Audio Viral:ದೂರು ದಾಖಲಿಸಿದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ದೂರು
Team Udayavani, Oct 22, 2024, 6:55 AM IST
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ತನ್ನ ಧ್ವನಿಯ ನಕಲಿ ಆಡಿಯೋ ವೈರಲ್ ಮಾಡುವ ಮೂಲಕ ತನ್ನ ಗೌರವಕ್ಕೆ ಧಕ್ಕೆ ಉಂಟು ಮಾಡಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ರಾಜ್ಯ ಗೃಹಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಸಂಬಂಧ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ವಿಧಾನಸೌಧ ಠಾಣೆ ಪೊಲೀಸರು, ಸೈಬರ್ ತಜ್ಞರ ಮೂಲಕ ಆರೋಪಿಗಳ ಪತ್ತೆ ಕಾರ್ಯ ಆರಂಭಿಸಿದ್ದಾರೆ.
ಶಾಸಕ ಶಿವಲಿಂಗೇಗೌಡ ನೀಡಿರುವ ದೂರಿನಲ್ಲಿ, 2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಮತ ಹಾಕಲು ಹಣ ಹಂಚುವಂತೆ ನಾನು ಹೇಳಿರುವಂತೆ ಸುಳ್ಳು ಹೇಳಿಕೆಗಳನ್ನು ಹಾಗೂ ನನ್ನ ಧ್ವನಿಯ ನಕಲಿ ಆಡಿಯೋವನ್ನು ಸೃಷ್ಟಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಅದರಿಂದ ನನ್ನ ಘನತೆಗೆ ಧಕ್ಕೆ ಉಂಟಾಗುತ್ತಿದೆ.
ಹೀಗಾಗಿ ನಕಲಿ ಆಡಿಯೋ ಹರಿಬಿಟ್ಟಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಶಿವಲಿಂಗೇಗೌಡ ದೂರಿನಲ್ಲಿ ಕೋರಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಶಿವಲಿಂಗೇಗೌಡ, ಅರಸೀಕೆರೆ ಕ್ಷೇತ್ರದ ಶಾಸಕರಾಗಿ ಚುನಾಯಿತರಾಗಿದ್ದಾರೆ. ಸದ್ಯ, ರಾಜ್ಯ ಗೃಹಮಂಡಳಿ ಅಧ್ಯಕ್ಷರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.