ಪೊಲೀಸ್ ದೂರು ಪ್ರಾಧಿಕಾರದ ಅಧ್ಯಕ್ಷರ ನೇಮಕ: ಸರ್ಕಾರಕ್ಕೆ ನೋಟಿಸ್
Team Udayavani, Jul 5, 2019, 5:31 AM IST
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತಂತೆ ವಕೀಲೆ ಸುಧಾ ಕಾಟವಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಯು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಎಚ್.ಟಿ. ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯ ದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾ ರಣಾ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿತು.
ಅಲ್ಲದೇ ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ಮುಖ್ಯಸ್ಥರನ್ನು ನೇಮಕ ಮಾಡುವ ಹಾಗೂ ಅರ್ಜಿದಾರರು ದೂರಿರುವಂತೆ ಪ್ರಾಧಿಕಾರಕ್ಕೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಒಂದು ತಿಂಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರದ ಪರ ವಕೀಲರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಆಗಸ್ಟ್ 6ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.