ಪದಾಧಿಕಾರಿಗಳ ನೇಮಕ: 12 ರಂದು ದೆಹಲಿಗೆ
Team Udayavani, Sep 8, 2019, 3:00 AM IST
ಬೆಂಗಳೂರು: ಪ್ರತಿಪಕ್ಷ ನಾಯಕನ ಆಯ್ಕೆ ಹಾಗೂ ಪಕ್ಷದ ಪದಾಧಿಕಾರಿಗಳ ನೇಮಕ ಕುರಿತಂತೆ ಚರ್ಚಿಸಲು ಸೆ.12ರಂದು ದೆಹಲಿಗೆ ತೆರಳುತ್ತಿರುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಪದಾಧಿಕಾರಿಗಳ ಪಟ್ಟಿ ಸಿದ್ದಪಡಿಸಿಕೊಳ್ಳಲಾಗಿದ್ದು, ಈ ಕುರಿತು ಹೈ ಕಮಾಂಡ್ ಜೊತೆ ಚರ್ಚಿಸಲು ಸೆ.12 ರಂದು ದೆಹಲಿಗೆ ತೆರಳಲಿದ್ದೇವೆ.
ಅದೇ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ ಕುರಿತಂತೆಯೂ ಚರ್ಚಿಸಲಾಗುವುದು ಎಂದು ಹೇಳಿದರು. ಇದೇ ವೇಳೆ, ಧಾರವಾಡದ ಹುಬ್ಬಳ್ಳಿ ಜಿಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವ ಮೂಲಕ ರಾಜ್ಯ ಸರ್ಕಾರ ದ್ವೇಷದ ರಾಜಕಾರಣವನ್ನು ಮುಂದು ವರಿಸಿದೆ. ರಾಜ್ಯ ಪೊಲೀಸರು ಇಂತಹ ಪ್ರಕರಣಗಳನ್ನು ಬೇಧಿಸುವಷ್ಟು ಸಮರ್ಥರಿದ್ದಾರೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.