್ಲ. ನಮ್ಮ ಧರ್ಮ ಹಿಂದೂ ಧರ್ಮಕ್ಕಿಂತ ಭಿನ್ನ ಎನ್ನುವುದನ್ನು ಹೇಳುತ್ತಿದ್ದೇವೆ. ಲಿಂಗಾಯತರು ಇತಿಹಾಸದಲ್ಲಿ ದೇಶ ಸೇವೆ ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಧರ್ಮ ವಿರೋಧಿಗಳು ಹೋರಾಟದ ದಾರಿ ತಪ್ಪಿಸುವ ಪ್ರಯತ್ನ ನಡೆಸುತ್ತಿದ್ದಾರೆ. ನಮ್ಮ ಹೋರಾಟ ರಾಜಕೀಯ
ಪ್ರೇರಿತವಾಗಿಲ್ಲ. ಒಂದೇ ವರ್ಷದಲ್ಲಿ ನಮಗೆ ನ್ಯಾಯ ಸಿಗುತ್ತದೆ ಎಂಬ ಭ್ರಮೆಯೂ ನಮಗಿಲ್ಲ. ನಾವು ಶಕ್ತಿ ಪ್ರದರ್ಶನ ಮಾಡುತ್ತಿಲ್ಲ. ನಮ್ಮ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಹೇಳಿದರು.
ಲಾಥೂರ್‌ನಲ್ಲಿ ಸಮಾವೇಶ ಇಂದು
ಮಹಾರಾಷ್ಟ್ರದ ಲಾಥೂರ್‌ನಲ್ಲಿ ಭಾನುವಾರ ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮಹಾರಾಷ್ಟ್ರದ ಶತಾಯುಷಿ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಬೃಹತ್ ಜನಾಂದೋಲನವನ್ನು ಉದ್ಘಾಟಿಸಲಿದ್ದಾರೆ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಜಯ ಮೃತ್ಯುಂಜಯ ಸ್ವಾಮೀಜಿ
ಹೇಳಿದ್ದಾರೆ. ಮಹಾರಾಷ್ಟ್ರದ ನಾಂದೇಡ್‌ನಿಂದ ಆರಂಭವಾಗಿರುವ ಹೋರಾಟ ಬೀದರ್ ನಂತರ ಬೆಳಗಾವಿಯಲ್ಲಿ ಯಶಸ್ವಿಯಾಗಿದೆ. ಈಗ ಅಂತರಾಜ್ಯ ಮಟ್ಟದಲ್ಲಿ ಲಿಂಗಾಯತ ಧರ್ಮಕ್ಕಾಗಿ ಹೋರಾಟ ನಡೆಯುತ್ತಿದೆ ಎಂದರು. ನಂತರ ಕಲಬುರ್ಗಿ, ವಿಜಯಪುರ, ಧಾರವಾಡಗಳಲ್ಲಿ ಸಮಾವೇಶಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಡಿಸೆಂಬರ್‌ನಲ್ಲಿ ಬೆಂಗಳೂರಿನಲ್ಲೂ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.
ನಾವು ಪ್ರತ್ಯೇಕ ಧರ್ಮ ಕೇಳುತ್ತಿಲ್ಲ. 12ನೇ ಶತಮಾನದಲ್ಲಿ ಬಸವಣ್ಣನಿಂದ ಸ್ಥಾಪನೆಯಾಗಿರುವ ಲಿಂಗಾಯತ ಧರ್ಮಕ್ಕೆ
ಸಾಂವಿಧಾನಿಕ ಮಾನ್ಯತೆ ಕೇಳುತ್ತಿದ್ದೇವೆ ಎಂದು ಸ್ವಾಮೀಜಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.