ಇನ್ನೂ ಹತ್ತು ವರ್ಷ ಸಕ್ರೀಯ ರಾಜಕೀಯದಲ್ಲಿ ಇರುತ್ತೇನೆ: ಯಡಿಯೂರಪ್ಪ
Team Udayavani, Jun 7, 2022, 7:06 PM IST
ವಿಜಯಪುರ: ರಾಜ್ಯದಲ್ಲಿ ಇನ್ನೂ ಹತ್ತು ವರ್ಷಗಳ ಕಾಲ ಬಿಜೆಪಿ ಪಕ್ಷದ ಬಲವರ್ಧನೆ ಹಾಗೂ ಪಕ್ಷದ ಸರ್ಕಾರ ರಚನೆಗಾಗಿ 90 ವರ್ಷ ವಯೋಮಾನದ ವರೆಗೂ ಸಕ್ರೀಯ ರಾಜಕೀಯದಲ್ಲಿ ಇರುತ್ತೇನೆ. ಹೀಗಾಗಿ ಪಕ್ಷದ ಕಾರ್ಯಕರ್ತರು ನನಗೆ 79 ವರ್ಷ ವಯಸ್ಸಾಯಿತು ಎಂದು ಆತಂಕ ಪಡುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಮಂಗಳವಾರ ನಗರದಲ್ಲಿ ವಾಯವ್ಯ ಶಿಕ್ಷಕರ ಹಾಗೂಉ ಪದವೀಧರ ಮೇಲ್ಮನೆ ಕ್ಷೇತ್ರದ ಅಭ್ಯರ್ಥಿಗಳ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾನು ಇನ್ನೂ 10 ವರ್ಷಗಳ ಕಾಲ ಸಕ್ರೀಯ ರಾಜಕೀಯದಲ್ಲಿ ಇರುತ್ತೇನೆ. ವಿಧಾನಸಭೆಗೆ ಮುಂದಿನ ವರ್ಷ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು 145 ವಿಧಾನಸಭೆ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ತರಲು ರಾಜ್ಯದಾದ್ಯಂತ ಸುತ್ತಲಿದ್ದೇನೆ ಎಂದು ಸಾರಿದರು.
ಇದನ್ನೂ ಓದಿ: ರಾಜಕೀಯ ವಿರೋಧಿ ಸಿದ್ಧರಾಮಯ್ಯ ಜತೆ ಮಾತನಾಡೋಕೇನಿದೆ: ಬಿಎಸ್‌ವೈ
ದೇಶದಲ್ಲಿ ಬಿಜೆಪಿ ಪಕ್ಷಕ್ಕೆ ಇರುವಷ್ಟು ಕಾರ್ಯಕರ್ತರ ಪಡೆ ಮತ್ಯಾವ ಪಕ್ಷಕ್ಕೂ ಇಲ್ಲ. ಹೀಗಾಗಿ ಬಿಜೆಪಿ ಪಕ್ಷದ ಬಗ್ಗೆ ಅನಗತ್ಯ ಟೀಕೆಗಳಲ್ಲಿ ತೊಡಗಿರುವ ಕಾಂಗ್ರೆಸ್ ನಾಯಕರಿಗೆ ಮೇಲ್ಮನೆ ಚುನಾವಣೆ ದಿನ ಬಿಜೆಪಿ ಶಕ್ತಿ ಏನೆಂದು ತೋರಿಸಲು ಪಕ್ಷದ ಕಾರ್ಯಕರ್ತರು ಶಿಕ್ಷಕರ-ಪದವೀಧರ ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲ್ಲಿಸುವ ಮೂಲಕ ಸೂಕ್ತ ಉತ್ತರ ನೀಡುವಂತೆ ಕರೆ ನೀಡಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ವಿಜುಗೌಡ ಪಾಟೀಲ ಸಾಕಷ್ಟು ಸಂಕಷ್ಟ ಅನುಭವಿಸಿದ್ದು, ಅವರಿಗೂ ಒಳ್ಳೆಯ ಕಾಲ ಬರುತ್ತೇ ಎಂದ ಯಡಿಯೂರಪ್ಪ, ವಿಜಯಪುರ ಭಾಗದಲ್ಲಿ ಪಕ್ಷದ ಹಿರಿಯ ನಾಯಕರಾದ ಸಂಸದ ರಮೇಶ ಜಿಗಜಿಣಗಿ ಅವರಂಥ ನಾಯಕ ಇರುವಾಗ ಪಕ್ಷದ ಅಭ್ಯರ್ಥಿಗಳಿಗೆ ಸೋಲು ಎಂಬುದೇ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಸಂಸದ ರಮೇಶ ಜಿಗಜಿಣಗಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಶಾಸಕ ರಮೇಶ ಭೂಸನೂರ, ಬೀಜ ಮತ್ತು ಸಾವಯುವ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ವಾಯವ್ಯ ಶಿಕ್ಷಕರ-ಪದವೀಧರ ಮೇಲ್ಮನೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾದ ಅರುಣ ಶಹಪುರ, ಹಣಮಂತ ನಿರಾಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
Road Mishaps: ಬೆಂಗಳೂರಿನಲ್ಲಿ ಬೈಕ್ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು
Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.