ಆರಗ ಜ್ಞಾನೇಂದ್ರ ಗೆ ಒಲಿದ ಮಂತ್ರಿ ಪಟ್ಟ
ಪಕ್ಷ ಅಧಿಕಾರದಲ್ಲಿದ್ದಾಗಲೆಲ್ಲಾ ಅವಕಾಶ ವಂಚಿತರೆಂಬ ಹಣೆಪಟ್ಟಿ ದೂರ!
Team Udayavani, Aug 4, 2021, 11:01 AM IST
ತೀರ್ಥಹಳ್ಳಿ : ಶಾಸಕ ಆರಗ ಜ್ಞಾನೇಂದ್ರರಿಗೆ ನಿರೀಕ್ಷೆ ಯಂತೆ ಮಂತ್ರಿ ಸ್ಥಾನ ಒಲಿದಿದೆ.ಪ್ರತಿ ಬಾರಿಯೂ ಅವಕಾಶದಿಂದ ವಂಚಿತರಾಗುತ್ತಿದ್ದ ಶಾಸಕ ಆರಗ ಜ್ಞಾನೇಂದ್ರರು ಇಂದು ಕ್ಯಾಬಿನೆಟ್ ದರ್ಜೆ ಸಚಿವರಾಗಿ ಮಧ್ಯಾಹ್ನ 2.15 ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸುದೀರ್ಘ 45 ವರ್ಷಗಳ ಕಾಲ ತಾಲೂಕಿನಾದ್ಯಂತ ಬಿಜೆಪಿ ಪಕ್ಷವನ್ನು ಸಂಘಟಿಸುತ್ತಾ ತಮ್ಮನ್ನು ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡಿರುವ ಶಾಸಕ ಆರಗ ಜ್ಞಾನೇಂದ್ರರು ಜಾತ್ಯಾತೀತ ನೆಲೆಗಟ್ಟಿನ ತೀರ್ಥಹಳ್ಳಿಯಲ್ಲಿ ಬಿಜೆಪಿ ನೆಲೆಯೂರಲು ಭದ್ರ ಬುನಾದಿ ಕಲ್ಪಿಸಿಕೊಟ್ಟಿದ್ದಾರೆ.
ಸತತ 9 ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿ 4 ಬಾರಿ ಶಾಸಕರಾಗಿರುವ ಆರಗ ಜ್ಞಾನೇಂದ್ರರವರು ಓರ್ವ ಹಿರಿಯ ಮುತ್ಸದ್ಧಿ ರಾಜಕಾರಣಿ.ಪಕ್ಷ ಅಧಿಕಾರದಲ್ಲಿರಲಿ ಬಿಡಲಿ ತಾಲೂಕಿನಲ್ಲಿ ತಮ್ಮದೇ ಕಾರ್ಯಶೈಲಿ ಹಾಗೂ ವಿಭಿನ್ನ ವ್ಯಕ್ತಿತ್ವದ ಮೂಲಕ ತಳಮಟ್ಟದ ಕಾರ್ಯಕರ್ತರನ್ನು ಒಗ್ಗೂಡಿಸುವುದರಲ್ಲಿ ಸಿದ್ದ ಹಸ್ತರು.
ಇದನ್ನೂ ಓದಿ : ಬೊಮ್ಮಾಯಿ ಸಂಪುಟದಲ್ಲಿ ಸುನಿಲ್, ಅಂಗಾರ ಗೆ ಸಚಿವ ಸ್ಥಾನ ಬಹತೇಕ ಖಚಿತ .!?
ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಾ,ಪಕ್ಷ ಬಲವರ್ಧನೆಗೆ ಕಾರಣರಾಗಿರುವ ಸನ್ಮಾನ್ಯ ಶಾಸಕ ಆರಗ ಜ್ಞಾನೇಂದ್ರರು ಅಧಿಕಾರಕ್ಕೋಸ್ಕರ ಎಂದೂ ಲಾಬಿ ಮಾಡದೇ ಹೋದರೂ ಕ್ಷೇತ್ರದ ಜನತೆ ಹಾಗೂ ಕಾರ್ಯಕರ್ತರಲ್ಲಿ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಜ್ಞಾನೇಂದ್ರರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ದೊರಕುತ್ತದೆಂಬ ಅಭಿಲಾಷೆಯಾಗಿತ್ತು.
