ಬಿಜೆಪಿಯ ಆಂತರಿಕ ಕುತಂತ್ರದಿಂದ ಯಡಿಯೂರಪ್ಪ ಅವರ ಮನೆ ಮೇಲೆ ದಾಳಿ: ಡಿ.ಕೆ.ಶಿವಕುಮಾರ್
Team Udayavani, Mar 28, 2023, 1:35 PM IST
ಬೆಂಗಳೂರು: ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸುವ ಬಿಜೆಪಿಯ ಆಂತರಿಕ ಕುತಂತ್ರದ ಭಾಗವಾಗಿ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೀಸಲಾತಿ ವಿಚಾರದಲ್ಲಿ ಗೊಂದಲ ಮೂಡಿಸಿರುವವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಜನ ತಮಗೆ ಅನ್ಯಾಯ ಆದಾಗ ಅಧಿಕಾರದಲ್ಲಿರುವವರ ಮೇಲೆ ಆಕ್ರೋಶ ವ್ಯಕ್ತಪಡಿಸುವುದು ಸಹಜ. ಆದರೆ, ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳು, ಸಚಿವರ ಮನೆ ಮೇಲೆ ದಾಳಿ ಆಗದೆ ಯಾವುದೇ ಅಧಿಕಾರ ಇಲ್ಲದ ಯಡಿಯೂರಪ್ಪ ಅವರ ಮನೆ ಮೇಲೆ ದಾಳಿ ಆಗಿದೆ ಎಂದರೆ ಇದು ಬಿಜೆಪಿಯ ಕುತಂತ್ರಕ್ಕೆ ಸಾಕ್ಷಿಯಲ್ಲದೆ ಮತ್ತೇನೂ’ ಎಂದು ಪ್ರಶ್ನಿಸಿದರು.
ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿತ್ತು. ಈಗ ಗೃಹ ಸಚಿವ ಅಮಿತ್ ಶಾ ಅವರು ಯಡಿಯೂರಪ್ಪ ಅವರ ಮನೆಗೆ ಹೋಗಿ ಅವರ ಜತೆ ಉತ್ತಮ ಸಂಬಂಧ ಹೊಂದಿರುವಂತೆ ತೋರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿದೆ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಆಂತರಿಕವಾಗಿ ಯಡಿಯೂರಪ್ಪ ಅವರನ್ನು ನಿಯಂತ್ರಿಸಲು ಸಾಕಷ್ಟು ಒತ್ತಡ ಹೇರಲಾಗುತ್ತಿದೆ. ನಾನು ಈಗ ಆ ವಿಚಾರದ ಬಗ್ಗೆ ಚರ್ಚೆ ಮಾಡುವುದಿಲ್ಲ ಎಂದು ವ್ಯಾಖ್ಯಾನಿಸಿದರು.
ಈ ಮೀಸಲಾತಿ ವಿಚಾರ ಕೇವಲ ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲೇ ಗೊಂದಲ ಮೂಡಿಸಿದೆ. ಬೇರೆ ರಾಜ್ಯಗಳಲ್ಲಿ ಈಗಾಗಲೇ ಇಂತಹ ಗೊಂದಲದ ಮೀಸಲಾತಿ ತಂದಾಗ ಅದರ ವಿರುದ್ಧ ಸುಪ್ರೀಂ ಕೋರ್ಟ್ ತೀರ್ಪು ಕೊಟ್ಟಿದೆ. ಆದರೂ ಈ ಸರ್ಕಾರ ಜನರಿಗೆ ವಂಚಿಸಲು ಇಬ್ಬರು ಸಚಿವರೇ ಕೂತು ಈ ಸುಳ್ಳು ಮೀಸಲಾತಿಗೆ ಹೆಚ್ಚಳಕ್ಕೆ ಮುಂದಾಗಿದ್ದಾರೆ. ಯಾವ ವರದಿ ಆಧಾರದ ಮೇಲೆ ಸರ್ಕಾರ ಈ ತೀರ್ಮಾನ ಮಾಡಿದೆ? ಹಿಂದುಳಿದ ವರ್ಗಗಳ ಆಯೋಗ ಕಳೆದ ಡಿಸೆಂಬರ್ ನಲ್ಲಿ ನೀಡಿದ ಮಧ್ಯಂತರ ವರದಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿ ಎಂದು ತಿಳಿಸಿದೆಯೇ? ಮಧ್ಯಂತರ ವರದಿ ಮೇಲೆ ಮೀಸಲಾತಿ ಹೆಚ್ಚಳ ಮಾಡಲು ಸಾಧ್ಯವೇ? ಮೀಸಲಾತಿ ಹೆಚ್ಚಳವಾಗಲಿ ಅಥವಾ ಒಳ ಮೀಸಲಾತಿ ಆಗಲಿ, ಸರಿಯಾದ ಅಧ್ಯಯನ ವರದಿ ಆಧರಿಸಿ, ಸಂವಿಧಾನದಲ್ಲಿ ತಿದ್ದುಪಡಿ ತಂದು ಜಾರಿಗೆ ತರಬೇಕೆ ಹೊರತು ಕೇವಲ ಚುನಾವಣೆ ಗಿಮಿಕ್ ಮಾಡಲು ಏಕಾಏಕಿ ಆದೇಶ ನೀಡಿದರೆ ಜಾರಿಗೆ ಬರುವುದಿಲ್ಲ. ಅಲ್ಪಸಂಖ್ಯಾತರ ಮೀಸಲಾತಿ ಕಸಿದು ನಮಗೆ ನೀಡಿ ಎಂದು ಒಕ್ಕಲಿಗ ಹಾಗೂ ಲಿಂಗಾಯತ ಸ್ವಾಮೀಜಿಗಳು ಕೇಳಿದ್ದರೇ? ಒಕ್ಕಲಿಗರು ಹಾಗೂ ಲಿಂಗಾಯತರು ತಮ್ಮ ಜನಸಂಖ್ಯೆ ಆಧಾರದ ಮೇಲೆ ಕ್ರಮವಾಗಿ 12% ಹಾಗೂ 15% ಹೆಚ್ಚಳಕ್ಕೆ ಬೇಡಿಕೆ ಇಡಲಾಗಿತ್ತು. ಮುಸಲ್ಮಾನರಿಂದ ಕಸಿದು 2% ಮೀಸಲಾತಿಗೆ ಬೇಡಿಕೆ ಇಟ್ಟಿರಲಿಲ್ಲ. ಈಗಾಗಲೇ ಮೀಸಲಾತಿ 56% ಆಗಿದ್ದು, ಒಕ್ಕಲಿಗರು ಲಿಂಗಾಯತರು ಮೀಸಲಾತಿ ಸೇರಿಸಿ ವಿಸ್ತರಣೆ ಮಾಡಲಿ’ ಎಂದು ಹೇಳಿದರು.
‘ಅಲ್ಪಸಂಖ್ಯಾತರ ಮೀಸಲಾತಿ ಕಸಿದಿರುವ ಬಗ್ಗೆ ಜೆಡಿಎಸ್ ನಾಯಕರಾದ ಸಿ.ಎಂ ಇಬ್ರಾಹಿಂ ಅವರು ಇದುವರೆಗೂ ಏನು ಮಾತನಾಡಿಲ್ಲ. ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಮೀಸಲಾತಿ ಬದಲಾವಣೆ ಮಾಡಬಾರದು ಎಂದು ಆಗ್ರಹಿಸುತ್ತದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರು, ಒಕ್ಕಲಿಗರು, ಲಿಂಗಾಯತರ ಹಿತ ಕಾಯುವ ತೀರ್ಮಾನ ಮಾಡಲಾಗುವುದು’ ಎಂದು ತಿಳಿಸಿದರು.
ಇನ್ನು ಎರಡನೇ ಅಭ್ಯರ್ಥಿ ಪಟ್ಟಿಯಲ್ಲಿ ಗೊಂದಲ ಇದೆಯೇ ಎಂದು ಕೇಳಿದ ಪ್ರಶ್ನೆಗೆ, ‘ಮಾರ್ಚ್ 30ರ ನಂತರ ಪಟ್ಟಿ ಬಿಡುಗಡೆ ಮಾಡಲಾಗುವುದು. ಮೊದಲ ಪಟ್ಟಿಯಲ್ಲಿ ಯಾವುದಾದರೂ ಗೊಂದಲ ಕಾಣುತ್ತಿದೆಯೆ? ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ’ ಎಂದು ತಿಳಿಸಿದರು.
ಎರಡೂ ರಾಷ್ಟ್ರೀಯ ಪಕ್ಷಗಳು ತಮ್ಮನ್ನು ಸಂಪರ್ಕಿಸಿವೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಗಮನ ಸೆಳೆದಾಗ ಅದಕ್ಕೆ ಉತ್ತರಿಸಿದ ಅವರು, ‘ಇದು ಸುಳ್ಳು. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದ್ದು, ಯಾರ ಬೆಂಬಲವನ್ನು ಪಡೆಯುವ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷ ಯಾರನ್ನು ಸಂಪರ್ಕ ಮಾಡಿಲ್ಲ. ಅವರನ್ನು ಯಾರೂ ಸಂಪರ್ಕಿಸಿದ್ದಾರೆ ಎಂದು ಹೆಸರು ಬಹಿರಂಗಪಡಿಸಲಿ’ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.