B K Hariprasad ನಡೆಗೆ ಸಿದ್ದು ಆಪ್ತರ ಗುದ್ದು; ಬೀದಿಗೆ ಹೋಗಿ ಮಾತನಾಡಿದ್ದು ತಪ್ಪು
Team Udayavani, Sep 12, 2023, 6:55 AM IST
ಬೆಂಗಳೂರು: ಕಾಂಗ್ರೆಸ್ ಸರ್ಕಾರ ನೂರು ದಿನಗಳನ್ನು ಪೂರೈಸಿದ ಸಂಭ್ರಮದಲ್ಲಿರುವಾಗಲೇ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ನೀಡಿದ ಹೇಳಿಕೆ ಈಗ ಸರ್ಕಾರ ಹಾಗೂ ಪಕ್ಷದಲ್ಲಿ ಕಾರ್ಮೋಡದ ವಾತಾವರಣ ಸೃಷ್ಟಿಸಿದೆ. ಸಿದ್ದರಾಮಯ್ಯ ಆಪ್ತರೆನಿಸಿ ಕೊಂಡಿರುವ ಹಿರಿಯ ಸಚಿವರಾದ ಎಂ.ಬಿ.ಪಾಟೀಲ್, ಪ್ರಿಯಾಂಕ್ ಖರ್ಗೆ ಅವರು ಸೋಮವಾರ ನೇರವಾಗಿಯೇ ಹರಿಪ್ರಸಾದ್ ವಿರುದ್ಧ ಕಿಡಿಕಾರಿದ್ದಾರೆ.
ಇನ್ನೊಂದೆಡೆ. ಹರಿಪ್ರಸಾದ್ ಹೇಳಿಕೆಯನ್ನೇ ಪ್ರತಿಪಕ್ಷಗಳು ಅಸ್ತ್ರವಾಗಿ ಬಳಸಿಕೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ, ಜೆಡಿಎಸ್ ಪಕ್ಷಗಳು ಟೀಕೆಗಿಳಿದಿವೆ. ಇದು ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರಲಿದೆ ಎಂಬ ಆತಂಕ ಕಾಂಗ್ರೆಸ್‌ನಲ್ಲಿ ತಳಮಳ ಸೃಷ್ಟಿಸಿದೆ. ಮುಂಬರುವ ಲೋಕಸಭಾ ಚುನಾವಣೆ ಮೇಲೂ ಪರಿಣಾಮ ಬೀರಬಹುದೆಂಬ ಆತಂಕ ಮನೆ ಮಾಡಿದೆ. ಶನಿವಾರ ನಡೆದ ಈಡಿಗ, ಬಿಲ್ಲವ, ನಾಮಧಾರಿ, ಧೀವರು ಮತ್ತು ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಪೂರ್ವಭಾವಿ ಸಭೆಯಲ್ಲಿ ಹರಿಪ್ರಸಾದ್ ಆಡಿರುವ ಮಾತುಗಳು ಮಳೆ ನಿಂತರೂ ಹನಿ ನಿಲ್ಲಲ್ಲ ಎಂಬಂತೆ ಕ್ರಿಯೆಗೆ ಪ್ರತಿಕ್ರಿಯೆಗಳು ಬರುತ್ತಲೇ ಇವೆ.
ಈಗ ಸಿದ್ದರಾಮಯ್ಯ ಹಾಗೂ ಹರಿಪ್ರಸಾದ್ ನಡುವೆ ಜಿದ್ದಾಜಿದ್ದಿ ನಡೆದಿದೆ. ಸಂಪುಟದ ಸದಸ್ಯರು ಸಿಎಂ ಪರ ವಕಾಲತ್ತುವಹಿಸಿದರೆ, ಇದಕ್ಕೆ ಕೆಲವು ಶಾಸಕರು ಸಹ ದನಿಗೂಡಿಸಿದ್ದಾರೆ. ಈ ನಡುವೆ ಮಧ್ಯ ಪ್ರವೇಶಿಸಿರುವ ಕಾಂಗ್ರೆಸ್ ಹೈಕಮಾಂಡ್ ಬಹಿರಂಗ ಹೇಳಿಕೆ ನೀಡಬಾರದು ಎಂದು ಎಚ್ಚರಿಕೆ ಸಂದೇಶ ರವಾನಿಸಿದೆ.
