‘ಆಡಿಯೋ ಪಕ್ರರಣ’ವನ್ನು ಸಿಎಂ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ
Team Udayavani, Feb 12, 2019, 11:22 AM IST
ಬೆಂಗಳೂರು: ‘ಆಡಿಯೋ ಪ್ರಕರಣ’ ಕುರಿತಾದಂತೆ ಮಂಗಳವಾರವೂ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಈ ಪ್ರಕರಣವನ್ನು ಮೂರೂ ಪಕ್ಷಗಳು ಬಿಡುವಂತೆ ಕಾಣುತ್ತಿಲ್ಲ. ರಾಜ್ಯದಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿದ್ದರೂ ಆಡಳಿತ ಮತ್ತು ವಿರೋಧ ಪಕ್ಷಗಳು ಈ ಪ್ರಕರಣದ ಕುರಿತಾಗಿಯೇ ಚರ್ಚಿಸುತ್ತಾ ಸದನದ ಅಮೂಲ್ಯ ಸಮಯವನ್ನು ಹಾಳುಮಾಡುತ್ತಿವೆ.
ಆಡಿಯೋದಲ್ಲಿ ಮಾತನಾಡಿರುವ ವ್ಯಕ್ತಿಯು ಈ ಸದನದ ಸದಸ್ಯರಾಗಿದ್ದಾರೆ ಎಂಬ ಆರೋಪವನ್ನು ಸ್ವತಃ ಮುಖ್ಯಮಂತ್ರಿಯವರೇ ಮಾಡಿದ್ದಾರೆ. ಮಾತ್ರವಲ್ಲದೇ ಆ ವ್ಯಕ್ತಿಯು ವಿಧಾನಸಭಾಧ್ಯಕ್ಷರಿಗೆ ಹಣ ಸಂದಾಯ ಮಾಡಿರುವ ಕುರಿತಾಗಿ ಪ್ರಸ್ತಾಪ ಮಾಡಿರುವ ವಿಚಾರವನ್ನು ಹಿಡಿದುಕೊಂಡು ಪರಸ್ಪರ ಮಾತಿನ ಸಮರ ನಡೆಯುತ್ತಿದೆ. ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ಒಪ್ಪಿಸಬೇಕೆಂದು ಕಾಂಗ್ರೆಸ್ ಮತ್ತು ಜೆಡಿಎಸ್ ಒತ್ತಾಯಿಸುತ್ತಿದ್ದರೆ, ವಿರೋಧ ಪಕ್ಷ ಬಿಜೆಪಿ ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಈ ವಿಚಾರವಾಗಿ ಹಲವಾರು ಸದಸ್ಯರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿ ಈ ವಿಚಾರದಲ್ಲಿ ಸ್ಪೀಕರ್ ಅವರಿಗೆ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸುತ್ತಿದ್ದಾರೆ.
ಈ ವಿಚಾರವಾಗಿ ಮಾತನಾಡಿದ ಮಾಜೀ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು, ‘ಆಡಿಯೋ ಕ್ಲಿಪ್ ಅನ್ನು ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಪ್ಪು ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟರು. ಇನ್ನು ಮುಖ್ಯಮಂತ್ರಿಯವರು ಕದ್ದಾಲಿಕೆ ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಶೆಟ್ಟರ್ ಅವರು ಇದೇ ಸಂದರ್ಭದಲ್ಲಿ ಮಾಡಿದರು. ಸಿಎಂ ಆಗಿ ಈ ರೀತಿ ಕದ್ದಾಲಿಕೆ ಮಾಡಿರುವುದು ತಪ್ಪಲ್ಲವೇ ಎಂದು ಶೆಟ್ಟರ್ ಪ್ರಶ್ನಿಸಿದರು. ಮಾತ್ರವಲ್ಲದೆ ಆಡಿಯೋ ಸಿಕ್ಕ ಸಂದರ್ಭದಲ್ಲಿ ಸದನ ನಡೆಯುತ್ತಿದ್ದ ಕಾರಣ ಮುಖ್ಯಮಂತ್ರಿಯವರು ಅದನ್ನು ನೇರವಾಗಿ ಸದನದಲ್ಲಿ ಪ್ರಸ್ತಾಪಿಸಿ ಸ್ಪೀಕರ್ ಅವರ ಗಮನಕ್ಕೆ ತರಬೇಕಿತ್ತು ; ಹಾಗೆ ಮಾಡದೆ ನೇರವಾಗಿ ಸುದ್ದಿಗೊಷ್ಠಿ ನಡೆಸುವ ಮೂಲಕ ರಾಜಕೀಯ ಲಾಭವನ್ನು ಪಡೆಯುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ಶೆಟ್ಟರ್ ವಾದಿಸಿದರು.’
ಶೆಟ್ಟರ್ ಅವರ ಮಾತಿಗೆ ಆಡಳಿತ ಪಕ್ಷದ ಸದಸ್ಯರು ಅಡ್ಡಿಪಡಿಸಿದ ಘಟನೆಯೂ ನಡೆಯಿತು. ಈ ಸಂದರ್ಭದಲ್ಲಿ ಅವರೆಲ್ಲರನ್ನು ಸುಮ್ಮನಿರಿಸಿದ ಸ್ಪೀಕರ್ ಅವರು, ‘ಮಾಜೀ ಮುಖ್ಯಮಂತ್ರಿಯೊಬ್ಬರು ಮಾತನಾಡುತ್ತಿರುವಾಗ ಗಂಭೀರವಾಗಿ ಆಲಿಸಲು ಕಲಿಯಿರಿ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.