ಬಸವ ಅಂತರರಾಷ್ಟ್ರೀಯ ಮ್ಯೂಸಿಯಂ ನಿರ್ಮಾಣ ಚುರುಕುಗೊಳಿಸಲು ಮುಖ್ಯಮಂತ್ರಿ ಸೂಚನೆ
Team Udayavani, Jul 6, 2021, 5:26 PM IST
ಬೆಂಗಳೂರು : ಕೂಡಲಸಂಗಮದಲ್ಲಿ ಕೈಗೆತ್ತಿಕೊಂಡಿರುವ ದೆಹಲಿಯಲ್ಲಿರುವ ಶ್ರೀ ಸ್ವಾಮಿ ನಾರಾಯಣ ಅಕ್ಷರಧಾಮ ಮಾದರಿಯಲ್ಲಿ ಬಸವ ಅಂತರರಾಷ್ಟ್ರೀಯ ಮಟ್ಟದ ಮ್ಯೂಸಿಯಂ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಿ, ಮೊದಲ ಹಂತದ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು( ಮಂಗಳವಾರ, ಜುಲೈ 6) ಸೂಚಿಸಿದರು.
ಇದನ್ನೂ ಓದಿ : ಕೋವಿಡ್ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ: ಎಸ್.ಆರ್. ಪಾಟೀಲ
ಅವರು ಇಂದು ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಯೋಜನೆಯನ್ನು ಮೊದಲ ಹಂತದಲ್ಲಿ 94 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, ಶೀಘ್ರವೇ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಲಾಯಿತು.
ಎಂ.ಕೆ. ಹುಬ್ಬಳ್ಳಿಯಲ್ಲಿರುವ ಶರಣೆ ಗಂಗಾಂಬಿಕೆಯ ಐಕ್ಯ ಮಂಟಪದ ಹತ್ತಿರ ಮೂಲಸೌಕರ್ಯ ಅಭಿವೃದ್ಧಿಗೆ 1.25 ಕೋಟಿ ಅನುದಾನ ಮೀಸಲಿರಿಸಲು ತೀರ್ಮಾನಿಸಲಾಯಿತು.
ಪ್ರವಾಹದಿಂದ ಸಂಪೂರ್ಣ ಜಲಾವೃತಗೊಂಡ ಕೂಡಲಸಂಗಮ ಅಭಿವೃದ್ಧಿ ಮಂಡಳಿ ವ್ಯಾಪ್ತಿಯ 81 ಮಳಿಗೆಗಳ ಎರಡು ತಿಂಗಳ 2.97 ಲಕ್ಷ ರೂ. ಬಾಡಿಗೆ ಮನ್ನಾ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಆಹಾರ ಮತ್ತು ನಾಗರಿಕಪೂರೈಕೆ ಸಚಿವ ಉಮೇಶ್ ವಿ. ಕತ್ತಿ, ಬಾಗಲಕೋಟೆ ಜಿಲ್ಲೆಯ ಶಾಸಕರು ಉಪಸ್ಥಿತರಿದ್ದರು.
ಇದನ್ನೂ ಓದಿ : ಖಾಲಿ ಪಾತ್ರೆಗಳು ಬಹಳ ಶಬ್ದ ಮಾಡುತ್ತವೆ : ಯೋಗೀಶ್ವರ್-ಯತ್ನಾಳ್ ಗೆ ಡಿಕೆಶಿ ಟಾಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
MUST WATCH
ಹೊಸ ಸೇರ್ಪಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.