ಮುರಾಘಾ ಮಠಕ್ಕೆ ಜಿಲ್ಲಾ ನ್ಯಾಯಾಧೀಶರ ನೇಮಕ
Team Udayavani, Jul 3, 2023, 7:58 PM IST
ಬೆಂಗಳೂರು: ಚಿತ್ರದುರ್ಗದ ಮುರುಘಾ ರಾಜೇಂದ್ರ ಬೃಹನ್ಮಠಕ್ಕೆ ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಹೈಕೋರ್ಟ್ ಆದೇಶಿಸಿದೆ.
ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿದ್ದ ಸರಕಾರದ ಕ್ರಮವನ್ನು ರದ್ದುಪಡಿಸಿದ್ದ ಏಕ ಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾ| ಪ್ರಸನ್ನ ಬಿ. ವರಾಲೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಮಠದ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಲಯದ ನ್ಯಾಯಾಧೀಶರನ್ನು ನೇಮಿಸಿ, ಮಂಗಳವಾರ ಬೆಳಗ್ಗೆ ಅಧಿಕಾರ ವಹಿಸಿಕೊಳ್ಳಬೇಕೆಂದು ಸೂಚನೆ ನೀಡಿತು.
ತಾತ್ಕಾಲಿಕವಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿಗಳು (ಜಿಲ್ಲಾ ನ್ಯಾಯಾಧೀಶರು) ಮುರುಘಾ ಮಠ ಮತ್ತು ಮಠದ ಅಧೀನದ ಶಿಕ್ಷಣ ಸಂಸ್ಥೆಗಳ ದಿನ ನಿತ್ಯದ ವ್ಯವಹಾರಗಳನ್ನು ನೋಡಿಕೊಳ್ಳಬೇಕು. ಆದರೆ ಯಾವುದೇ ನೀತಿ ನಿರೂಪಣೆಗಳನ್ನು ಮಾಡಲು ಮುಂದಾಗಬಾರದು. ಇದಕ್ಕೆ ಜಿಲ್ಲಾಧಿಕಾರಿಗಳು ಅಗತ್ಯವಿರುವ ಸಹಕಾರವನ್ನು ನೀಡಬೇಕೆಂದು ನ್ಯಾಯಪೀಠ ನಿರ್ದೇಶನ ನೀಡಿ ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.