![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 1, 2021, 4:36 PM IST
ಬೆಂಗಳೂರು: ಬಿಜೆಪಿ ಎಸ್‍ಸಿ ಮೋರ್ಚಾದ ರಾಜ್ಯ ಪ್ರಭಾರಿಗಳನ್ನಾಗಿ ಕರ್ನಾಟಕದ ಮೂವರನ್ನು ನೇಮಕ ಮಾಡಲಾಗಿದೆ. ಸಂಸದ ಮುನಿಸ್ವಾಮಿ ಅವರನ್ನು ಕೇರಳ ರಾಜ್ಯಕ್ಕೆ, ವೆಂಕಟೇಶ್ ಮೌರ್ಯ ಅವರನ್ನು ತಮಿಳುನಾಡು ರಾಜ್ಯಕ್ಕೆ ಮತ್ತು ಜಯಕುಮಾರ್ ಕಾಂಗೆ ಅವರನ್ನು ತೆಲಂಗಾಣ ರಾಜ್ಯಕ್ಕೆ ಪ್ರಭಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ.
ಹೊಸದಾಗಿ ನೇಮಕಗೊಂಡವರು ಈ ಜವಾಬ್ದಾರಿ ನೀಡಿರುವ ರಾಷ್ಟ್ರೀಯ ಅಧ್ಯಕ್ಷರಾದ ಜೆ. ಪಿ.ನಡ್ಡಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಎಸ್ಸಿ ಮೋರ್ಚಾದ ರಾಷ್ಟ್ರೀಯ ಪ್ರಭಾರಿ ಸಿ.ಟಿ. ರವಿ, ಎಸ್ಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಲಾಲ್ ಸಿಂಗ್ ಆರ್ಯ ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರಿಗೆ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.
ಎಸ್‍ಸಿ ಮೋರ್ಚಾ ಸಂಘಟನೆಯನ್ನು ವಿವಿಧ ರಾಜ್ಯಗಳಲ್ಲಿ ಬಲಪಡಿಸುವ ದೃಷ್ಟಿಯಿಂದ ಇವರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
You seem to have an Ad Blocker on.
To continue reading, please turn it off or whitelist Udayavani.