ಕೆಎಎಸ್ ಅಧಿಕಾರಿಗಳ ನೇಮಕಾತಿ ಅಕ್ರಮ:ರಾಜ್ಯ ಸರ್ಕಾರ ತರಾಟೆಗೆ
Team Udayavani, Jan 19, 2019, 1:20 AM IST
ಬೆಂಗಳೂರು: 1998, 1999 ಹಾಗೂ 2004ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ಅಧಿಕಾರಿಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನ ವಿಭಾಗೀಯ ಪೀಠ 2016ರ ಜೂ.21ರಂದು ನೀಡಿದ್ದ ತೀರ್ಪನ್ನು ಈವರೆಗೆ ಪಾಲಿಸದ ರಾಜ್ಯ ಸರ್ಕಾರವನ್ನು ಶುಕ್ರವಾರ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತು.
ಅಲ್ಲದೆ, ಜ.28ರೊಳಗೆ ಹೈಕೋರ್ಟ್‌ನ ತೀರ್ಪು ಪಾಲಿಸಬೇಕು, ಇಲ್ಲದಿದ್ದರೆಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ರೋಪಗಳನ್ನು ನಿಗದಿಪಡಿಸಲಾಗುವುದು ಎಂದು ಸರ್ಕಾರಕ್ಕೆ ತಾಕೀತು ಮಾಡಿದೆ. ಈ ಕುರಿತಂತೆ ಎಸ್. ಶ್ರೀನಿವಾಸ ಮತ್ತಿತರರು ಸಲ್ಲಿಸಿರುವ “ನ್ಯಾಯಾಂಗ ನಿಂದನೆ ಅರ್ಜಿ’ಯ ವಿಚಾರಣೆ ನಡೆಸಿದ ನ್ಯಾ.ಬಿ.ವಿ.ನಾಗರತ್ನ ಹಾಗೂ ನ್ಯಾ.ಅಶೋಕ್ ನಿಜಗಣ್ಣನವರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದರೂ, ಇನ್ನೂ ತೀರ್ಪು ಜಾರಿಗೆ ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿತು.
ಅರ್ಜಿ ವಿಚಾರಣೆ ವೇಳೆ, ಹೈಕೋರ್ಟ್ ತೀರ್ಪು ಪಾಲನೆಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಸರ್ಕಾರದ ಪರ ವಕೀಲರನ್ನು ನ್ಯಾಯಪೀಠ ಪ್ರಶ್ನಿಸಿತು. ಅದಕ್ಕೆ ಹಿಂದೆ ಪ್ರಕಟಿಸಲಾಗಿದ್ದ ಪರಿಷ್ಕೃತ ನೇಮಕ ಪಟ್ಟಿಯಲ್ಲೂ ಕೆಲವೊಂದು ವ್ಯತ್ಯಾಸಗಳಾಗಲಿವೆ. ಹಾಗಾಗಿ, ಆ ಬಗ್ಗೆ ಸ್ಪಷ್ಟನೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುವುದು. ಅಲ್ಲದೇ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮುಂದೆಯೂ ನ್ಯಾಯಾಂಗ ನಿಂದನೆ ಎದುರಿಸುತ್ತಿದೆ.
ಹಾಗಾಗಿ, ಕಾಲಾವಲಾಶ ಬೇಕು ಎಂದು ಸರ್ಕಾರದ ಪರ ವಕೀಲರು ತಿಳಿಸಿದರು. ಇದರಿಂದ ಕೋಪಗೊಂಡ ನ್ಯಾ.ನಾಗರತ್ನ, “ಅಕ್ರಮ ನೇಮಕಾತಿ ಹೊಂದಿದವರನ್ನು ಸರ್ಕಾರ ಕಾಪಾಡುತ್ತಿರುವಂತಿದೆ.
ಹೈಕೋರ್ಟ್ ತೀರ್ಪು ಪಾಲನೆಗೆ ಯಾವುದೇ ತಡೆ ಇಲ್ಲ. ಹಾಗಾಗಿ, ಮೊದಲು ವಿಭಾಗೀಯ ಪೀಠದ ತೀರ್ಪಿನಂತೆ ಅರ್ಹರಿಗೆ ನೇಮಕಾತಿ ಆದೇಶ ನೀಡಿ. ಇಲ್ಲದಿದ್ದರೆ ಪ್ರತಿವಾದಿಗಳಾಗಿರುವ ಸಂಬಂಧಪಟ್ಟ ಅಧಿಕಾರಿಗಳ ವಿರುದಟಛಿ ದೋಷಾರೋಪಣೆ ಹೊರಿಸುವ ಪ್ರಕ್ರಿಯೆ ಆರಂಭಿಸಬೇಕಾದೀತು ಎಂದು ಎಚ್ಚರಿಕೆ ನೀಡಿ ವಿಚಾರಣೆ ಮುಂದೂಡಿದರು.
ಇದಕ್ಕೂ ಮೊದಲು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಹೈಕೋರ್ಟ್‌ನ ವಿಭಾಗೀಯ ಪೀಠದ ಆದೇಶವನ್ನು ಯಾವುದೇ ಬದಲಾವಣೆಗೆ ಒಪ್ಪದೆ ಸುಪ್ರೀಂಕೋರ್ಟ್ ಯಥಾವತ್ತಾಗಿ ಎತ್ತಿ ಹಿಡಿದಿದೆ. ಆದರೆ, ರಾಜ್ಯ ಸರ್ಕಾರ ಇಲ್ಲ ಸಲ್ಲದ ಕಾರಣಗಳನ್ನು ಮುಂದಿಟ್ಟುಕೊಂಡು ಹಾಲಿ ಸೇವೆಯಲ್ಲಿರುವ ಕಳಂಕಿತರನ್ನು ರಕ್ಷಿಸುವ ಉದ್ದೇಶದಿಂದ ಹೈಕೋರ್ಟ್ ತೀರ್ಪು ಜಾರಿಗೆ ವಿಳಂಬ ಮಾಡುತ್ತಿದೆ ಎಂದು ದೂರಿದರು.
ಅರ್ಜಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್,ಡಿಪಿಎಆರ್ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಮತ್ತು ಕೆಪಿಎಸ್‌ಸಿ ಕಾರ್ಯದರ್ಶಿ ಆರ್.ಆರ್.ಜನ್ನು ಅವರನ್ನು
ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.