ಕಾಂಗ್ರೆಸ್‌ನಿಂದ ಯುದ್ಧಕ್ಕೆ ಮೊದಲೇ ಶಸ್ತ್ರ ತ್ಯಾಗ
Team Udayavani, Nov 30, 2019, 3:00 AM IST
ಬೆಂಗಳೂರು: ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನಲ್ಲಿ ಹಿರಿಯ ನಾಯಕರ ನಡುವೆ ಹೊಂದಾಣಿಕೆಯ ಕೊರತೆ ಇದ್ದು ಯುದ್ಧಕ್ಕೆ ಮೊದಲೇ ಶಸ್ತ್ರ ತ್ಯಜಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕಟೀಲ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಉಪ ಚುನಾವಣೆಯಲ್ಲಿ ಬಿಜೆಪಿ 15 ಕ್ಷೇತ್ರ ಗೆಲ್ಲಲಿದೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‌ಗೆ ಯಾವುದೇ ವಿಷಯಗಳೇ ಇಲ್ಲ. ಇಲ್ಲಸಲ್ಲದ ಆರೋಪಗಳ ಮೂಲಕ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಹೇಳಿದರು.
ಸಚಿವ ಆರ್.ಅಶೋಕ್ ಮಾತನಾಡಿ, ಉಪ ಚುನಾವಣೆ ಮುಗಿದ ನಂತರ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರಿಗೆ ಕಂಟಕ ಎದುರಾಗಲಿದೆ. ಪ್ರತಿಪಕ್ಷ ಸ್ಥಾನ ದಿಂದಲೇ ಅವರನ್ನು ಕೆಳಗಿಳಿಸಲಾಗುತ್ತದೆ. ಅವರ ಪಕ್ಷ ದವರೇ ಅವರ ವಿರುದ್ಧ ತಿರುಗಿ ಬೀಳಲಿದ್ದಾರೆ ಎಂದು ಹೇಳಿದರು. ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಎಚ್.ಡಿ.ಕುಮಾರಸ್ವಾಮಿಯವರು ಆಡಿಯೋ ಬಿಡ್ತೇನೆ ಎಂದು ಹೆದರಿಸುತ್ತಿದ್ದಾರೆ. ಅವರ ಹೇಳಿಕೆಗೆಲ್ಲಾ ಹೆದರಲ್ಲ. ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಜನ ತೀರ್ಮಾನಿಸಿದ್ದಾರೆ ಎಂದರು.
ಯಾರ್ಯಾರು ಹನಿ ಅನ್ನೋದು ಗೊತ್ತಿಲ್ಲ: ಹನಿಟ್ರ್ಯಾಪ್ ಕುರಿತು ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಯಾರ್ಯಾರು ಹನಿ ಅನ್ನೋದು ಗೊತ್ತಿಲ್ಲ. ಯಾರು ಮಾಡಿದ್ದಾರೆ ಅನ್ನೋದೂ ಗೊತ್ತಿಲ್ಲ. ಊಹಾಪೋಹದ ಹೇಳಿಕೆಗಳಿಗೆ ಕಿಮ್ಮತ್ತಿಲ್ಲ. ಇದಕ್ಕೂ ನಮಗೂ ಸಂಬಂಧವಿಲ್ಲ. ಅನರ್ಹರು ಹನಿಟ್ರ್ಯಾಪ್‌ನಲ್ಲಿ ಇರುವ ಬಗ್ಗೆಯೂ ನನಗೆ ಮಾಹಿತಿಯಿಲ್ಲ. ಸಿಸಿಬಿ ಅವರನ್ನೇ ನೀವು ಕೇಳಿ ಎಂದು ಮಾಧ್ಯಮದವರಿಗೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ
BJP Rift; ಆರ್. ಅಶೋಕ್ ದೆಹಲಿಗೆ: ನನಗೆ ಸ್ಪಷ್ಟ ಮಾಹಿತಿ ಇಲ್ಲ ಎಂದ ವಿಜಯೇಂದ್ರ
Earthquake; ತೆಲಂಗಾಣದ ಮುಲುಗುವಿನಲ್ಲಿ ಭೂಕಂಪನ: 5.3 ತೀವ್ರತೆ
Power sharing: ನಮ್ಮಲ್ಲಿ ಒಪ್ಪಂದ ನಿಜ: ಡಿ.ಕೆ.ಶಿವಕುಮಾರ್ ಪ್ರಥಮ ಹೇಳಿಕೆ
MUDA Scam: ಸಿದ್ದರಾಮಯ್ಯ ಪತ್ನಿ ಸಹಿತ ಸಾವಿರ ಮುಡಾ ನಿವೇಶನ ಅಕ್ರಮ ಹಂಚಿಕೆ: ಇ.ಡಿ.
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.