ರಾಜಕಾರಣಿಗಳೇ ನಿಮ್ಮ ಮಕ್ಕಳನ್ನು ಸೇನೆಗೆ ಕಳಿಸಿದ್ದೀರಾ:ಹುತಾತ್ಮನ ತಾಯಿ
Team Udayavani, Jun 24, 2017, 12:33 PM IST
ಶಿಡ್ಲಘಟ್ಟ : ಪಶ್ಚಿಮ ಬಂಗಾಳದ ದಾರ್ಜಿಲಿಂಗ್‌ನಲ್ಲಿ ನಡೆದ ಗುಂಡಿನ ಕಾಳಗದಲ್ಲಿ ವೀರಮರಣವನ್ನಪ್ಪಿದ ತಾಲೂಕಿನ ಯಣ್ಣಂಗೂರು ಗ್ರಾಮದ ಯೋಧ ಗಂಗಾಧರ್ ಅವರ ಪಾರ್ಥಿವ ಶರೀರ 4 ದಿನಗಳ ಬಳಿಕ ಹುಟ್ಟೂರಿಗೆ ಬಂದು ತಲುಪಿದ್ದು ಶನಿವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಪಾರ್ಥೀವ ಶರೀರ ತರಲು ವಿಳಂಬವಾದುದಕ್ಕೆ ಮೃತ ಯೋಧನ ಕುಟುಂಬದವರು,ಸಂಬಂಧಿಕರು ಹಾಗೂ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ರಾಜಕಾರಣಿಗಳಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು ಆಕ್ರೋಶ ವ್ಯಕ್ತ ಪಡಿಸಿದರು.
ಪಾರ್ಥೀವ ಶರೀರವನ್ನು ಶಿಡ್ಲಘಟ್ಟ ನಗರದಲ್ಲಿ ಶನಿವಾರ ಬೆಳಗ್ಗೆ 8 ರಿಂದ 9 ಗಂಟೆವರೆಗೂ ಮೆರವಣಿಗೆ ಮಾಡುವ ಮೂಲಕ ಮನೆಗೆ ತರಲಾಯಿತು. ಸಾವಿರಾರು ಜನರು ಈ ವೇಳೆ ಕಂಬನಿ ಮಿಡಿದರು.
ತಾಯಿಯ ಆಕ್ರೋಶ,ರಾಜಕಾರಣಿಗಳಿಗೆ ತರಾಟೆ
ಅಂತಿಮ ಯಾತ್ರೆಯ ವೇಳೆ ಹಾಜರಿದ್ದ ರಾಜಕಾರಣಿಗಳ ಬಳಿ ಆಕ್ರೋಶ ಹೊರ ಹಾಕಿದ ಯೋಧ ಗಂಗಾಧರ್ ತಾಯಿ ಲಕ್ಷ್ಮಮ್ಮ”ಯೋಧರ ಬಗ್ಗೆ ಸರ್ಕಾರಕ್ಕೆ ಇಷ್ಟು ಅಸಡ್ಡೆ ಯಾಕೆ ? ಶವ ತರಲು ನಾಲ್ಕು ದಿನ ಬೇಕೆ ? ನಾನು ನನ್ನ ಇಬ್ಬರು ಮಕ್ಕಳನ್ನು ದೇಶ ಸೇವೆಗೆ ನೀಡಿದ್ದೇನೆ ? ರಾಜಕಾರಣಿಗಳೇ ನಿವ್ಯಾರಾದರು ಮಕ್ಕಳನ್ನು ಸೇನೆಗೆ ನೀಡಿದ್ದೀರಾ? ರಾಜಕಾರಣಿಗಳು ಮೃತ ಪಟ್ಟರೆ ಹೀಗಾಗುತ್ತದಾ?” ಎಂದು ಗೋಳಿಡುತ್ತಾ ಪ್ರಶ್ನಿಸಿದರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ,ಮಾಜಿ ಮುಖ್ಯಮಂತ್ರಿ, ಸಂಸದ ವೀರಪ್ಪ ಮೊಯ್ಲಿ ಮೂಕ ಪ್ರೇಕ್ಷಕನಾಗಿ ನಿಂತಿದ್ದರು .
ಗಂಗಾಧರ್ ಸೋದರ ರವಿಕುಮಾರ್ ಅವರು ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
Kundapura; ಜಪ್ತಿ: ಅಂಗಡಿಗೆ ಬೆಂಕಿ: ‘ದ್ವೇಷದ ಕಿಡಿ’ ಎಂಬ ಶಂಕೆ; ದೂರು
Team Indiaಕ್ಕೆ ಆಸೀಸ್ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.