State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Team Udayavani, Nov 9, 2024, 6:45 AM IST
ಬೆಂಗಳೂರು: ಮೀಸಲು ವರ್ಗೀಕರಣ ಆಯೋಗಕ್ಕೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಲು ರಾಜ್ಯ ಸರಕಾರ ಚಿಂತನೆ ನಡೆಸಿದ್ದು, ಈ ವಾರಾಂತ್ಯದೊಳಗೆ ಅಧಿಕೃತ ಆದೇಶ ಪ್ರಕಟಿಸುವ ಸಾಧ್ಯತೆ ಇದೆ.
ಇದರ ಜತೆಗೆ 40 ಪರ್ಸೆಂಟ್ ಕಮಿಷನ್ ಆರೋಪದ ತನಿಖಾ ಸಮಿತಿಯ ಅವಧಿಯನ್ನು ಮತ್ತೆ ಮೂರು ತಿಂಗಳು ವಿಸ್ತರಿಸಲು ನಿರ್ಧರಿಸಲಾಗಿದೆ.
ಹತ್ತು ದಿನಗಳ ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಒಳಮೀಸಲು ಜಾರಿ ಗೊಳಿಸಲು ರಾಜ್ಯ ಸರಕಾರ ನಿರ್ಧರಿಸಿತ್ತು. ಈ ಸಂಬಂಧ ಆಯೋಗ ರಚನೆ ಮಾಡಿ ಮೂರು ತಿಂಗ ಳೊಳಗೆ ಅನುಷ್ಠಾನ ಮಾಡುವ ಭರವಸೆ ನೀಡಲಾಗಿತ್ತು. ಆದರೆ ಆಯೋಗಕ್ಕೆ ಯಾರನ್ನು ಅಧ್ಯಕ್ಷ ರನ್ನಾಗಿ ಮಾಡಬೇಕೆಂಬ ಬಗ್ಗೆ ಸಹಮತ ಮೂಡಿರಲಿಲ್ಲ.
ಮೀಸಲು ವರ್ಗೀಕರಣಕ್ಕೆ ಆಗ್ರಹಿಸುತ್ತಿರುವ ಸಂಘಟನೆಗಳ ಕಾರ್ಯಕರ್ತರು ನ್ಯಾ| ದಾಸ್ ಅವರನ್ನೇ ಆಯೋಗಕ್ಕೆ ಅಧ್ಯಕ್ಷ ರನ್ನಾಗಿ ಮಾಡುವಂತೆ ಸಿಎಂಗೆ ಮನವಿ ಮಾಡಿದ್ದಾರೆ.
ನ್ಯಾ| ದಾಸ್‌ಗೆ ಮೀಸಲು ವಿಷಯಕ್ಕೆ ಸಂಬಂಧಿಸಿ ಆಳವಾದ ಜ್ಞಾನ ಇರುವುದರಿಂದ ಅವರೇ ಈ ಆಯೋಗವನ್ನು ಮುನ್ನಡೆಸು ವುದಕ್ಕೆ ಸೂಕ್ತ ಎಂದು ಅಭಿ ಪ್ರಾಯ ಮಂಡಿಸಿದ್ದಾರೆ. ಇದಕ್ಕೆ ಸಿಎಂ ಒಪ್ಪಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.