ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಅನುಮೋದನೆ: ಸಿಎಂ ಬೊಮ್ಮಾಯಿ


Team Udayavani, Aug 4, 2022, 4:31 PM IST

ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಅನುಮೋದನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಸಚಿವ ಸಂಪುಟದ ಅನುಮೋದನೆ ದೊರೆತಿದ್ದು, ಗ್ಯಾರೇಜ್ ಸಂಶೋಧನೆಗಳಿಂದ ಹಿಡಿದು ಸಾಂಸ್ಥಿಕ ಸಂಶೋಧನೆಗಳವರೆಗೆ ಪ್ರೋತ್ಸಾಹ, ಸಹಕಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ ಶಾ ಅವರೊಂದಿಗೆ ಭಾಗವಹಿಸಿ ಮಾತನಾಡಿದರು.

ಬೆಂಗಳೂರಿನಲ್ಲಿ ಜೆನೋಮ್ಯಾಟಿಕ್ಸ್ ನಿಂದ ಏರೋಸ್ಪೇಸ್ ವರೆಗೆ 400 ಅಂತಾರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರಗಳಿವೆ. ಬೆಂಗಳೂರು ನಗರದಲ್ಲಿ ಹೊರತುಪಡಿಸಿದರೆ, ಪ್ರಪಂಚದ ಯಾವುದೇ ನಗರಗಳಲ್ಲಿ ಈ ಸಂಖ್ಯೆಯ ಆರ್ ಎಂಡ್ ಡಿ ಕೇಂದ್ರಗಳನ್ನು ಕಾಣಲು ಸಾಧ್ಯವಿಲ್ಲ ಎಂದರು.

ಅಭಿವೃದ್ಧಿಯಲ್ಲಿ ಕೈಗಾರಿಕೆಗಳ ಕೊಡುಗೆ: ರಾಜ್ಯದಲ್ಲಿ ಉದ್ಯೋಗ ನೀತಿಯನ್ನು ರೂಪಿಸಲಾಗಿದ್ದು, ಉದ್ಯೋಗದಾತ ಉದ್ಯಮಿಗಳಿಗೆ ಪ್ರೋತ್ಸಾಹಕಗಳನ್ನು ನೀಡಲಾಗುವುದು. ಸೆಮಿಕಂಡಕ್ಟರ್ ನೀತಿ, ವಿದ್ಯುತ್ ಚಾಲಿತ ವಾಹನ ನೀತಿ, ನವೀಕರಿಸಬಹುದ ಇಂಧನ ನೀತಿಗಳನ್ನು ರೂಪಿಸಲಾಗಿದೆ. ಈ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯಕ್ಕೆ 110 ಲಕ್ಷ ಕೋಟಿ ರೂ.ಗಳ ವಿದೇಶಿ ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಹೈಡ್ರೋಜನ್ ಇಂಧನ, ಸಮುದ್ರ ನೀರಿನಿಂದ ಅಮೋನಿಯಾ ಉತ್ಪಾದನೆಗೆ ಒತ್ತು ನೀಡಲಾಗುತ್ತಿದೆ. ಕರ್ನಾಟಕದ ಅಭಿವೃದ್ಧಿಯಲ್ಲಿ ಕೈಗಾರಿಕೆಗಳ ಕೊಡುಗೆಗೆ ಮನ್ನಣೆ ನೀಡಲಾಗುತ್ತಿದೆ. ಭಾರತದಲ್ಲಿ ಅಮೃತ ಕಾಲವನ್ನು ಸ್ಥಾಪಿಸುವ ಕೆಲಸನವನ್ನು ಎಲ್ಲರೂ ಒಗ್ಗಟ್ಟಾಗಿ ಮಾಡಬೇಕಿದೆ ಎಂದರು.

ಆರ್ಥಿಕತೆಗೆ ರಾಜ್ಯದ ಕೊಡುಗೆ: ದೇಶದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ರಾಜಮಹಾರಾಜರ ಕಾಲದಿಂದಲೂ ಪ್ರಗತಿಪರ ಅಭಿವೃದ್ಧಿ, ಆರೋಗ್ಯ, ಶಿಕ್ಷಣ, ವಾಣಿಜ್ಯ, ತಂತ್ರಜ್ಞಾನದ ಬೆಳವಣಿಗೆಗೆ ಒತ್ತು ನೀಡಲಾಗಿದೆ. ರಾಜ್ಯದಲ್ಲಿ ತಂತ್ರಜ್ಞಾನ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಕರ್ನಾಟಕ ಐಟಿಬಿಟಿ, ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವದ ಪಾಶ್ಚಿಮಾತ್ಯ ರಾಷ್ಟ್ರಗಳನ್ನು ಹಿಂದಿಕ್ಕುತ್ತಿದೆ. ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಕರ್ನಾಟಕ ಒಂದು ಟ್ರಿಲಿಯನ್ ಡಾಲರ್ ನಷ್ಟು ಕೊಡುಗೆ ನೀಡಬೇಕೆನ್ನುವ ಗುರಿ ಇದೆ. ಇದಕ್ಕಾಗಿ ವಲಯವಾರು ಯೋಜನೆಗಳನ್ನು ರೂಪಿಸಲಾಗಿದೆ ಎಂದರು.

