ಸರಳೀಕೃತ ರಿಟರ್ನ್ಸ್ ಬಗ್ಗೆ ಜಾಗೃತಿ
Team Udayavani, Dec 24, 2019, 3:06 AM IST
ಬೆಂಗಳೂರು: ಜಿಎಸ್‌ಟಿಯಡಿ ಸುಗಮವಾಗಿ ವ್ಯವಹರಿಸಲು ಅನುಕೂಲವಾಗುವಂತೆ ರಿಟರ್ನ್ಸ್ ಸಲ್ಲಿಕೆ ನಮೂನೆ (ಸಹಜ್, ಸುಗಮ್, ನಾರ್ಮಲ್) ವ್ಯವಸ್ಥೆ ಏ.1ರಿಂದ ಜಾರಿ ಹಿನ್ನೆಲೆಯಲ್ಲಿ ಅವುಗಳ ಬಗ್ಗೆ ವ್ಯಾಪಾರ- ವ್ಯವಹಾರಸ್ಥರಿಗೆ ಜಾಗೃತಿ ಮೂಡಿಸುವ ಕಾರ್ಯ ಶುರುವಾಗಿದೆ.
ಕೇಂದ್ರ ತೆರಿಗೆಗಳ ಇಲಾಖೆ, ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯು ಎಫ್ಕೆಸಿಸಿಐ, ಇತರೆ ವ್ಯಾಪಾರ- ವಾಣಿಜ್ಯ ಸಂಘಟನೆಗಳ ಸಹಯೋಗದಲ್ಲಿ ರಾಜ್ಯದಲ್ಲೂ ಈಗಾಗಲೇ 20ಕ್ಕೂ ಹೆಚ್ಚು ಜಾಗೃತಿ ಕಾರ್ಯಕ್ರಮಗಳು ನಡೆದಿವೆ. ಸುಧಾರಿತ ರಿಟರ್ನ್ಸ್ ನಮೂನೆಗಳ ಭರ್ತಿ, ವಿವರ ಸಲ್ಲಿಕೆ ಇತರೆ ವಿಚಾರಗಳ ಬಗ್ಗೆ ವ್ಯಾಪಾರ- ವ್ಯವಹಾರಸ್ಥರಲ್ಲಿ ಅರಿವು ಮೂಡಿಸಲಾಗುತ್ತಿದೆ.
ಪ್ರಮುಖವಾಗಿ ಅನುಬಂಧ -1 (ಪೂರೈಕೆದಾರರು ನೀಡಬೇಕಾದ ವಿವರ) ಹಾಗೂ ಅನುಬಂಧ- 2ರ (ಖರೀದಾರರು ತಮ್ಮ ಖರೀದಿ ವಿವರ ತಿಳಿಯುವ ವ್ಯವಸ್ಥೆ) ಬಗ್ಗೆಯೂ ಜಾಗೃತಿ ಮೂಡಿಸಲಾಗುತ್ತದೆ. ಜಿಎಸ್‌ಟಿ ವ್ಯವಸ್ಥೆಯಡಿ ತೆರಿಗೆದಾರರು ಸುಲಭವಾಗಿ ವ್ಯವಹರಿಸಲು ಅನುಕೂಲವಾಗುವಂತೆ ನಿಯಮಿತವಾಗಿ ಕಾರ್ಯಾಗಾರ, ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಇದರಿಂದ ತೆರಿಗೆದಾರರು ಸಮಯಕ್ಕೆ ಸರಿಯಗಿ ರಿಟರ್ನ್ಸ್ ಸಲ್ಲಿಸಲು ಅನುಕೂಲವಾಗಲಿದೆ.
ಪರಿಣಾಮವಾಗಿ ಸರ್ಕಾರಕ್ಕೂ ಸಕಾಲದಲ್ಲಿ ತೆರಿಗೆ ಸಂಗ್ರಹವಾಗುವುದಲ್ಲದೆ, ತೆರಿಗೆದಾರರೂ ಸಮಸ್ಯೆ ಇಲ್ಲದೆ ರಿಟರ್ನ್ಸ್ ಸಲ್ಲಿಸಲು ನೆರವಾಗಲಿದೆ. ಈವರೆಗೆ ಬೆಂಗಳೂರಿನಲ್ಲಿ 10 ಕಾರ್ಯಾಗಾರ ಸೇರಿದಂತೆ ರಾಜ್ಯಾದ್ಯಂತ 20ಕ್ಕೂ ಹೆಚ್ಚು ಕಾರ್ಯಾಗಾರಗಳಾಗಿದ್ದು, ವ್ಯಾಪಾರ- ವ್ಯವಹಾರಸ್ಥರಿಗೆ ಅನುಕೂಲವಾಗುವ ವಿಶ್ವಾಸವಿದೆ ಎಂದು ಎಫ್ಕೆಸಿಸಿಐ ರಾಜ್ಯ ಜಿಎಸ್‌ಟಿ ಅಧ್ಯಕ್ಷ ಬಿ.ಟಿ.ಮನೋಹರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.