ಎಂಬಿಪಾ ವಿರೋಧ
ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ಹರಿಪ್ರಸಾದ್ ಪಕ್ಷದ ಹಿರಿಯ ನಾಯಕರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯಸಭಾ ಸದಸ್ಯರಾಗಿ, ವಿಧಾನ ಪರಿಷತ್ತಿನಲ್ಲಿ ಪ್ರತಿಪಕ್ಷ ನಾಯಕರಾಗಿ ಕೆಲಸ ಮಾಡಿರುವವರು. ಅವರಿಂದ ಇಂತಹ ಮಾತು ಬರಬಾರದಿತ್ತು. ಅವರ ಮಾತುಗಳನ್ನು ಕೇಳಿಸಿಕೊಂಡು ಪಕ್ಷದ ರಾಷ್ಟ್ರೀಯ ನಾಯಕರು ಸುಮ್ಮನೆ ಕೂರುವುದಿಲ್ಲ ಎಂದು ಹೇಳಿದ್ದಾರೆ. ಜತೆಗೆ, ಹರಿಪ್ರಸಾದ್ ನಡೆ ಬಗ್ಗೆ ಪಕ್ಷ ಗಮನಿಸುತ್ತಿದ್ದು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದೂ ತಿಳಿಸಿದ್ದಾರೆ.
ಹರಿಪ್ರಸಾದ್‌ಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸುಜೇìವಾಲಾ, ವೇಣುಗೋಪಾಲ್ ಎಲ್ಲರೂ ಆತ್ಮೀಯರು. ಹೀಗಿರುವಾಗ ಅವರು ಎಲ್ಲ ವಿಚಾರಗಳನ್ನೂ ಪಕ್ಷದ ಒಳಗೇ ಮಾತನಾಡಬೇಕಿತ್ತು. ಆದರೆ ಅವರು ಬೀದಿಗೆ ಹೋಗಿದ್ದಾರೆ. ಇದು ಸರಿಯಲ್ಲ. ಇದರ ಪರಿಣಾಮಗಳನ್ನು ಅವರು ಎದುರಿಸಬೇಕಾಗುತ್ತದೆ ಎಂದು ಎಂ.ಬಿ. ಪಾಟೀಲ್ ಹೇಳಿದರು.
ಪಕ್ಷದ ಚೌಕಟ್ಟಿನಲ್ಲಿರಬೇಕು
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, ಸಮಾಜದ ಪರ ಹೋರಾಟ ಮಾಡುವುದು ತಪ್ಪಲ್ಲ, ಅದಕ್ಕೂ ಒಂದು ಮಿತಿ ಇರುತ್ತದೆ. ಯಾರೇ ಇದ್ದರೂ ಪಕ್ಷದ ಶಿಸ್ತು ಮತ್ತು ಚೌಕಟ್ಟಿನ ಒಳಗೆ ಇರಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಕೂಡ ಹರಿಪ್ರಸಾದ್ ಅವರಂತಹ ನಾಯಕರು ಈ ರೀತಿ ಹೇಳಿಕೆ ಕೊಡಬಾರದಿತ್ತು. ಪಕ್ಷ ಬಹಳ ಕಷ್ಟಪಟ್ಟು ಅಧಿಕಾರಕ್ಕೆ ಬಂದಿದೆ. ಸಾಮಾಜಿಕ ನ್ಯಾಯ ಇರುವುದೇ ಕಾಂಗ್ರೆಸ್‌ನಲ್ಲಿ, ಸಾಮಾಜಿಕ ನ್ಯಾಯವೇನೂ ಕಡಿಮೆ ಆಗಿಲ್ಲ ಎಂದು ಹೇಳುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ದೂರು ಕೊಡಲಿ ಸಂತೋಷ
