ಬರದಿರಲಿ ಬರ; ಪರಿಸ್ಥಿತಿ ನೋಡಿಕೊಂಡು ಬರಗಾಲ ಘೋಷಣೆ: ಕೃಷ್ಣಬೈರೇಗೌಡ
ಮುಂದಿನ ತಿಂಗಳು ಸೂಕ್ತ ತೀರ್ಮಾನ; ಮೋಡ ಬಿತ್ತನೆ ಯೋಚನೆ ಸದ್ಯಕ್ಕಿಲ್ಲ
Team Udayavani, Jun 20, 2023, 7:05 AM IST
ಬೆಂಗಳೂರು: ರಾಜ್ಯದ ಜಲಾಶಯಗಳಲ್ಲಿ ನೀರಿನ ಕೊರತೆ ಉಂಟಾಗಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳ್ಳುವ ಆತಂಕ ಎದುರಾಗಿರುವಂತೆಯೇ ಬರಗಾಲದ ಕರಿಛಾಯೆಯೂ ತಲೆದೋರಿದೆ. ಮುಂಗಾರು ಮಂಕಾಗಿರುವ ಹಿನ್ನೆಲೆಯಲ್ಲಿ ಇಂಥ ಬೆಳವಣಿಗೆಯೂ ಸಂಭಾವ್ಯ. ಜೂನ್ ತಿಂಗಳಿನಲ್ಲಿ ಇಪ್ಪತ್ತು ದಿನಗಳು ಕಳೆದರೂ ಮುಂಗಾರು ಚುರುಕುಗೊಂಡಿಲ್ಲ. ಒಂದು ವೇಳೆ ಇದೇ ಸ್ಥಿತಿ ಮುಂದುವರಿದರೆ ಮುಂದಿನ ತಿಂಗಳಿನ ಮೊದಲ ವಾರದಲ್ಲಿ ರಾಜ್ಯ ಸರಕಾರ ಬರ ಪರಿಸ್ಥಿತಿ ಘೋಷಿಸುವ ನಿಟ್ಟಿನಲ್ಲಿ ಗಂಭೀರ ಚಿಂತನೆ ನಡೆಸಲಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, 20 ದಿನಗಳಲ್ಲಿ ವಾಡಿಕೆಗಿಂತ ಸಾಕಷ್ಟು ಕಡಿಮೆ ಮಳೆಯಾಗಿದೆ. ಮುಂಬರುವ ದಿನಗಳಲ್ಲಿ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ. ಹವಾಮಾನ ವಿಜ್ಞಾನಿಗಳು ಕೂಡ ಈ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ಹೊರತಾಗಿಯೂ ವರುಣನ ಅವಕೃಪೆ ಮುಂದುವರಿದರೆ, ಮುಂದಿನ ತಿಂಗಳಿನ ಒಂದನೇ ತಾರೀಕು ಅಥವಾ ಮೊದಲ ವಾರದಲ್ಲಿ ಬರ ಘೋಷಣೆಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸದ್ಯ ಮೋಡ ಬಿತ್ತನೆ ಇಲ್ಲ
ಮೋಡ ಬಿತ್ತನೆ ಬಗ್ಗೆ ಸದ್ಯ ಚಿಂತಿಸಿಲ್ಲ. ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿಗಳ ಪ್ರಕಾರ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಶೇ. 96ರಿಂದ 104ರಷ್ಟು ಆಗುವ ನಿರೀಕ್ಷೆ ಇದೆ. ರವಿವಾರದಿಂದ ಮಳೆ ತುಸು ಬಿರುಸಾಗಿದೆ. ಮುಂದಿನ ಎರಡು ದಿನಗಳಲ್ಲಿ ಕಲ್ಯಾಣ ಕರ್ನಾಟಕದಲ್ಲೂ ಮುಂಗಾರು ವ್ಯಾಪಿಸಲಿದೆ. ಕರಾವಳಿಯ ಉಡುಪಿ, ಮಂಗಳೂರು, ಕಾರವಾರದಲ್ಲಿ ಕಳೆದ 24 ತಾಸುಗಳಲ್ಲಿ ವಾಡಿಕೆಯಂತೆ ಮಳೆ ಸುರಿದಿರುವುದು ಆಶಾಭಾವನೆ ಮೂಡಿಸಿದೆ. ಆದರೂ ನಿರೀಕ್ಷೆ ಹುಸಿಯಾಗಿ ಮಳೆ ಕೊರತೆ ಮುಂದುವರಿದರೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೃಷ್ಣಬೈರೇಗೌಡ ಹೇಳಿದರು.