ಕೃಷಿಯಿಂದ ಆರ್ಥಿಕ ಭದ್ರತೆ: ಕರ್ನಾಟಕ ಕೃಷಿ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಕಂಡಿದೆ. 10 ಕೃಷಿ ಹವಾಮಾನ ವಲಯಗಳು ರಾಜ್ಯದಲ್ಲಿದ್ದು, ವರ್ಷಪೂರ್ತಿ ಕೃಷಿ ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಕೃಷಿ ವಲಯದ ಶೇ.1 ಅಭಿವೃದ್ಧಿ, ಉತ್ಪಾದನಾ ಕ್ಷೇತ್ರದಲ್ಲಿ ಶೇ. 4 ಹಾಗೂ ಸೇವಾ ವಲಯದಲ್ಲಿ ಶೇ. 10 ರಷ್ಟು ಅಭಿವೃದ್ಧಿಗೆ ಕಾರಣವಾಗುತ್ತದೆ. ಆಹಾರ ಕ್ಷೇತ್ರ ಆಹಾರ ಭದ್ರತೆಯ ಜೊತೆಗೆ ಆರ್ಥಿಕ ಭದ್ರತೆಯನ್ನೂ ಕೊಡುವುದರಿಂದ ಉದ್ಯಮಿಗಳು ಆಹಾರ ಕ್ಷೇತ್ರದತ್ತ ಗಮನಹರಿಸಬೇಕು. ಆಹಾರ ಮತ್ತು ಸೇವಾ ವಲಯದ ಸಂಪರ್ಕ ಗಟ್ಟಿಗೊಳ್ಳಬೇಕು. ಇದಕ್ಕೆ ಪೂರಕವಾದ ನೀತಿಗಳನ್ನೂ ರೂಪಿಸಲಾಗಿದೆ. ಪ್ರಧಾನಿಗಳ ಆಶಯವಾದ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಕಾರವಾದಾಗ, ರೈತರ ಆದಾಯವೂ ದುಪ್ಪಟ್ಟಾಗುತ್ತದೆ. ಆಗ ಶೇ. 60 ಪ್ರತಿಶತ ಕೃಷಿಯನ್ನೇ ನಂಬಿರುವ ಜನರ ಜೀವನ ಸುಧಾರಣೆ ಸಾಧ್ಯ. ತಳಮಟ್ಟದ ಶ್ರಮಿಕರೇ ಆರ್ಥಿಕತೆಯ ಬೆನ್ನೆಲುಬು ಆಗಿದ್ದಾರೆ. ಮುಂದಿನ 25 ವರ್ಷಗಳ ಅಮೃತ ಕಾಲದಲ್ಲಿ ಶ್ರಮಿಕ ವರ್ಗದ ಅಭಿವೃದ್ಧಿಯನ್ನು ಗುರಿಯಾಗಿಸಿಕೊಳ್ಳಬೇಕಿದೆ ಎಂದರು.

ಆತ್ಮವಿಶ್ವಾಸ ತುಂಬಿಸಿದ ಆತ್ಮನಿರ್ಭರ: ಒಂದು ದೇಶ 75 ವರ್ಷಗಳಲ್ಲಿ ಅಗಾಧ ಅನುಭವವನ್ನು ಹೊಂದಿರುತ್ತದೆ. ಅನೇಕ ಏಳುಬೀಳುಗಳನ್ನು ಕಂಡಿದೆ. ಪ್ರಜಾಪ್ರಭುತ್ವಕ್ಕೆ ಹಾಕಲಾಗಿದ್ದ ಸವಾಲುಗಳನ್ನು ದೇಶದ ಜನರ ನೈತಿಕ ಶಕ್ತಿಯಿಂದ ಎದುರಿಸಲಾಯಿತು. ಮೇಕ್ ಇನ್ ಇಂಡಿಯಾ ನೀತಿ ಭಾರತವನ್ನು ಸದೃಢವಾಗಿಸಿತು. ಆತ್ಮನಿರ್ಭರ ಮಂತ್ರದಿಂದ ದೇಶದ ಜನರ ಆತ್ಮವಿಶ್ವಾಸ ಹೆಚ್ಚಿತು. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಪ್ರತಿಯೊಬ್ಬ ನಾಗರಿಕರಲ್ಲಿ ಆತ್ಮವಿಶ್ವಾಸವನ್ನು ತುಂಬಿದರು. ದೇಶದ ಕಟ್ಟಕಡೆಯ ವ್ಯಕ್ತಿಯ ಆಶಾಭಾವವೇ ಈ ದೇಶದ ಶಕ್ತಿ. ಕಟ್ಟಕಡೆಯ ವ್ಯಕ್ತಿ ದೇಶದ ಅಭಿವೃದ್ಧಿಯಲ್ಲಿ ಭಾಗಿಯಾಗುವ ಮೂಲಕ ದೇಶದ ಭವಿಷ್ಯವಾಗುತ್ತಾನೆ. ಈ ನೀತಿಯನ್ನೇ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬಿಂಬಿಸುತ್ತದೆ. ದೂರದೃಷ್ಟಿಯ, ಶಕ್ತಿಯುತ ನಾಯಕ ಬೇಕಾಗುತ್ತದೆ. ಈ ಗುಣಗಳನ್ನು ನಾವು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಲ್ಲಿ ಕಾಣಬಹುದಾಗಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಕಿಶನ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಚಿವ ಮುರುಗೇಶ ನಿರಾಣಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.