ಮಳೆ ಅನಾಹುತ ಕುಟುಂಬಕ್ಕೆ ಎರಡು ದಿನದೊಳಗೆ ಪರಿಹಾರ ನೀಡಲು ಅಶ್ವತ್ಥನಾರಾಯಣ ಸೂಚನೆ
ದಾವೋಸ್‌ನಿಂದ ವಿಡಿಯೊ ಕಾನ್ಫರೆನ್ಸ್ ಸಭೆ
Team Udayavani, May 23, 2022, 7:00 PM IST
ಬೆಂಗಳೂರು: ಮೂರು ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದ ಬೆಂಗಳೂರಿನ ಪೂರ್ವ ವಲಯದಲ್ಲಿ 691 ಮನೆಗಳಿಗೆ ನೀರು ನುಗ್ಗಿ ನಷ್ಟವಾಗಿದ್ದು, ಈ ಕುಟುಂಬಗಳಿಗೆ ಎರಡು ದಿನಗಳೊಳಗೆ ತಲಾ 25,000 ರೂ. ಪರಿಹಾರ ನೀಡಬೇಕು ಎಂದು ಕಾರ್ಯಪಡೆ ಮುಖ್ಯಸ್ಥ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮಳೆಯಿಂದ ಉಂಟಾಗುವ ಸಮಸ್ಯೆಗಳ ನಿರ್ವಹಣೆಗೆ ಬೆಂಗಳೂರು ಪೂರ್ವ ವಲಯದ ಕಾರ್ಯಪಡೆ ಮುಖ್ಯಸ್ಥರಾಗಿ ನೇಮಕಗೊಂಡಿರುವ ಅವರು ದಾವೋಸ್‌ನಿಂದ ಡಿಯೊ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಿದರು.
25,000 ರೂ ನಂತೆ 691 ಕುಟುಂಬಗಳಿಗೆ ಒಟ್ಟು ಪರಿಹಾರದ ಮೊತ್ತ 1.73 ಕೋಟಿ ರೂ. ಆಗುತ್ತದೆ. ಸಂಬಂಧಿಸಿದ ದಾಖಲೀಕರಣ ಮಂಗಳವಾರ ಮುಗಿಸಿ ಬುಧವಾರ ಸಂಬಂಧಿಸಿದವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ (ಡಿಬಿಟಿ) ಮಾಡಬೇಕು ಎಂದು ಕಾಲಮಿತಿ ನಿಗದಿಗೊಳಿಸಿದರು.
ಚರಂಡಿಗಳಲ್ಲಿ ಹೂಳೆತ್ತುವ ಡೀಸಿಲ್ಟಿಂಗ್ ಕೆಲಸವನ್ನು ಗುತ್ತಿಗೆದಾರರಿಗೆ ಈ ಮುಂಚೆಯೇ ವಹಿಸಲಾಗಿತ್ತು. ಆದರೆ ಇದೀಗ 7 ಕಡೆಗಳಲ್ಲಿ ಗುತ್ತಿಗೆದಾರರು ಡೀಸಿಲ್ಟಿಂಗ್ ಮಾಡಿಲ್ಲ ಎಂಬುದು ಗೊತ್ತಾಗಿದೆ. ಸಂಬಂಧಿಸಿದ ಈ ಗುತ್ತಿಗೆದಾರರಿಗೆ ತಕ್ಷಣವೇ ನೋಟಿಸ್ ಕೊಟ್ಟು ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ಜತೆಗೆ 20 ದಿವಸಗಳೊಳಗೆ ಡೀಸಿಲ್ಟಿಂಗ್ ಮಾಡಿಸಿ ಚರಂಡಿಗಳಲ್ಲಿ ನೀರು ಅಡೆತಡೆ ಇಲ್ಲದಂತೆ ಹರಿಯುವಂತೆ ಮಾಡಬೇಕು ಎಂದು ಆದೇಶಿಸಿದರು.
ಪೂರ್ವ ವಲಯದಲ್ಲಿ ನೀಲಸಂದ್ರ, ಫ್ರೇಜರ್ ಟೌನ್, ಸಂಜಯನಗರ ಸೇರಿದಂತೆ 22 ಸ್ಥಳಗಳನ್ನು ರೆಡ್ ಜೋನ್’ ಎಂದು ಗುರುತಿಸಲಾಗಿದೆ. ಇದನ್ನು ಗಮನದಲ್ಲಿರಿಸಿಕೊಂಡು ಅಧಿಕಾರಿಗಳು ತಗ್ಗಿನ ಪ್ರದೇಶಕ್ಕೆ ನೀರು ನುಗ್ಗಬಹುದಾದ ಸಾಧ್ಯತೆಯನ್ನು ನಿರ್ವಹಿಸಲು ಸ್ಥಳಾಂತರಕ್ಕಾಗಿ ಮೊದಲೇ ಯೋಜನೆ ಹಾಕಿಕೊಳ್ಳಬೇಕು. ಇದಕ್ಕಾಗಿ ಹತ್ತಿರದ ಶಾಲೆ ಮತ್ತಿತರ ಕಡೆಗಳಲ್ಲಿ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಅಧಿಕಾರಿಗಳು ರೆಡ್ ಜೋನ್ ಗಳಲ್ಲಿ ವಾಸಿಸುತ್ತಿರುವ ಜನರ ಜತೆ ಸಂಪರ್ಕದಲ್ಲಿದ್ದು ಹವಾಮಾನ ಮುನ್ಸೂಚನೆ ಆಧಾರಿತವಾಗಿ ತಯಾರಿ ಮಾಡಿಕೊಂಡು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಪೂರ್ವ ವಲಯದಲ್ಲಿ ಎರಡು ದಿನಗಳ ಅವಧಿಯಲ್ಲಿ 11 ಸೆಂ.ಮೀ.ನಷ್ಟು ಹೆಚ್ಚಿನ ಮಳೆ ಸುರಿದಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ಕೊಟ್ಟರು. ವಲಯ ಆಯಕ್ತ ರವೀಂದ್ರ, ಜಂಟಿ ಆಯುಕ್ತೆ ಶಿಲ್ಪಾ, ಮುಖ್ಯ ಎಂಜಿನಿಯರ್ ಮೋಹನ್ ಹಾಗೂ ಹಲವು ಅಧಿಕಾರಿಗಳು ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.