806 ಕಡೆ ಕುಡಿಯುವ ನೀರಿಗೆ ಬರ
ರಾಜ್ಯದ 806ಕ್ಕೂ ಹೆಚ್ಚು ವಸತಿ ಪ್ರದೇಶಗಳಲ್ಲಿ ನೀರಿಗೆ ಹಾಹಾಕಾರ ಉಂಟಾಗಿದ್ದು, ಅಲ್ಲೆಲ್ಲ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಪಡೆದು ನೀರು ಪೂರೈಸಲಾಗುತ್ತಿದೆ. ಹಲವೆಡೆ ಟ್ಯಾಂಕರ್ ನೀರು ಒದಗಿಸಲಾಗುತ್ತಿದೆ. ಅಧಿಕಾರಿಗಳು ಈ ವಿಚಾರದಲ್ಲಿ ಉದಾಸೀನರಾಗಬಾರದು ಎಂದು ಸೂಚಿಸಲಾಗಿದೆ. ಸಮಸ್ಯೆ ಉಂಟಾದ 24 ತಾಸುಗಳ ಒಳಗೆ ನೀರು ಪೂರೈಸಲು ನಿರ್ದೇಶಿಸಿರುವುದಾಗಿ ಹೇಳಿದರು.
ಕುಡಿಯುವ ನೀರಿನ ಕೊರತೆಯಾಗದಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ವಾರದಲ್ಲಿ ತಾವೂ ಕಂದಾಯ ವಿಭಾಗವಾರು ಸಭೆಗಳನ್ನು ನಡೆಸಿ, ಸ್ಥಿತಿಗತಿ ತಿಳಿದುಕೊಂಡು ಸೂಕ್ತ ನಿರ್ದೇಶನಗಳನ್ನು ನೀಡಲಿರುವುದಾಗಿ ಸಚಿವರು ತಿಳಿಸಿದರು.
ಶೇ. 72ರಷ್ಟು ಮಳೆ ಕೊರತೆ
ರಾಜ್ಯದಲ್ಲಿ ಪ್ರಸಕ್ತ ಮುಂಗಾರಿನಲ್ಲಿ ಜೂ. 1ರಿಂದ 17ರ ವರೆಗೆ ವಾಡಿಕೆಗಿಂತ ಶೇ. 72ರಷ್ಟು ಮಳೆ ಕೊರತೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣ ಕೇಂದ್ರ ತಿಳಿಸಿದೆ. ಒಟ್ಟಾರೆ ಶೇ. 72ರಲ್ಲಿ ಮಲೆನಾಡು ಭಾಗದಲ್ಲಿ ಅತೀ ಹೆಚ್ಚು, ಶೇ. 83ರಷ್ಟು ಮಳೆ ಖೋತಾ ಆಗಿದೆ. ಕರಾವಳಿಯಲ್ಲಿ ಶೇ. 77, ದಕ್ಷಿಣ ಒಳನಾಡಿನಲ್ಲಿ ಶೇ. 55, ಉತ್ತರ ಒಳನಾಡಿನಲ್ಲಿ ಶೇ. 69ರಷ್ಟು ಮಳೆ ಕೊರತೆಯಾಗಿದೆ.
ಕೆಆರ್‌ಎಸ್: 3.81 ಟಿಎಂಸಿ ನೀರು ಮಾತ್ರ ಬಾಕಿ
ಶ್ರೀರಂಗಪಟ್ಟಣ: ಕೆಆರ್‌ಎಸ್ ಅಣೆಕಟ್ಟಿನಲ್ಲಿ ನೀರಿನ ಸಂಗ್ರಹ ಮಟ್ಟ ಕುಸಿತಗೊಂಡಿದೆ. ಜಲಾ ಶ ಯ ದಲ್ಲಿ ಒಟ್ಟು 10.811 ಟಿಎಂಸಿ ನೀರಿದ್ದು, ಈ ಪೈಕಿ 3.811 ಟಿಎಂಸಿ ನೀರನ್ನು ಮಾತ್ರ ಬಳಕೆ ಮಾಡಿಕೊಳ್ಳಬಹುದು. ಉಳಿದ 7 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲು ಸಾಧ್ಯವಿಲ್ಲ. ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆಯಾಗದ್ದರಿಂದ ಜಲಾಶಯಕ್ಕೆ ನೀರು ಹರಿದು ಬಂದಿಲ್ಲ. ಐದು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಜಲಾಶಯದ ನೀರಿನ ಮಟ್ಟ ತೀರಾ ಕಡಿಮೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.