Hanagal ಗ್ಯಾಂಗ್ ರೇಪ್ ಪ್ರಕರಣ ಮುಚ್ಚಿ ಹಾಕುವ ಯತ್ನ: ಪ್ರಹ್ಲಾದ್ ಜೋಶಿ
ತುಷ್ಟೀಕರಣದ ಪರಮಾವಧಿಯನ್ನು ನೋಡುತ್ತಿದ್ದೇವೆ..., ಏಕವಚನ ಸಂಸ್ಕೃತಿ ಪ್ರಾರಂಭ ಮಾಡಿದ್ದೇ ಸಿದ್ದರಾಮಯ್ಯ
Team Udayavani, Jan 14, 2024, 10:27 PM IST
ಕೊಪ್ಪಳ: ಹಾನಗಲ್‌ನಲ್ಲಿ ಮಹಿಳೆಯ ಮೇಲೆ ನಡೆದಿರುವ ಗ್ಯಾಂಗ್ ರೇಪ್ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ಸ್ವತಃ ಮಹಿಳೆಯೇ ಹೇಳಿಕೆ ನೀಡಿದ್ದರೂ ಯಾವುದೇ ಕ್ರಮವಾಗುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಜ್ಯ ಸರ್ಕಾರದ ವಿರುದ್ದ ಗುಡುಗಿದರು.
ಗಂಗಾವತಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯದಲ್ಲಿಯೇ ಹಾವೇರಿ ಜಿಲ್ಲೆಯಲ್ಲಿ ಇಂತಹ ಘಟನೆಗಳು ಹೆಚ್ಚು ನಡೆಯುತ್ತಿವೆ. ಇಲ್ಲಿ ತುಷ್ಟೀಕರಣ ಆರಂಭವಾಗಿದೆ. ಇದರ ಪರಮಾವಧಿಯನ್ನು ಕಾಂಗ್ರೆಸ್ ಸರ್ಕಾರದಲ್ಲಿ ನೋಡುತ್ತಿದ್ದೇವೆ. ಇದನ್ನು ತೀವ್ರವಾಗಿ ಖಂಡಿಸುವೆ ಎಂದರು.
ಮಾಜಿ ಸಿಎಂ ಹೇಳಿದಂತೆ ಈ ಪ್ರಕರಣ ತನಿಖೆಗೆ ಎಸ್‌ಐಟಿ ರಚನೆ ಮಾಡಬೇಕು. ಇಂತಹ ಘಟನೆ ಮತ್ತೆ ಮರುಕಳಿಸದಂತೆ ಕ್ರಮ ವಹಿಸಬೇಕು. ರಾಮ ಮಂದಿರದ ವಿಚಾರ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಅವರೇ ಸುಮ್ಮನಿದ್ದರೆ ಇದು ರಾಜಕೀಯ ಆಗುತ್ತಿರಲಿಲ್ಲ. ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣ, ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದರು.
ಹಿಂದೆ ಸೋಮನಾಥ ಮಂದಿರ ನಿರ್ಮಾಣ ಆಗುವ ವೇಳೆಯೂ ಆಗ ಡಾ.ಬಾಬ ರಾಜೇಂದ್ರ ಪ್ರಸಾದ್ ಅವರಿಗೆ ಅಂದು ನೀವು ರಾಷ್ಟ್ರಪತಿಯಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಾರದು ಎಂದು ಅಂದಿನ ಕಾಂಗ್ರೆಸ್ ಸರ್ಕಾರ ಹೇಳಿತ್ತು. ಆದರೆ ಎಲ್ಲ ಅಡ್ಡಿ ಆತಂಕಗಳನ್ನು ಮೀರಿ ಬಾಬು ರಾಜೇಂದ್ರ ಪ್ರಸಾದ್ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಇತಿಹಾಸ ಪುಟಗಳಲ್ಲಿ ದಾಖಲಾಗಿದೆ ಎಂದರು.
