20 ಮಂದಿಯಿಂದ ಪರಪ್ಪನ ಅಗ್ರಹಾರ ನಿಯಂತ್ರಣ?

Team Udayavani, Jul 17, 2017, 3:00 AM IST

parappa.jpg

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೊಲೆ, ಅತ್ಯಾಚಾರ ಸೇರಿ ಕೆಲ ಘೋರ ಅಪರಾಧ ಪ್ರಕ ‌ರಣಗಳಲ್ಲಿ ಭಾಗಿಯಾಗಿ ಶಿಕ್ಷೆ ಅನುಭವಿಸುತ್ತಿರುವ ಶಿವಕುಮಾರ್‌, ರಾಕೇಶ್‌ ಸೇರಿ 20 ಮಂದಿ ಇಡೀ ಜೈಲಿನಲ್ಲಿ ನಿಯಂತ್ರಣ ಸಾಧಿಸಿದ್ದಾರೆ ಎನ್ನಲಾಗಿದೆ. ಈ ಪೈಕಿ ಕೆಲ ಕೈದಿಗಳು ಇತರೆ ಕೈದಿಗಳ ದಿನಚರಿಯನ್ನು ನಿರ್ಧರಿಸುವವರಾಗಿದ್ದಾರೆ.

ಕೆಲವರು ತಾಂತ್ರಿಕ ವಿಭಾಗದಲ್ಲೂ ನಿಯಂತ್ರಣ ಹೊಂದಿದ್ದಾರೆ. ಪ್ರಮುಖವಾಗಿ ಶಿವಕುಮಾರ್‌ ಎಂಬಾತ ಜೈಲಿನ ಕೆಲ ಅಧಿಕಾರಿಗಳ ಜತೆ ಚೆನ್ನಾಗಿದ್ದು, ಎಲ್ಲ ರೀತಿಯ ಸೌಲಭ್ಯ ಅನುಭವಿಸುತ್ತಿದ್ದಾನೆ. ರಾತ್ರಿ ವೇಳೆ ನಡೆಯುವ ಕೆಲ ಅಕ್ರಮಗಳು ಕೂಡ ಈತನ ನೇತೃತ್ವದಲ್ಲಿ ನಡೆಯುತ್ತಿವೆ. ಅಲ್ಲದೇ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತೆಲಗಿ ಕೊಠಡಿ ಮುಂಭಾಗದ ಕೊಠಡಿಯಲ್ಲಿದ್ದ ವಸ್ತುಗಳನ್ನು ರಾತ್ರೋರಾತ್ರಿ ಶಿವಕುಮಾರ್‌ ಮತ್ತು ತಂಡ ಬೇರೆಡೆ ಸ್ಥಳಾಂತರಿಸಿದೆ ಎಂದು ಮೂಲಗಳು ತಿಳಿಸಿವೆ.

ಜೈಲಿನಲ್ಲೇ ಎರಡು ಗುಂಪುಗಳು: ಶನಿವಾರ ಕಾರಾಗೃಹ ಇಲಾಖೆ ಡಿಜಿ ಹಾಗೂ ಡಿಐಜಿ ಭೇಟಿ ನೀಡಿದ ಬಳಿಕ ಜೈಲಿನಲ್ಲಿ ಇಬ್ಬರು ಅಧಿಕಾರಿಗಳ ಪರ-ವಿರೋಧ ಗುಂಪುಗಳು ಹುಟ್ಟಿಕೊಂಡಿವೆ. ಇದು ಕೈದಿಗಳ ಸ್ಥಳಾಂತರ ಪ್ರಕ್ರಿಯೆಗೆ ಕಾರಣವಾಗಿದೆ. ಡಿಜಿಪಿ ಸತ್ಯನಾರಾಯಣರಾವ್‌ ಮತ್ತು ರೂಪಾ ಶನಿವಾರ ಜೈಲಿಗೆ ಭೇಟಿ ನೀಡಿದ್ದರು. ಈ ವೇಳೆ ಕೈದಿಗಳಾದ ರಾಮಮೂರ್ತಿ, ಅನಂತಮೂರ್ತಿ, ಚಂದ್ರು ನೇತೃತ್ವದಲ್ಲಿ ನೂರಾರು ಕೈದಿಗಳು ಜೈಲಿನ ಲೋಪಗಳ ಬಗ್ಗೆ ಡಿಐಜಿಗೆ ವಿವರಣೆ ನೀಡಿದ್ದರು. ಇದನ್ನು ರೂಪಾ ತಮ್ಮ ಖಾಸಗಿ ಹ್ಯಾಂಡಿ ಕ್ಯಾಮರಾದಲ್ಲಿ ದಾಖಲಿಸಿಕೊಳ್ಳುತ್ತಿದ್ದರು. ಈ
ವೇಳೆ ಅಧೀಕ್ಷಕ ಕೃಷ್ಣಕುಮಾರ್‌ ಪರವಾದ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಶಿವಕುಮಾರ್‌, ರಾಕೇಶ ಸೇರಿ 20 ಮಂದಿಯ ತಂಡ ವಿರೋಧಿಸಿದ್ದಲ್ಲದೇ, ಹಲ್ಲೆಗೆ ಮುಂದಾಗಿದೆ. ಈ ವೇಳೆ ಒಂದು ತಂಡ ರೂಪಾ ಅವರ ಬಳಿ ತಮ್ಮ ನೋವುಗಳನ್ನು ಹೇಳಿಕೊಳ್ಳಬೇಕು ಎಂದು ಒತ್ತಾಯಿಸಿದರೆ, ಮತ್ತೂಂದು ಗುಂಪು ಡಿಜಿಪಿ ಸತ್ಯನಾರಾಯಣರಾವ್‌ ಪರ ಘೋಷಣೆ ಕೂಗಿದೆ.

