ಪ್ರಾಣಿ ಹಿಂಸೆ ತಡೆ ಕಾನೂನು ಬಿಗಿಗೊಳಿಸಲು ಸೂಕ್ತ ಕ್ರಮ
Team Udayavani, Jun 5, 2020, 7:47 AM IST
ಬೆಂಗಳೂರು: ಪ್ರಾಣಿ ಹಿಂಸೆಗೆ ಸಂಬಂಧಪಟ್ಟ ಕಾನೂನುಗಳನ್ನು ಮತ್ತಷ್ಟು ಬಿಗಿಗೊಳಿಸಲು ಅಗತ್ಯಕ್ರಮ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಹೇಳಿದ್ದಾರೆ. ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯ ಪೂರ್ಣ ಪ್ರಮಾಣದ ಆಡಳಿತ ಮಂಡಳಿ ಸಭೆ ನಂತರ ಮಾತನಾಡಿ, ಪ್ರಾಣಿಗಳನ್ನು ಅನಧಿಕೃತವಾಗಿ ಸಾಗಣೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಜಾನುವಾರುಗಳ ರೋಗ್ಯ ರಕ್ಷಣೆಗಾಗಿ 4214 ಪಶುವೈದ್ಯಕೀಯ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಪಶು ಹಾಗೂ ಪಕ್ಷಿಗಳ ಸಂರಕ್ಷಣೆಗಾಗಿ ರಾಜ್ಯದಲ್ಲಿ ಸ್ಥಾಪಿಸಲಾದ ಪ್ರಾಣಿಕಲ್ಯಾಣ ಸಂಘ ಸಂಸ್ಥೆಗಳಿಗೆ ಮಾನ್ಯತೆ ನೀಡುವುದು, ಪ್ರಾಣಿಗಳಿಗಾಗಿ ಶೆಡ್ಡುಗಳು, ನೀರಿನ ತೊಟ್ಟಿಗಳ ನಿರ್ಮಾಣವನ್ನು ಪ್ರೋತ್ಸಾಹಿ ಸುವುದು, ಪ್ರಾಣಿಗಳಿಗೆ ಸಾಗಾಣಿಕೆ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲಾ ಪ್ರಾಣಿದಯಾ ಸಂಘಗಳ ಅಧ್ಯಕ್ಷರಾಗಿದ್ದು, ಪಶುಸಂಗೋಪನೆ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿ ರುತ್ತಾರೆ. ಮಂಡಳಿಗೆ ವಿವಿಧ ಕ್ಷೇತ್ರಗಳ ಅನುಭವಿಗಳನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.