ಕೋವಿಡ್ ಇಳಿಮುಖ : ರಾಜ್ಯದಲ್ಲಿ 2ನೇ ಹಂತದ ಅನ್ ಲಾಕ್ ಘೋಷಣೆ ಮಾಡಿದ ಬಿ ಎಸ್ ವೈ
Team Udayavani, Jun 19, 2021, 7:10 PM IST
ಬೆಂಗಳೂರು : ಕೋವಿಡ್ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎರಡನೇ ಹಂತದ ಅನ್ ಲಾಕ್ ಘೋಷಣೆ ಮಾಡಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, 16 ಜಿಲ್ಲೆಗಳಲ್ಲಿ ಶೇಕಡಾ 5 ರಷ್ಟು ಪಾಸಿಟಿವಿಟಿ ದರ ಇರುವ ಕಾರಣದಿಂದಾಗಿ, ಆ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಉಳಿದಂತೆ 13 ಜಿಲ್ಲೆಗಳಲ್ಲಿ ಸೋಂಕಿನ ಪ್ರಕರಣಗಳು ಕಡಿಮೆಯಾಗದ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಯಲಿದೆ. ವಾರಾಂತ್ಯ ಕರ್ಫ್ಯೂ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.
ಬಿ ಎಸ್ ವೈ ಹೇಳಿದ ಪ್ರಮುಖ ಅಂಶಗಳು :
- ಸೋಮವಾರದಿಂದ ಮೆಟ್ರೋ ಸಂಚಾರ ಆರಂಭ
- ಮೆಟ್ರೋ ಗಳಲ್ಲಿ ಶೇಕಡಾ 50ರಷ್ಟು ಜನರ ಸಂಚಾರಕ್ಕೆ ಅವಕಾಶ
- ವಾರಾಂತ್ಯದ ಕರ್ಫ್ಯೂ ಮುಂದುವರಿಕೆ
- ಸೋಮವಾರದಿಂದ ರಾಜ್ಯಾದ್ಯಂತ ಜ್ಯುವೆಲ್ಲರಿ ಶಾಪ್ ಗಳನ್ನು ತೆರೆಯಲು ಅವಕಾಶ
- ಮಾಲ್ ಗಳು ತೆರೆಯಲು ಅವಕಾಶವಿಲ್ಲ
- ಸರ್ಕಾರಿ ಕಚೇರಿಗಳಲ್ಲಿ ಶೇಕಡಾ. 50 ರಷ್ಟು ಸಿಬ್ಬಂದಿಗಳಿಗೆ ಅವಕಾಶ
- ಸೋಮವಾರದಿಂದ ಹೋಟೇಲ್ ತೆರೆಯಲು ಅವಕಾಶ
- ಹೋಟೇಲ್ ಗಳಲ್ಲಿ ಶೇಕಡಾ 50 ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ
- ಪಾಸಿಟಿವಿಟಿ ಆಧಾರದ ಮೇಲೆ ನಿರ್ಬಂಧ ಸಡಿಲಿಕೆ
- ಬಸ್ ಸಂಚಾರಕ್ಕೆ ಅವಕಾಶ
- ಬಸ್ ಗಳಲ್ಲಿ ಶೇಕಡಾ. 50 ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ
- ಸಿನೆಮಾ ಮಂದಿರ ಹಾಗೂ ದೇವಾಲಯಗಳಲ್ಲಿ ನಿರ್ಬಂಧ ಮುಂದುವರಿಕೆ
- ಉತ್ತರ ಕನ್ನಡ ಜಿಲ್ಲೆ, ಬೆಳಗಾವಿ, ಮಂಡ್ಯ, ತುಮಕೂರು, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ಚಿಕ್ಕಬಳ್ಳಾಪುರ, ಗದಗ, ಬೆಂಗಳೂರು, ಕೋಲಾರ, ರಾಯಚೂರು, ಹಾವೇರಿ, ರಾಮನಗರ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಅನ್ ಲಾಕ್ ಘೋಷಣೆ ಮಾಡಲಾಗಿದೆ.
- ಉಳಿದ 13 ಜಿಲ್ಲೆಗಳಲ್ಲಿ ಹಾಲಿ ನಿರ್ಬಂಧಗಳು ಮುಂದುವರಿಕೆ
- ಶಾಪಿಂಗ್ ಕಾಂಪ್ಲೆಕ್ಸ್ ಗಳು ಮುಂದಿನ ಆದೇಶದ ತನಕ ತೆರೆಯುವಂತಿಲ್ಲ
- ಮಂದಿರ, ಚರ್ಚ್, ಮಸೀದಿಗಳು ತೆರೆಯುವುದಕ್ಕೆ ಅವಕಾಶವಿಲ್ಲ
- ಸೋಮವಾರದಿಂದ ಬಟ್ಟೆ ಅಂಗಡಿಗಳಿಗೆ ಬೆಳಗ್ಗೆ 6 ರಿಂದ ಸಂಜೆ 5 ಗಂಟೆಯ ತನಕ ತೆರೆಯಲು ಅವಕಾಶ
- ಶೇಕಡಾ 5ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಕಾರಣದಿಂದಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು ಸೇರಿ 13 ಜಿಲ್ಲೆಗಳಲ್ಲಿ ಈ ಹಿಂದಿನ ನಿರ್ಬಂಧಗಳು ಮುಂದುವರಿಕೆ
- ಶೇ 5 ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯ.
- ಲಾಡ್ಜ್ ಗಳಲ್ಲಿ ಮತ್ತು ರೆಸಾರ್ಟ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
- ಜಿಮ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ
- ಶೇ. 10 ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರಿಕೆ
ರಾಜ್ಯವ್ಯಾಪಿ ಅನ್ವಯವಾಗುವಂತೆ :
• ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಪ್ರತಿ ದಿನ ನೈಟ್ ಕರ್ಫ್ಯೂ .
• ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿ.
• ಬಸ್ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.