ದೂರು ನೀಡಲು ಬಂದ ಮಹಿಳೆ ಮೇಲೆ ದರ್ಪ; ಎಎಸ್ ಐ ಅಮಾನತು
Team Udayavani, Jan 29, 2019, 8:32 AM IST
ಬೆಂಗಳೂರು: ದೂರು ನೀಡಲು ಬಂದ ಮಹಿಳೆ ಮತ್ತು ಮನೆಯವರ ಮೇಲೆ ದರ್ಪದಿಂದ ವರ್ತಿಸಿದ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ಎಎಸ್ ಐ ರೇಣುಕಯ್ಯನನ್ನು ಸೇವೆಯಿಂದ ಅಮಾನತುಗೊಳಿಸಿ ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣೆಗೆ ಮಹಿಳೆ, ಮಗಳು ಸೇರಿದಂತೆ ಮನೆಯವರು ಬಂದಿದ್ದ ವೇಳೆ ಎಎಸ್ ಐ ಮತ್ತು ಸಿಬ್ಬಂದಿ ಆಕೆಯ ಕುತ್ತಿಗೆ ಹಿಡಿದು ಹೊರಗೆ ತಳ್ಳಿ, ಹೊಡೆಯುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು.
ಘಟನೆ ಗಮನಕ್ಕೆ ಬಂದ ಕೂಡಲೇ ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಅವರು, ಈ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ. ಠಾಣೆಗೆ ದೂರು ನೀಡಲು ಬಂದವರ ಜೊತೆ ಈ ರೀತಿ ನಡೆದುಕೊಳ್ಳಬಾರದು. ತಕ್ಷಣಕ್ಕೆ ಎಎಸ್ ಐ ರೇಣುಕಯ್ಯ ಅವರನ್ನು ಸೇವೆಯಿಂದ ಸಸ್ಪೆಂಡ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Director Guruprasad: ಖ್ಯಾತ ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಆ*ತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.