ಕಾಂಗ್ರೆಸ್ ರಾಮ ಕಾಲ್ಪನಿಕ, ರಾಮ ಇಲ್ಲಿಯೇ ಜನಿಸಿದ ಎನ್ನುವುದಕ್ಕೆ ಗ್ಯಾರಂಟಿ ಏನು ? ರಾಮನ ಜನ್ಮದಿನದ ದಾಖಲೆ ಇದೆಯಾ ? ಸುಪ್ರೀಂ ಕೋರ್ಟ್ ತೀರ್ಪನ್ನು ಕೊಡಬಾರದು. ನಮ್ಮ ಸರ್ಕಾರ ಬಂದಾಗ ಮತ್ತೆ ಅಲ್ಲಿ ಬಾಬ್ರಿ ಮಸೀದಿ ಪುನರ್ ನಿರ್ಮಾಣ ಮಾಡುತ್ತೇವೆ ಎಂದು ಪಿ.ಚಿದಂಬರಂ ಅವರು ಹೇಳಿದ್ದಾರೆ. ಕಲಂ 370 ಬಗ್ಗೆಯೂ ಕಾಂಗ್ರೆಸ್ ನಿಲುವು ಅದೇ ಆಗಿದೆ ಎಂದರು.
ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣದಿಂದಾಗಿ ವಾದ-ವಿವಾದ ನಡೆಯುತ್ತಿವೆ. ಸದ್ವಿಚಾರದಿಂದ ನಾವೆಲ್ಲರಿಗೂ ಆಹ್ವಾನ ಮಾಡುತ್ತಿದ್ದೇವೆ. ಸದ್ಭಾವದಿಂದ, ಸದ್ಭಕ್ತಿಯಿಂದ ಎಲ್ಲರಿಗೂ ಆಹ್ವಾನ ನೀಡುತ್ತಿದ್ದೇವೆ. ಅವರು ಬರದೇ ಇದ್ದರೂ ಪರವಾಗಿಲ್ಲ, ಆದರೆ ಬರುವುದಿಲ್ಲವೆಂದು ಹೇಳಿಕೆ ಕೊಡುವ ಅಗತ್ಯವಿರಲಿಲ್ಲ. ಕಾಂಗ್ರೆಸ್ ಇದನ್ನೊಂದು ಅನಗತ್ಯ ವಿವಾದ ಮಾಡುತ್ತಿದೆ. ಸಿದ್ದರಾಮಯ್ಯ ಅವರು ಮೊದಲು ಅಯೋಧ್ಯಾ ರಾಮ ಮಂದಿರಕ್ಕೆ ಬರುವುದಿಲ್ಲ ಎಂದಿದ್ದರು. ಇದಕ್ಕೆ ಕೆಲವು ಕಾಂಗ್ರೆಸ್ಸಿಗರು ವಿರೋಧ ಮಾಡಿದ್ದಕ್ಕೆ ಮತ ಬರುವುದಿಲ್ಲ ಎಂದು ಅಯೋಧ್ಯೆಗೆ ಬರುತ್ತೇವೆ ಎಂದಿದ್ದಾರೆ. ಮುಸ್ಲಿಂರ ಓಲೈಕೆಗಾಗಿ ಹೇಳಿಕೆ ನೀಡಿದ್ದವರಿಗೆ ಈಗ ಮನವರಿಕೆಯಾಗಿದೆ ಎಂದರು.
ಕಾಂಗ್ರೆಸ್ ಪಕ್ಷ ಪೂರ್ತಿ ಗೊಂದಲದಲ್ಲಿದೆ. ರಾಹುಲ್ ಗಾಂಧಿ ತರ ಕಾಂಗ್ರೆಸ್ ಪಾರ್ಟಿಯೂ ಗೊಂದಲದಲ್ಲಿ ಇದೆ. ಸದ್ಯ ಕಾಂಗ್ರೆಸ್ ಸ್ಥಿತಿ ಸರಿಯಿಲ್ಲ. ರಾಹುಲ್ ಗಾಂಧಿ ನಮ್ಮ ನಾಯಕನಲ್ಲ ಎಂದು ಖರ್ಗೆ ಹೇಳಲಿ. ಆದರೆ ಅವರು ಅದನ್ನು ಒಪ್ಪುವುದಿಲ್ಲ ಎಂದರು.
ಅನಂತ್ ಕುಮಾರ ಹೆಗಡೆ ಏಕವಚನದ ಹೇಳಿಕೆ ವಿಚಾರ, ಏಕವಚನದ ಸಂಸ್ಕೃತಿ ಪ್ರಾರಂಭ ಮಾಡಿದ್ದೇ ಸಿದ್ದರಾಮಯ್ಯ. ಆದರೂ ಅನಂತಕುಮಾರ್ ಅವರಿಗೆ ಏಕ ವಚನದಲ್ಲಿ ಟೀಕೆ ಮಾಡುವುದು ಬೇಡ ಎಂದು ಸಲಹೆ ನೀಡುವೆ ಎಂದರಲ್ಲದೇ ಅವರ ಮೇಲೆ ಕೇಸ್ ಮಾಡುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.