ಹಾಲಿ ಶಾಸಕರಲ್ಲಿ ಗೆಲ್ಲೋರ್‍ಯಾರು? ಸೋಲೋರ್‍ಯಾರು? 40 ಶಾಸಕರ ಮರು ಆಯ್ಕೆ ಸುಲಭವಲ್ಲ
ಪಕ್ಷಗಳಿಗೆ ತಲೆಬಿಸಿ ತಂದ ಆಂತರಿಕ ಸಮೀಕ್ಷೆ
Team Udayavani, Oct 19, 2022, 7:15 AM IST
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಆಂತರಿಕ ಸಮೀಕ್ಷೆ ಮಾಡಿಸಿದ್ದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಹಾಲಿ ಶಾಸಕರ ಪೈಕಿ ಮತ್ತೆ ಗೆಲ್ಲೋರೆಷ್ಟು-ಸೋಲೋರೆಷ್ಟು ಎಂಬ ಆತಂಕ ಶುರುವಾಗಿದೆ.
ಮೂರೂ ಪಕ್ಷಗಳು ಆಂತರಿಕವಾಗಿ ನಡೆಸಿರುವ ಸಮೀಕ್ಷೆಯಲ್ಲಿ ಈಗಿರುವ ಹಾಲಿ ಶಾಸಕರ ಪೈಕಿ ಬಿಜೆಪಿ 20, ಕಾಂಗ್ರೆಸ್ 15 ಹಾಗೂ ಜೆಡಿಎಸ್‌ನ 5 ಶಾಸಕರ ಗೆಲುವು ಕಷ್ಟ ಎಂಬ ಮಾಹಿತಿ ಲಭಿಸಿದೆ. ಹೀಗಾಗಿ, ಆ ಕ್ಷೇತ್ರಗಳಲ್ಲಿ ಗೆಲುವಿಗೆ ಏನು ಮಾಡಬೇಕು ಎಂಬ ಬಗ್ಗೆ ನಾಯಕರ ಮಟ್ಟದಲ್ಲಿ ಚರ್ಚೆಗಳು ನಡೆದಿವೆ.
ಸತತ ಎರಡು ಬಾರಿ ಗೆದ್ದವರು, ಕ್ಷೇತ್ರದ ಅಭಿವೃದ್ಧಿ ನಿರ್ಲಕ್ಷ್ಯ ಮಾಡಿದವರು, ಸಮುದಾಯದ ವಿರೋಧ ಕಟ್ಟಿಕೊಂಡವರು ಹೀಗೆ ನಾನಾ ಕಾರಣಗಳಿಗೆ ಹಾಲಿ ಶಾಸಕರಿಗೆ 40 ಕ್ಷೇತ್ರಗಳಲ್ಲಿ ಕಷ್ಟ ಎಂಬುದು ಮೂರೂ ಪಕ್ಷಗಳು ನಡೆಸಿರುವ ಸಮೀಕ್ಷೆಯಲ್ಲಿ ಕಂಡು ಬಂದಿದೆ. ಇದು ಚಿಂತೆಗೆ ಕಾರಣವಾಗಿದೆ.
ಕಷ್ಟಕರ ವಾತಾವರಣ
ಬಿಜೆಪಿ 2018ರ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ 104 ಕ್ಷೇತ್ರಗಳ ಜತೆಗೆ ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ರಾಜೀನಾಮೆ ನೀಡಿ ಬಂದ 14 ಮಂದಿ ಬಿಜೆಪಿ ಚಿಹ್ನೆಯಡಿ ಆಯ್ಕೆಯಾಗಿದ್ದರಿಂದ ಸಂಖ್ಯಾಬಲ 118ಕ್ಕೆ ಏರಿದೆ. ಈ ಪೈಕಿ 20 ಕ್ಷೇತ್ರಗಳಲ್ಲಿ ಕಷ್ಟಕರ ವಾತಾವರಣವಿದೆ ಎಂಬುದು ಆಂತರಿಕ ಸಮೀಕ್ಷೆಯಲ್ಲಿ ಗೊತ್ತಾಗಿದೆ.
ಸಮೀಕ್ಷೆ ಶಾಕ್!
ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಶಾಸಕರ ಪಕ್ಷಾಂತರ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ಹಳೇ ಮೈಸೂರು ಭಾಗದ ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಬಲ ಹೆಚ್ಚಿಸಿಕೊಂಡು ಈ ಬಾರಿ ಹೆಚ್ಚುವರಿಯಾಗಿ 10 ರಿಂದ 15 ಸ್ಥಾನ ಗೆದ್ದರೆ ಸಾಕು ಎಂಬ ಗುಂಗಿನಲ್ಲಿದ್ದ ಬಿಜೆಪಿ ನಾಯಕರಿಗೆ ಆಂತರಿಕ ಸಮೀಕ್ಷೆ ಶಾಕ್ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಗಾಳ ಹಾಕಲು ಸಿದ್ಧತೆ!
