ನಮ್ಮತನವಿರುವ ಶಿಕ್ಷಣ ಪದ್ಧತಿಗೆ ಒತ್ತು: ಸಚಿವ ಅಶ್ವತ್ಥನಾರಾಯಣ

Team Udayavani, Mar 5, 2023, 10:10 PM IST

ನಮ್ಮತನವಿರುವ ಶಿಕ್ಷಣ ಪದ್ಧತಿಗೆ ಒತ್ತು: ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಭಾರತದ ಮೇಲೆ ದಾಳಿ ಮಾಡಿದ ವಿದೇಶೀ ಆಕ್ರಮಣಕಾರರು ನಮ್ಮ ಶಿಕ್ಷಣ ಪದ್ಧತಿಯನ್ನೇ ಸಂಪೂರ್ಣ ಹಾಳು ಮಾಡಿದರು. ನಾವೀಗ ಕೇವಲ ಗುಮಾಸ್ತರನ್ನು ಸೃಷ್ಟಿಸುವಂತಹ ಮೆಕಾಲೆ ಪ್ರಣೀತ ಶಿಕ್ಷಣ ಪದ್ಧತಿಯಿಂದ ನಿಧಾನವಾಗಿ ಹೊರಬರುತ್ತಿದ್ದು, ದೇಶದ ಅಗತ್ಯಗಳಿಗೆ ತಕ್ಕ ಶೈಕ್ಷಣಿಕ ಕ್ರಮವನ್ನು ರೂಪಿಸುತ್ತಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

‘ಅಂಡರ್ 25’ ಸಂಸ್ಥೆಯು ಏರ್ಪಡಿಸಿದ್ದ ಯುವ ಸಮಾವೇಶದಲ್ಲಿ ಭಾನುವಾರ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದ ವಿವಿಧ ಭಾಗಗಳ 25 ವರ್ಷದೊಳಗಿನ ಯುವಕರು ಎರಡು ದಿನಗಳ ಸಮಾವೇಶದಲ್ಲಿ ಭಾಗವಹಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ದೇಶವು ಅಮೃತ ಕಾಲದಲ್ಲಿ ಮುನ್ನಡೆಯುತ್ತಿದೆ. ಸ್ವಾವಲಂಬನೆ ಮತ್ತು ಉದ್ಯೋಗ ಗಳಿಕೆ ಎರಡನ್ನೂ ಸಾಧ್ಯವಾಗಿಸುವಂತಹ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದೊಂದಿಗೆ ನಮ್ಮ ಸ್ವಾತಂತ್ರವು ಪರಿಪೂರ್ಣವಾಗಲಿದೆ. ಜೊತೆಗೆ, ದೇಶದ ಯುವಜನರಲ್ಲಿ ಸಮರ್ಥ ನಾಯಕತ್ವ ಸೃಷ್ಟಿಯಾಗಲಿದೆ ಎಂದು ಅವರು ಆಶಿಸಿದರು.

ಕರ್ನಾಟಕವು ಸ್ಟಾರ್ಟಪ್‌, ಎಂಜಿನಿಯರಿಂಗ್, ಸೆಮಿಕಂಡಕ್ಟರ್, ಐಟಿ, ಬಿಟಿ, ಸಂಶೋಧನೆ, ಕೈಗಾರಿಕಾ ಬೆಳವಣಿಗೆಗಳಲ್ಲಿ ಅಗ್ರಸ್ಥಾನದಲ್ಲಿದೆ. ರಾಜ್ಯವು ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದು ನಿರುದ್ಯೋಗ ನಿವಾರಣೆಗೆ ರಚನಾತ್ಮಕ ಕ್ರಮಗಳನ್ನು ಕೈಗೊಂಡಿದೆ. ಇದರ ಭಾಗವಾಗಿ ರಾಜ್ಯದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಕಡ್ಡಾಯಗೊಳಿಸಿದ್ದು, ಸರಕಾರದ ವತಿಯಿಂದ ಉಚಿತವಾಗಿ ಕೊಡಲಾಗುತ್ತಿದೆ ಎಂದು ಅವರು ತಿಳಿಸಿದರು.

