ಆಡಿಯೋ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Team Udayavani, Feb 21, 2019, 1:05 AM IST
ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ “ಆಪರೇಷನ್ ಆಡಿಯೋ’ ಆರೋಪದಡಿ ರಾಯಚೂರು ಜಿಲ್ಲೆ ದೇವದುರ್ಗ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ದಾಖಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಇಲ್ಲಿನ ಹೈಕೋರ್ಟ್ ಪೀಠ, ತೀರ್ಪು ಕಾಯ್ದಿರಿಸಿದೆ. ಯಡಿಯೂರಪ್ಪ, ಶಾಸಕ ಶಿವನಗೌಡ ನಾಯಕ ಸೇರಿ ನಾಲ್ವರ ವಿರುದಟಛಿ ರಾಯಚೂರು ಜಿಲ್ಲೆ ದೇವದುರ್ಗ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಬಿಎಸ್ವೈ ಪರ ಹಿರಿಯ ನ್ಯಾಯವಾದಿ ಸಿ.ವಿ.ನಾಗೇಶ ವಾದ ಮಂಡಿಸಿ, ತಮ್ಮ ಕಕ್ಷಿದಾರರ ಹೆಸರಿಗೆ ಚ್ಯುತಿ ತರುವ ಉದ್ದೇಶದಿಂದಲೇ ರಾಜಕೀಯ ಸಂಚು ನಡೆಸಿ ಕೇಸ್ ದಾಖಲಾಗಿಸಲಾಗಿದೆ. ತಮ್ಮ ಕಕ್ಷಿದಾರರು ಪ್ರಜಾಪ್ರತಿನಿಧಿ ಕಾಯ್ದೆಯಂತೆ ಜನಸೇವಕರಿಗೆ ಲಂಚದ ಆಮಿಷವೊಡ್ಡಿಲ್ಲ ಎಂದರು. ಈ ಕುರಿತು ಸುಪ್ರೀಂಕೋರ್ಟ್ ನೀಡಿರುವ ಎರಡು ತೀರ್ಪುಗಳ ಪ್ರತಿಗಳನ್ನು ಸಹ ನ್ಯಾಯಮೂರ್ತಿಗಳಿಗೆ ಸಲ್ಲಿಸಿದರು.
ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೋಕೇಟ್ಜನರಲ್ ಸಂದೇಶ ಚೌಟಾ ವಾದ ಮಂಡಿಸಿ, ಎಫ್ಐಆರ್ ರದ್ದು ಮಾಡಬಾರದು. ವಿಚಾರಣೆ ನಡೆಸಬೇಕು ಎಂದು ವಾದಿಸಿದರು. ವಾದ, ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ಪಿ.ಜಿ.ಎಂ.ಪಾಟೀಲ, ಮೂರು ದಿನದಲ್ಲಿ ತೀರ್ಪು ಪ್ರಕಟಿಸುವುದಾಗಿ ಹೇಳಿ ಆದೇಶ ಕಾಯ್ದಿರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.