ಕ್ರೀಡಾ ತರಬೇತುದಾರರ ನೇಮಕ
Team Udayavani, Sep 27, 2017, 9:46 AM IST
ಬೆಂಗಳೂರು: ರಾಜ್ಯದಲ್ಲಿ ಕ್ರೀಡೆಗೆ ಉತ್ತೇಜನ ನೀಡುವ ಉದ್ದೇಶದಿಂದ 100 ಮಂದಿ ಕ್ರೀಡಾ ತರಬೇತುದಾರರ ನೇಮಕ ಮಾಡಿಕೊಳ್ಳಲಿ ದ್ದೇವೆ, ಜತೆಗೆ ಕ್ರೀಡಾ ತರಬೇತುದಾರರ ವೇತನವನ್ನು ಹೆಚ್ಚಳ ಮಾಡಿದ್ದೇವೆಂದು ಯುವ ಸಬಲೀಕರಣ, ಕ್ರೀಡೆ ಇಲಾಖೆ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಇಲಾಖಾ ವ್ಯಾಪ್ತಿಯಲ್ಲಿ 14 ಈಜುಕೊಳ ಇದ್ದು, ಇದರ ನಿರ್ವಹಣೆಯನ್ನು ಗುತ್ತಿಗೆಯ ವರಿಗೆ ನೀಡುವುದನ್ನು ರದ್ದು ಮಾಡಿದ್ದೇವೆ. ಇಲಾಖೆಯಿಂದಲೇ ನಿರ್ವಹಣೆ ಮಾಡುತ್ತಿರು ವುದರಿಂದ ಆದಾಯವೂ ಹೆಚ್ಚಾಗುತ್ತಿದೆ. ಕಳೆದ ವರ್ಷ 14 ಈಜುಕೊಳದಿಂದ 24.88 ಲಕ್ಷ ರೂ. ಆದಾಯ ಬಂದಿದ್ದು, ಈ ವರ್ಷದಲ್ಲಿ 58.2 ಲಕ್ಷ ರೂ. ಆದಾಯ ಬಂದಿದೆ ಎಂಬ ಮಾಹಿತಿ ನೀಡಿದರು. ಕ್ರೀಡಾ ನೀತಿಗೆ ಸಂಬಂಧಿಸಿದ ನಾಲ್ಕು ವಿಭಾಗದಲ್ಲಿ ಸಭೆ ಕರೆದು, ಎಲ್ಲರಿಂದಲೂ ಅಭಿಪ್ರಾಯ ಸಂಗ್ರಹಿಸಿ, ನೀತಿಯನ್ನು ಅಂತಿಮ ಗೊಳಿಸಿದ್ದೇವೆ. ನಮ್ಮ ಅವಧಿ ಮುಗಿಯುವುದರೊಳಗೆ ಕ್ರೀಡಾ ನೀತಿ ಅನುಷ್ಠಾನ ಮಾಡಲಿದ್ದೇವೆ ಎಂದರು.
ಪ್ರತ್ಯೇಕ ಹಾಸ್ಟೆಲ್: ಜಿಲ್ಲಾ ಮಟ್ಟದ ಮಹಿಳಾ ಮತ್ತು ಪುರುಷರ ಹಾಸ್ಟೆಲ್‌ಗಳನ್ನು ಪ್ರತ್ಯೇಕಿ ಸುವ ಕಾರ್ಯ ನಡೆಯುತ್ತಿದೆ. ಬೆಳಗಾವಿ, ದಾವಣಗೆರೆ, ವಿಜಯಪುರ ಹಾಗೂ ಉಡುಪಿ ಯಲ್ಲಿ ತಲಾ 1 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಕ್ರೀಡಾಪಟುಗಳಿಗೆ ಹಾಸ್ಟೆಲ್ ನಿರ್ಮಾಣ ಮಾಡುತ್ತಿದ್ದೇವೆ. ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಠಿಕಾಂಶ ಯುಕ್ತ ಆಹಾರ ನೀಡುತ್ತಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.