ಬಿಜೆಪಿಗೆ ಇದುವರೆಗೂ ಗೆಲ್ಲದಿರುವ 60 ಕ್ಷೇತ್ರಗಳ ಬಗ್ಗೆ ಹೆಚ್ಚು ಗಮನ ಹರಿಸುವುದರ ಜತೆಗೆ ಇದೀಗ ಸೋಲುವ ಸಾಧ್ಯತೆ ಇರುವ ಕ್ಷೇತ್ರಗಳ ಬಗ್ಗೆಯೂ ತಲೆಬಿಸಿ ಉಂಟಾಗಿದೆ. ಹೀಗಾಗಿಯೇ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಸ್ವ ಸಾಮರ್ಥ್ಯ, ಪ್ರಭಾವಿ ನಾಯಕರಿಗೆ ಗಾಳ ಹಾಕಿ ಪ್ರಾಥಮಿಕ ಮಾತುಕತೆ ಮುಗಿಸಿದೆ ಎಂದು ತಿಳಿದು ಬಂದಿದೆ.
ಮೊದಲಿಗೆ 10 ರಿಂದ 15 ಶಾಸಕರನ್ನು ಸೆಳೆಯಲು ಕಾರ್ಯತಂತ್ರ ರೂಪಿಸಲಾಗಿತ್ತಾದರೂ ಇದೀಗ 20 ರಿಂದ 25 ಮಂದಿಗೆ ಕರೆತರುವ ಪ್ರಯತ್ನಕ್ಕೆ ಕೈ ಹಾಕಲಾಗಿದೆ ಎಂದು ಹೇಳಲಾಗಿದೆ.
ಕಾಂಗ್ರೆಸ್‌ನಲ್ಲೂ ತಳಮಳ
ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಅತೀವ ವಿಶ್ವಾಸದಲ್ಲಿರುವ ಕಾಂಗ್ರೆಸ್‌ನಲ್ಲೂ ಆಂತರಿಕ ಸಮೀಕ್ಷೆಯ ಅನಂತರ ತಳಮಳ ಪ್ರಾರಂಭವಾಗಿದೆ. ಬಣ ರಾಜಕೀಯ, ನಾಯಕರಲ್ಲಿನ ಸಮನ್ವಯ ಕೊರತೆ ದೊಡ್ಡ ಮಟ್ಟದ ಪೆಟ್ಟು ಕೊಡಲಿದೆ, ಹಾಲಿ ಶಾಸಕರ ಸೋಲಿಗೂ ಇದು ಕಾರಣವಾಗಲಿದೆ ಎಂದು ಸಮೀಕ್ಷೆಯಲ್ಲಿ ಕಂಡುಬಂದಿದೆ. ಜತೆಗೆ, ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋಗಿರುವವರ ಕ್ಷೇತ್ರಗಳಲ್ಲಿ ಇನ್ನೂ ಸಮರ್ಥ ಅಭ್ಯರ್ಥಿಗಳು ದೊರಕಿಲ್ಲ. ಇದು ಕಾಂಗ್ರೆಸ್‌ಗೆ ಸವಾಲಾಗಿದೆ. ಜೆಡಿಎಸ್‌ನಲ್ಲಿ ಹಾಲಿ ಶಾಸಕರ ಪೈಕಿ ಐವರು ಗೆಲ್ಲುವುದು ಕಷ್ಟ ಎಂದಿದ್ದು ಪೈಕಿ ಕಾಂಗ್ರೆಸ್ ಹಾಗೂ ಬಿಜೆಪಿಯತ್ತ ಚಿತ್ತ ಹರಿಸಿರುವವರೂ ಇದ್ದಾರೆ ಎಂದು ಹೇಳಲಾಗಿದೆ.
ಹೊಸ ಮುಖ ತಲಾಷೆ?
ಈ ಮಧ್ಯೆ, ಬಿಜೆಪಿಯ ಕೇಂದ್ರ ತಂಡ ಕರ್ನಾಟಕಕ್ಕೆ ಬಂದಿಳಿದಿದ್ದು, ಪ್ರತೀ ಕ್ಷೇತ್ರದ ಬಗ್ಗೆ ಸಮೀಕ್ಷೆ ನಡೆಸಿ ವರದಿ ಸಿದ್ಧಪಡಿಸುತ್ತಿದೆ. ಈ ವರದಿ ಆಧಾರದ ಮೇಲೆಯೇ ಟಿಕೆಟ್ ಕೊಡುವುದು ಬಿಡುವುದು, ಹೊಸ ಮುಖ ತಲಾಷೆ ಮಾಡುವುದು ನಿರ್ಧಾರವಾಗಲಿದೆ ಎಂದು ಹೇಳಲಾಗಿದೆ.
– ಎಸ್. ಲಕ್ಷ್ಮೀನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.