ಬೂಟುಗಾಲಿನಿಂದ ಒದ್ದ ಎಎಸ್ಐ ಅಮಾನತು
Team Udayavani, May 12, 2020, 11:44 AM IST
ಬೆಂಗಳೂರು: ಉತ್ತರ ಪ್ರದೇಶ ಮೂಲದ ಕಾರ್ಮಿಕರು ತಮ್ಮ ರಾಜ್ಯಕ್ಕೆ ತೆರಳಲು ಪೂರ್ವ ವಿಭಾಗದ ಕಾಡುಗೊಂಡನ ಹಳ್ಳಿ(ಕೆ.ಜಿ.ಹಳ್ಳಿ) ಠಾಣೆಗೆ ನೋಂದಣಿಗೆ ತೆರಳಿದ್ದಾಗ ಕಾರ್ಮಿಕರ ಮೇಲೆ ಬೂಟುಗಾಲಿನಿಂದ ತುಳಿದು ದರ್ಪ ತೋರಿದ ಆರೋಪದಲ್ಲಿ ಎಎಸ್ಐ ರಾಜಸಾಬ್ ಅವರನ್ನು ಅಮಾನತುಗೊಳಿಸಲಾಗಿದೆ. ಈ ಬಗ್ಗೆ ಪೂರ್ವ ವಿಭಾಗದ ಡಿಸಿಪಿ ಡಾ. ಶರಣಪ್ಪ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ಕಾರ್ಮಿಕರು ತಮ್ಮ ರಾಜ್ಯಗಳಿಗೆ ತೆರಳುವ ಸಲುವಾಗಿ ನೋಂದಣಿ ಮಾಡಿಸಿಕೊಳ್ಳಲು ಕಾಡುಗೊಂಡನಹಳ್ಳಿ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ, ಉತ್ತರ ಪ್ರದೇಶ ಮೂಲದ ಕಾರ್ಮಿಕರ ಮೇಲೆ ಅಲ್ಲಿನ ಎಎಸ್ಐ ರಾಜಸಾಬ್ ಬೂಟುಕಾಲಿನಿಂದ ಒದ್ದು ದರ್ಪ ತೋರಿದ್ದರು.
ವಿಡಿಯೋ ವೈರಲ್: ಈ ಕುರಿತ ವಿಡಿಯೋವನ್ನು ಚಿತ್ರೀಕರಿಸಿಕೊಂಡಿದ್ದ ಕೆಲವರು ಎಲ್ಲೆಡೆ ವೈರಲ್ ಮಾಡಿದ್ದರು. ಅದನ್ನು ಕೆಲ ನೆಟ್ಟಿಗರು ಟ್ವಿಟರ್ ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ವೈಟ್ ಫಿಲ್ಡ್ ಡಿಸಿಪಿ ಎಂ.ಎನ್.ಅನುಚೇತ್ ಅವರಿಗೆ ಟ್ಯಾಗ್ ಮಾಡಿ ಕಾರ್ಮಿಕರ ನೆರವಿಗೆ ಬರುವಂತೆ ಕೋರಿದ್ದರು. ಘಟನೆ ಬಗ್ಗೆ ತನಿಖೆ ನಡೆಸಿದ ಪೂರ್ವ ವಿಭಾಗದ ಡಿಸಿಪಿ ಡಾ. ಶರಣಪ್ಪ ಇದೀಗ ಎಎಸ್ಐ ರಾಜಸಾಬ್ ಅವರನ್ನು ಅಮಾನತುಗೊಳಿಸಿ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.