ಬ್ರಿಟನ್‌ನಿಂದ 3,137 ಪ್ರಯಾಣಿಕರ ಆಗಮನ: ಸರಕಾರದಿಂದ ಮಾಹಿತಿ
Team Udayavani, Jan 6, 2021, 10:41 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಬ್ರಿಟನ್‌ನಿಂದ ರಾಜ್ಯಕ್ಕೆ ಒಟ್ಟು 3,137 ಪ್ರಯಾಣಿಕರು ಬಂದಿದ್ದು, 3,061 ಪ್ರಯಾಣಿಕರನ್ನು ಪತ್ತೆ ಹಚ್ಚಲಾಗಿದೆ. ಆ ಪೈಕಿ 2,292 ಮಂದಿಗೆ ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದೆ ಎಂದು ಹೈಕೋರ್ಟ್‌ಗೆ ಸರಕಾರ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸರಕಾರ ಹಾಗೂ ಬಿಬಿಎಂಪಿಗೆ ನಿರ್ದೇಶಿಸಲು ಕೋರಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾ| ಎ. ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಸರಕಾರಿ ವಕೀಲ ವಿಕ್ರಂ ಹುಯಿಲಗೋಳ್ ಲಿಖೀತ ಹೇಳಿಕೆ ಸಲ್ಲಿಸಿ, ಡಿ.7ರ ಬಳಿಕ ಬ್ರಿಟನ್‌ನಿಂದ ರಾಜ್ಯಕ್ಕೆ ಒಟ್ಟು 3,137 ಪ್ರಯಾಣಿಕರು ಬಂದಿದ್ದಾರೆ. ಅವರಲ್ಲಿ 3,061 ಪ್ರಯಾಣಿಕರನ್ನು ಪತ್ತೆ ಹಚ್ಚಲಾಗಿದೆ. ಇಂಗ್ಲೆಂಡ್‌ನಿಂದ ರಾಜ್ಯಕ್ಕೆ ಬಂದು ಹೊರ ರಾಜ್ಯಕ್ಕೆ ತೆರಳಿದ ಪ್ರಯಾಣಿಕರ ಸಂಖ್ಯೆ 594 ಆಗಿದ್ದು, ಅವರಲ್ಲಿ 75 ಪ್ರಯಾಣಿಕರು ಈವರೆಗೆ ಪತ್ತೆಯಾಗಿಲ್ಲ ಎಂದು ತಿಳಿಸಿದರು.
ಈವರೆಗೆ 2,292 ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು, 176 ಮಂದಿಯ ಫಲಿತಾಂಶ ಬರಬೇಕಿದೆ. ಒಟ್ಟು 34 ಪ್ರಯಾಣಿಕರಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದೆ ಎಂದು ಸರಕಾರ ನೀಡಿದ ಲಿಖೀತ ಹೇಳಿಕೆಯಲ್ಲಿ ಮಾಹಿತಿ ನೀಡಲಾಗಿದೆ.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಪತ್ತೆಯಾಗಿರುವ 3,061 ಪ್ರಯಾಣಿಕರ ಪೈಕಿ 2,292 ಪ್ರಯಾಣಿಕರನ್ನು ಮಾತ್ರ ಆರ್‌ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿದೆ. ಉಳಿದ 700ಕ್ಕೂ ಹೆಚ್ಚು ಪ್ರಯಾಣಿಕರಿಗೆ ಯಾಕೆ ಪರೀಕ್ಷೆ ನಡೆಸಿಲ್ಲ ಎಂದು ಪ್ರಶ್ನಿಸಿ, ವಿಚಾರಣೆಯನ್ನು ಜ.12ಕ್ಕೆ ಮುಂದೂಡಿತು.
ಏಳು ಲ್ಯಾಬ್‌ಗಳಿಗೆ ದಂಡ
ಆರ್‌ಟಿಪಿಆರ್ ಪರೀಕ್ಷೆಯ ಫಲಿತಾಂಶವನ್ನು 48 ಗಂಟೆಗಳಿಗಿಂತ ವಿಳಂಬವಾಗಿ ನೀಡುವ ಮತ್ತು ಐಸಿಎಂಆರ್ ವೆಬ್‌ಪೋರ್ಟಲ್‌ನಲ್ಲಿ ವಿಳಂಬವಾಗಿ ದಾಖಲಿಸುವ ಖಾಸಗಿ ಪ್ರಯೋಗಾಲಯಗಳಿಗೆ ಪರೀಕ್ಷೆಗೆ ತಗಲಿರುವ ಮೊತ್ತದಲ್ಲಿ ಶೇ. 10ರಷ್ಟು ದಂಡ ವಿಧಿಸಬೇಕಾಗುತ್ತದೆ. ಅದರಂತೆ ನಗರದ ಏಳು ಖಾಸಗಿ ಪ್ರಯೋಗಾಲಯಗಳಲ್ಲಿ ಒಟ್ಟು 410 ಪ್ರಕರಣಗಳಲ್ಲಿ ಫಲಿತಾಂಶ ವಿಳಂಬವಾಗಿದೆ. ಅದಕ್ಕಾಗಿ ಅವುಗಳಿಗೆ ದಂಡ ವಿಧಿಸಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಆಗ್ತಿರೋದು ಸತ್ಯ:ಸತೀಶ್ ಜಾರಕಿಹೊಳಿ
Renukaswamy Case: ಪವಿತ್ರಾ ಗೌಡ ಜಾಮೀನಿಗೆ ವಾದ ಮಂಡನೆ.. ವಿಚಾರಣೆ ಮುಂದೂಡಿದ ಹೈಕೋರ್ಟ್
Belagavi: ಬಸ್ ಸೀಟಿಗಾಗಿ ಜಗಳ: ದಂಪತಿಗೆ ಮನಸೋ ಇಚ್ಛೆ ಥಳಿಸಿದ ಯುವಕರ ತಂಡ
Electoral Bond Case: ನಿರ್ಮಲಾ, ನಡ್ಡಾ, ನಳಿನ್ ವಿರುದ್ದದ FIR ರದ್ದು ಮಾಡಿದ ಹೈಕೋರ್ಟ್
Fengal Cyclone: ಶಿವಮೊಗ್ಗದಲ್ಲೂ ಎಲ್ಲೊ ಅಲರ್ಟ್; ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.