ವಿಧಾನಸೌಧದಲ್ಲಿ ಗ್ರಂಥಾಲಯ ಮೇಲ್ವಿಚಾರಕ ಆತ್ಮಹತ್ಯೆ ಯತ್ನ

Team Udayavani, Jun 25, 2019, 3:05 AM IST

vidhana

ಬೆಂಗಳೂರು: ರಾಜ್ಯಾದ್ಯಂತ ಗುತ್ತಿಗೆ ಆಧಾರದ ಮೇಲೆ ಕರ್ತವ್ಯನಿರ್ವಹಿಸುತ್ತಿರುವ ಆರು ಸಾವಿರ ಗ್ರಂಥಾಲಯ ಸಿಬ್ಬಂದಿಗೆ ಕನಿಷ್ಠ ವೇತನ ನೀಡುವಂತೆ ಮನವಿ ನೀಡಲು ಆಗಮಿಸಿದ ಗ್ರಂಥಾಲಯ ಮೇಲ್ವಿಚಾರಕರೊಬ್ಬರು “ಸರ್ಕಾರದ ವಿರುದ್ಧ ಡೆತ್‌ನೋಟ್‌’ ಬರೆದಿಟ್ಟು ವಿಧಾನಸೌಧದಲ್ಲಿ ಕುತ್ತಿಗೆ ಹಾಗೂ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ವಿಧಾನಸೌಧದ 3ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 332ರ ಶೌಚಾಲಯದಲ್ಲಿ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಅನೂರು ಗ್ರಾಮ ಪಂಚಾಯತ್‌ನ ಗ್ರಂಥಾಲಯದಲ್ಲಿ ಮೇಲ್ವಿಚಾರಕ ಆರ್‌. ರೇವಣ್ಣ ಕುಮಾರ್‌(48) ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದು ಬೌರಿಂಗ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೇವಣ್ಣ ಕುಮಾರ್‌ 20ಕ್ಕೂ ಅಧಿಕ ವರ್ಷಗಳಿಂದ ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿಯಾಗಿದ್ದಾರೆ. ರಾಜ್ಯದಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಂಥಾಲಯ ಸಿಬ್ಬಂದಿ, ಮೇಲ್ವಿಚಾರಕರನ್ನು ಖಾಯಂಗೊಳಿಸಿ, ಕನಿಷ್ಠ ವೇತನ ನಿಗದಿ ಮಾಡುವಂತೆ ನಾಲ್ಕೈದು ವರ್ಷಗಳಿಂದ ರಾಜ್ಯಪಾಲರು, ರಾಷ್ಟ್ರಪತಿ, ಪ್ರಧಾನಿ ಸೇರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ.

ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಿಎಂ ಕಚೇರಿಗೆ ಮನವಿ ಪತ್ರ ಸಲ್ಲಿಸಲು ಮುಂದಾಗಿದ್ದಾರೆ. ಆದರೆ, ಕಚೇರಿ ಸಿಬ್ಬಂದಿ ಮನವಿ ಸ್ವೀಕರಿಸಲು ಹಿಂದೇಟು ಹಾಕಿದ್ದಾರೆ. ಇದರಿಂದ ಬೇಸತ್ತ ಅವರು, ಸಮೀಪದಲ್ಲೇ ಇರುವ ಶೌಚಾಲಯಕ್ಕೆ ಹೋಗಿ, ಕೈ ಮತ್ತು ಕುತ್ತಿಗೆಯನ್ನು ಬ್ಲೇಡ್‌ನಿಂದ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಟಾಪ್ ನ್ಯೂಸ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.