ಆದರೆ ಕಳೆದ ಬಾರಿಯೂ ಜ್ಞಾನೇಂದ್ರರಿಗೆ ಮಂತ್ರಿ ಸ್ಥಾನ ಲಭಿಸದೇ ಕಾರ್ಯಕರ್ತರಲ್ಲಿ ನಿರಾಸೆ ಮನೆ ಮಾಡಿತ್ತು.ಇದೀಗ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಚಿವ ಸಂಪುಟದಲ್ಲಿ ಸನ್ಮಾನ್ಯ ಶಾಸಕರಾದ ಆರಗ ಜ್ಞಾನೇಂದ್ರರಿಗೆ ಮಂತ್ರಿ ಸ್ಥಾನ ನೀಡುವ ಮೂಲಕ ತಾಲೂಕಿನ ಸಮಸ್ತ ಬಿಜೆಪಿ ಕಾರ್ಯಕರ್ತರಿಗೆ ಬಲ ಬಂದಂತಾಗಿದೆ.
ಜ್ಞಾನೇಂದ್ರ ನಡೆದು ಬಂದ ಹಾದಿ….
ತಮ್ಮ ರಾಜಕೀಯ ಜೀವನವನ್ನು ಪ್ರಥಮವಾಗಿ ತಾಲೂಕು ಬೋರ್ಡ್ ಚುನಾವಣೆ ಮೂಲಕ ಆರಂಭಿಸಿದ ಜ್ಞಾನೇಂದ್ರ 1983 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತರು.
1985,1989, ರಲ್ಲಿ ಮತ್ತೆ ಸ್ಪರ್ಧೆ ಮಾಡಿದರೂ ಗೆಲುವು ದೊರಕಲಿಲ್ಲವಾದರೂ ಎಂದಿಗೂ ಅಧಿಕಾರಕ್ಕಾಗಿ ಪಕ್ಷ ತೊರೆದವರಲ್ಲ. ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷರ ಜವಾಬ್ದಾರಿ ತಮ್ಮ ಹೆಗಲಿಗೆ ಬಿದ್ದಾಗಲೂ ಸಮರ್ಥವಾಗಿ ಎದುರಿಸಿದ ಆರಗ ಜ್ಞಾನೇಂದ್ರ ಅವರು ಪರಿಷತ್ ಚುನಾವಣೆಗೆ ಸ್ಪರ್ದಿಸಿ ಗೆಲವು ಸಾಧಿಸಿದರು.
ಆನಂತರ ಸತತ ಮೂರು ಭಾರಿ ಗೆಲುವು ಸಾಧಿಸಿದ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಒಮ್ಮೆ ಗೆದ್ದವರು ಮತ್ತೆ ಗೆಲ್ಲಲಾಲರು ಎನ್ನುವ ದಾಖಲೆ ಹ್ಯಾಟ್ರಿಕ್ ಹೀರೋ ಎನ್ನಿಸಿಕೊಂಡವರು
ಆದರೂ 2008, 2013 ರಲ್ಲಿ ಮತ್ತೆ ಗೆಲುವು ಜ್ಞಾನೇಂದ್ರರಿಂದ ದೂರವೇ ಉಳಿಯಿತು. ಆದರೆ 2018 ರಲ್ಲಿ ತೀರ್ಥಹಳ್ಳಿ ಕ್ಷೇತ್ರದಲ್ಲೇ ದಾಖಲೆಯೆನ್ನುವಂತೆ 22,000 ಅಂತರ ದ ಗೆಲುವು ಸಾಧಿಸಿ ತಮ್ಮ ಕೀರ್ತಿ ಪತಾಕೆಯನ್ನು ಹಾರಿಸಿದವರು.ಇದೀಗ ಸಚೀವರಾಗಿದ್ದಾರೆ.
ಇದನ್ನೂ ಓದಿ : 11 ಗಂಟೆಗೆ ನೂತನ ಸಚಿವರ ಪಟ್ಟಿ ರಿಲೀಸ್ : ಮಧ್ಯಾಹ್ನ ಪ್ರಮಾಣ ವಚನ : ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.