ನಾಯಕತ್ವವು ನಿರ್ವಾತದಲ್ಲಿ ಸೃಷ್ಟಿಯಾಗುವುದಿಲ್ಲ. ಅದಕ್ಕೆ ತಕ್ಕ ಕಾರ್ಯ ಪರಿಸರ ಮತ್ತು ಹೊಣೆಗಾರಿಕೆಯನ್ನು ತಮ್ಮದೆಂದು ಭಾವಿಸುವ ಮನೋಭಾವ ಅತ್ಯಗತ್ಯವಾಗಿ ಬೇಕಾಗುತ್ತವೆ. ರಾಜ್ಯದ ಉನ್ನತ ಶಿಕ್ಷಣ ಕ್ರಮದಲ್ಲಿ ಇಂತಹ ಅಂಶಗಳನ್ನು ಪರಿಗಣಿಸಲಾಗಿದೆ. ಇಲ್ಲಿ ಎಲ್ಲರೂ ದೈಹಿಕ, ಮಾನಸಿಕ, ಸಾಂಸ್ಕೃತಿಕ, ಸಾಮಾಜಿಕ ಮತ್ತಿತರ ಜವಾಬ್ದಾರಿಗಳನ್ನು ನಿರ್ವಹಿಸುವಂತಹ ವಾತಾವರಣವನ್ನು ಸೃಷ್ಟಿಸಲಾಗುತ್ತಿದೆ ಎಂದು ಅವರು ನುಡಿದರು.

ರಾಜ್ಯದಲ್ಲಿ ಜಾಗತಿಕ ಮಟ್ಟದ ನೂರಾರು ಕಂಪನಿಗಳಿದ್ದು, ಉದ್ಯೋಗಾವಕಾಶಕ್ಕೇನೂ ಕೊರತೆ ಇಲ್ಲ. ಇನ್ನೊಂದೆಡೆಯಲ್ಲಿ ನಮ್ಮಲ್ಲಿಗೆ ಅಗಾಧ ಪ್ರಮಾಣದ ಬಂಡವಾಳ ಕೂಡ ಹರಿದು ಬರುತ್ತಿದೆ. ಇವುಗಳನ್ನು ನಮ್ಮ ಯುವಜನರ ಭವಿಷ್ಯಕ್ಕೆ ಪೂರಕವಾಗಿ ಬಳಸಿಕೊಳ್ಳಲು ನಾವು ಬಯಸಿದ್ದೇವೆ. ಏಕೆಂದರೆ, ಪ್ರತಿಯೊಬ್ಬರಿಗೂ ಉದ್ಯೋಗವನ್ನು ದೊರಕಿಸಿ ಕೊಡುವುದು ಸಮಾಜದ ಆರ್ಥಿಕ ಮತ್ತು ಇನ್ನಿತರ ಬೆಳವಣಿಗೆಯ ದೃಷ್ಟಿಯಿಂದ ಅತ್ಯಂತ ಮಹತ್ತ್ವದ್ದಾಗಿದೆ ಎಂದು ಅವರು ಪ್ರತಿಪಾದಿಸಿದರು.

ಕಾರ್ಯಕ್ರಮದಲ್ಲಿ, ಅಂಡರ್ 25 ಸಂಸ್ಥೆಯ ಸಹಸಂಸ್ಥಾಪಕ ಶ್ರೇಯಾಂಶ್ ಜೈನ್‌ ಉಪಸ್ಥಿತರಿದ್ದರು.

ಇದನ್ನೂ ಓದಿ: ತನಿಖೆ ನೆಪದಲ್ಲಿ ಸಿಬಿಐ ಅಧಿಕಾರಿಗಳಿಂದ ಮನೀಶ್ ಸಿಸೋಡಿಯಾ ಗೆ ಮಾನಸಿಕ ಹಿಂಸೆ: ಆಪ್ ಆರೋಪ

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.