ನನ್ನ ವಿರುದ್ದ ಸುರ್ಜೆವಾಲಾಗೆ ದೂರು ಕೊಟ್ಟರೆ ಬಹಳ ಸಂತೋಷ. ನನ್ನ ವಿರುದ್ದ ದೂರು ಕೊಡುವವರು ಮೊದಲು ತಾವು ಏನೆಂದು ತಿಳಿದುಕೊಳ್ಳಲಿ ಎಂದು ಬಿ.ಕೆ. ಹರಿಪ್ರಸಾದ್ ಮತ್ತೆ ಸ್ವಪಕ್ಷದವರ ವಿರುದ್ಧ ಗುಡುಗಿದ್ದಾರೆ. ಕೊಪ್ಪಳದ ಕುಕನೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ದ ಮೊನ್ನೆ ಮಾತನಾಡಿದ್ದೆ, ಈಗಲ್ಲ. ನನ್ನ ವಿರುದ್ಧ ದೂರು ಕೊಟ್ಟಿರುವ ಶಾಸಕ ನಂಜೇಗೌಡ ಮೊದಲು ತಾವೇನೆಂದು ತಿಳಿಯಲಿ. ಅವರ ಮೇಲೆ ಕೆಲವು ಹಗರಣಗಳಿವೆ. ಆ ಹಗರಣಗಳಿಂದ ಬಚಾವಾಗಲು ಮಾತನಾಡಿದ್ದಾರೆ. ಅವರಿಗೆ ಪಾರಾಗುವೆ ಎನ್ನುವ ಧೈರ್ಯ ಇದ್ದರೆ ನನ್ನ ಬಗ್ಗೆ ಹೇಳುತ್ತಲೇ ಇರಲಿ ಎಂದಿದ್ದಾರೆ. ಜತೆಗೆ ನನ್ನ ಬಗ್ಗೆ ಮಾತನಾಡುವ ಎಚ್.ವಿಶ್ವನಾಥ ಯಾವ ಪಕ್ಷದಲ್ಲಿ ಇದ್ದಾರಂತೆ ಎಂದು ಕಿಡಿಕಾರಿದರು.
ಖರ್ಗೆ ಕರೆ, ಮೌನಕ್ಕೆ ಸಲಹೆ
ಹರಿಪ್ರಸಾದ್ ಆಡಿರುವ ಮಾತುಗಳ ಬಗ್ಗೆ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುಜೇìವಾಲ ಅವರ ಗಮನಕ್ಕೆ ತಂದು ಸರ್ಕಾರದ ಆರಂಭದಲ್ಲೇ ಈ ರೀತಿಯ ವರ್ತನೆ ಸರಿಯಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಡ್ಯಾಮೇಜ್ ಕಂಟ್ರೋಲ್‌ಗೆ ಹೈಕಮಾಂಡ್ ಮುಂದಾಗಿದೆ. ಸ್ವತಃ ಖರ್ಗೆ ಅವರು ಹರಿಪ್ರಸಾದ್‌ಗೆ ಕರೆ ಮಾಡಿ ಸರ್ಕಾರ ಹಾಗೂ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವಂತಹ ಯಾವುದೇ ಹೇಳಿಕೆ ನೀಡದಂತೆ ತಾಕೀತು ಮಾಡಿದ್ದಾರೆಂದು ಹೇಳಲಾಗಿದೆ. ಕೆಲಕಾಲ ಮೌನವಹಿಸುವಂತೆಯೂ ಸಲಹೆ ನೀಡಿದ್ದಾರೆಂದು ಗೊತ್ತಾಗಿದೆ.
ದಿಲ್ಲಿಗೆ ಶಿಫ್ಟ್ ?
ಹರಿಪ್ರಸಾದ್ ಅವರು ರಾಜ್ಯದಲ್ಲಿಯೇ ಇದ್ದರೆ ಸದಾ ಕಾಲ ಸರ್ಕಾರಕ್ಕೆ ಕಿರಿಕಿರಿ ಉಂಟು ಮಾಡಬಹುದೆಂದು ಭಾವಿಸಿರುವ ಸ್ಥಳೀಯ ನಾಯಕರು, ದಿಲ್ಲಿಯ ಎಐಸಿಸಿ ಕಚೇರಿಯಲ್ಲಿ ಕೆಲಸ ಕೊಡುವಂತೆ ಸಲಹೆ ನೀಡಿದ್ದಾರೆಂದು ಹೇಳಲಾಗುತ್ತಿದೆ. ದಿಲ್ಲಿ ರಾಜಕಾರಣವನ್ನು ಚೆನ್ನಾಗಿ ಕರಗತ ಮಾಡಿಕೊಂಡಿರುವ ಹರಿಪ್ರಸಾದ್ ಅವರು ಈಗಾಗಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನು ಮತ್ತೆ ದಿಲ್ಲಿಗೆ ಶಿಫ್ಟ್ ಮಾಡುವ ಆಲೋಚನೆಯೂ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.