ಪರಿಸ್ಥಿತಿ ನಿಯಂಂತ್ರಣಕ್ಕೆ ಆಗಮಿಸಿದ್ದ ಪೊಲೀಸರು ಮತ್ತು ಜೈಲು ಸಿಬ್ಬಂದಿ ದಾಂಧಲೆಗೆ ಮುಂದಾಗಿದ್ದ 32 ಕೈದಿಗಳ ಪಟ್ಟಿ ಸಿದ್ದಪಡಿಸಿದ್ದಾರೆ. ನಂತರ ಒಬ್ಬೊಬ್ಬರನ್ನೇ ಕರೆಸಿ ದಾಂಧಲೆ ನಡೆಸಿದ ಆರೋಪ ಹೊರಿಸಿ, ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ಹಲ್ಲೆಗೊಳಗಾದವರೆಲ್ಲ ರೂಪಾ ಗುಂಪಿನ ಕೈದಿಗಳೇ ಎನ್ನಲಾಗಿದೆ.

ಈ ಹಿಂದೆಯೂ ಪ್ರತಿಭಟನೆ: ರೂಪಾ ಅವರು ಜೈಲಿಗೆ ಭೇಟಿ ನೀಡುವ ಮೊದಲು ಜೈಲಿನ ನಿಯಮಗಳ ಪ್ರಕಾರ ಸೌಲಭ್ಯ ಕೊಡುವಂತೆ ಒತ್ತಾಯಿಸಿ ನೂರಾರು ಕೈದಿಗಳ ಗುಂಪು ಪ್ರತಿಭಟನೆ ನಡೆಸಿತ್ತು ಎನ್ನಲಾಗಿದೆ. ಇದೀಗ ಸ್ಥಳಾಂತರಗೊಂಡ ಕೈದಿಗಳ ಪೈಕಿ ಪ್ರತಿಭಟನೆ ನಡೆಸಿದವರೂ ಇದ್ದಾರೆ ಎನ್ನಲಾಗಿದೆ. ಬಳಿಕ ರೂಪಾ ಅವರು ಜೈಲಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುವ ವೇಳೆ ತಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಅಳಲುತೊಡಿದ್ದಾರೆ. ಇದೇ ಕೈದಿಗಳಿಗೆ ಮುಳುವಾಗಿದ್ದು, ನ್ಯಾಯಾಲಯ ವಿಧಿಸಿದ ಶಿಕ್ಷೆಯೊಂದಿಗೆ ಜೈಲಿನ ಅಧಿಕಾರಿಗಳು ಕೊಡುವ ವೈಯಕ್ತಿಕ ಹಿಂಸೆಯನ್ನೂ
ಅನುಭವಿಸುವಂತಾಗಿದೆ.

ಟಾಪ್ ನ್ಯೂಸ್

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Tejasvi-surya

Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್‌ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದರಿ: ಮೋದಿಗೆ ಸಿಎಂ ಪ್ರಶ್ನೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.